For Quick Alerts
ALLOW NOTIFICATIONS  
For Daily Alerts
 

Rohit Sharma: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಲು ರೋಹಿತ್ ಶರ್ಮಾಗೆ 4 ಸಿಕ್ಸರ್ ಅವಶ್ಯಕ

ಪರ್ತ್‌ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಎರಡನೇ ಮಗುವಿನ ಜನನದ ಕಾರಣ ಅವರು ಭಾರತದಲ್ಲಿ ತಮ್ಮ ಕುಟುಂಬದೊಂದಿಗೆ ಇದ್ದರು. ಹೀಗಾಗಿ ಅವರು ಪರ್ತ್ ಟೆಸ್ಟ್ ಆಡಲು ಸಾಧ್ಯವಾಗಿಲ್ಲಿ. ಇದೀಗ ಅಡಿಲೇಡ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯುವ ಸನಿಹಯಲಿದ್ದಾರೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್‌ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಗ್ಗೆ 9:30 ಗಂಟೆಗೆ ಪ್ರಾರಂಭವಾಗಲಿದೆ.
ಅಡಿಲೇಡ್ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಬಹುದು. ರೋಹಿತ್ ಶರ್ಮಾ ಈ ಸಾಧನೆ ಮಾಡುವು ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮಾಜಿ ಸ್ಪೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರನ್ನೂ ಹಿಂದಿಕ್ಕಬಹುದು.

IND vs AUS Rohit Sharma Needs 4 Sixes to Reach New Milestone in Test Cricket

4 ಸಿಕ್ಸರ್ ಅವಶ್ಯಕ

ಟೆಸ್ಟ್ ಕ್ರಿಕೆಟ್‌ನಲ್ಲಿ ವೀರೇಂದ್ರ ಸೆಹ್ವಾಗ್ 91 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ 88 ಸಿಕ್ಸರ್‌ಗಳನ್ನು ಗಳಿಸಿದ್ದಾರೆ. ಇದೀಗ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 4 ಸಿಕ್ಸರ್ ಬಾರಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಸಾಧನೆಯನ್ನು ರೋಹಿತ್ ಶರ್ಮಾ ಮಾಡಲು ಹೆಚ್ಚು ಸಮಯ ಬೇಕಿಲ್ಲ. ಏಕೆಂದರೆ ಅವರು ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

ಬ್ಯಾಟಿಂಗ್ ಕ್ರಮಾಂಕ ಚೇಂಜ್‌?

ಪರ್ತ್ ಟೆಸ್ಟ್‌ನಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದ್ದರು. ಆಸ್ಟ್ರೇಲಿಯಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಮಂಕಾಗಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ದಾಖಲೆಯ ಜೊತೆಯಾಟ ಆಡುವ ಮೂಲಕ ಆಸೀಸ್ ಬೌಲರ್‌ಗಳಿಗೆ ಬೆವರಿಳಿಸಿದ್ದರು. ಇದೀಗ ರೋಹಿತ್ ಶರ್ಮಾ ಅಡಿಲೇಡ್ ಟೆಸ್ಟ್ ಆಡುಲಿದ್ದು, ಇಂತಹ ಸಂದರ್ಭದಲ್ಲಿ ಆರಂಭಿಕರಾಗಿ ಮತ್ತೊಮ್ಮೆ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.

ಮತ್ತೊಂದೆಡೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶುಭಮನ್ ಗಿಲ್ ಕೂಡ ಅಡಿಲೇಡ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನ ಎನ್ನಲಾಗುತ್ತಿದೆ. ರೋಹಿತ್ ಮತ್ತು ಜೈಸ್ವಾಲ್ ಆರಂಭಿಕರಾಗಿ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸಿದರೆ, ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಇಂತಹ ಸಂದರ್ಭದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಿಂದ ಹೊರಗುಳಿಬಹುದು.

Story first published: Friday, November 29, 2024, 13:02 [IST]
Other articles published on Nov 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+