For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ ತಂಡಕ್ಕೆ ಸೇರಿಕೊಳ್ಳಲಿದ್ದಾರಾ ಅಶ್ವಿನ್: ಕುತೂಹಲ ಮೂಡಿಸಿದ ರೋಹಿತ್ ಹೇಳಿಕೆ

ವಿಶ್ವಕಪ್‌ಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ ಮಹತ್ವದ ಟೂರ್ನಿಗೂ ಮುನ್ನ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಇದೀಗ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಲಾಗಿದೆ. ಈ ತಂಡದಲ್ಲಿ ಅನುಭವಿ ಆಟಗಾರ ಆರ್ ಅಶ್ವಿನ್‌ಗೆ ಸ್ಥಾನ ದೊರೆಯುವ ಮೂಲಕ ಕುತೂಹಲ ಮೂಡಿಸಿದೆ. ವಿಶ್ವಕಪ್ ತಂಡದಲ್ಲಿಲ್ಲದಿದ್ದರೂ ಅಶ್ವಿನ್‌ಗೆ ಅವಕಾಶ ದೊರೆತಿರುವುದು ವಿಶ್ವಕಪ್ ತಂಡದಲ್ಲಿ ಬದಲಾವಣೆಗಳಾಗಲಿದೆಯೇ ಎನ್ನುವ ಕುತೂಹಲ ಮೂಡಲು ಕಾರಣವಾಗಿದೆ.

ಇದಕ್ಕೆ ಪೂರಕವಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಹೇಳಿಕೆ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಸರಣಿ ಅನುಭವಿ ಆಟಗಾರ ಆರ್ ಅಶ್ವಿನ್ ತಂಡದಲ್ಲಿ ಎಲ್ಲಿ ಫಿಟ್ ಆಗಲಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಲಿದೆ ಎಂದಿದ್ದಾರೆ ನಾಯಕ ರೋಹಿತ್ ಶರ್ಮಾ. ಹೀಗಾಗಿ ಅನುಭವಿ ಅಶ್ವಿನ್ ಭಾರತ ತಂಡಕ್ಕೆ ಕೊನೆಯ ಕ್ಷಣದಲ್ಲಿ ಸೇರ್ಪಡೆಯಾಗಲಿದ್ದಾರೆಉಏ ಎನ್ನುವ ಕುತೂಹಲ ಮೂಡಲು ಕಾರಣವಾಗಿದ್ದಾರೆ.

IND vs AUS: Rohit Sharma reaction on R Ashwin said his inclusion will give chance to see where he is fit

ಆರ್ ಅಶ್ವಿನ್ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳದಿದ್ದಾಗ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅನುಭವಿ ಆಟಗಾರನನ್ನು ಈ ತಂಡದಲ್ಲಿ ಸೇರ್ಪಡೆಗೊಳಿಸದಿರುವ ಬಗ್ಗೆ ಸಾಕಲಷ್ಟು ಟೀಕೆಗಳೂ ಕೇಳಿ ಬಂದಿದ್ದವು. ಅನೇಕ ದಿಗ್ಗಜರು ಕೂಡ ಈ ವಿಚಾರವಾಗಿ ಆಶ್ಚರ್ಯ ವ್ಯಕ್ತಪಡಿಸಿದ್ದರು. ಇದೀಗ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ಆದರೆ ಇದಕ್ಕೆ ಆರ್ ಅಶ್ವಿನ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ತಮ್ಮ ಪ್ರದರ್‍ಯಶನದ ಮೂಲಕ ಯಾವ ರೀತಿಯಲ್ಲಿ ಉತ್ತರ ನೀಡಲಿದ್ದಾರೆ ಎನ್ನುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಆದರೆ ಅಂತಿಮ ಪಂದ್ಯಕ್ಕೆ ಈ ಆಟಗಾರರು ಲಭ್ಯವಾಗಲಿದ್ದು ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಸರಣಿಯ ಕೊನೆಯ ಪಂದ್ಯವನ್ನು ಭಾರತ ಆಡಲಿದೆ.

ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಅಂತಿಮ ಏಕದಿನ ಪಂದ್ಯಕ್ಕೆ ಟೀಮ್ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್

Story first published: Monday, September 18, 2023, 23:51 [IST]
Other articles published on Sep 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+