ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್

Ind vs Aus: Rohit Sharma squad take week off on Sunday start training at VCA Stadium from Monday

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೆಗಾ ಹಣಾಹಣಿ ಆರಂಭಕ್ಕೆ ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಟೀಮ್ ಇಂಡಿಯಾ ಈ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ಕಠಿಣ ಅಭ್ಯಾಸವನ್ನು ನಡೆಸುತ್ತಿದ್ದಾರೆ. ಆದರೆ ಭಾನುವಾರ ಭಾರತ ತಂಡದ ಆಟಗಾರರ ಅಭ್ಯಾಸಕ್ಕೆ ಕೋಚ್ ದ್ರಾವಿಡ್ ವಿರಾಮ ನೀಡಿದ್ದರು. ಹೀಗಾಗಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸ ಸೋಮವಾರದಿಂದ ಮತ್ತೆ ಆರಂಭವಾಗಲಿದೆ.

ಭಾರತ ತಂಡ ಸೋಮವಾರದಿಂದ ಜಾಮ್ತಾದಲ್ಲಿರುವ ಹೊಸ ವಿಸಿಎ ಸ್ಟೇಡಿಯಂಗೆ ತೆರಳಲಿದ್ದು ಮೊದಲ ಟೆಸ್ಟ್ ಪಂದ್ಯಕ್ಕೆ ಅಭ್ಯಾಸ ನಡೆಸಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆಯನೇಕಿದ್ದರೆ ಭಾರತ ಈ ಟೆಸ್ಟ್ ಸರಣಿಯನ್ನು ಗೆಲ್ಲಬೇಕಾದ ಅನಿವಾರ್ಯತೆಯಿದೆ.

Ind Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾInd Vs Aus Test: ಟೆಸ್ಟ್ ಸರಣಿಗೆ ಈ ರೀತಿ ಪಿಚ್ ಬೇಕು ಎಂದು ಕ್ಯುರೇಟರ್‌ಗಳಿಗೆ ಮನವಿ ಮಾಡಿದ ದ್ರಾವಿಡ್ ಮತ್ತು ರೋಹಿತ್ ಶರ್ಮಾ

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಆಡು ಸಾಧ್ಯತೆ ಹೆಚ್ಚಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ 75.56 ಶೇಕಡಾ ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಈ ಎರಡು ತಂಡಗಳು ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.

ಟೆಸ್ಟ್ ಸರಣಿಯ ಆರಂಭಕ್ಕೆ ಕ್ಷಣಗಣನೆ: ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆಯಲಿದ್ದು ಅದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಆಯೋಜನೆಯಾದರೆ ಅಂತಿಮ ಟೆಸ್ಟ್ ಪಂದ್ ಅಹ್ಮದಾಬಾದ್‌ನಲ್ಲಿ ನಡೆಯಲಿದೆ

ಗೆದ್ದ ಜಯ್ ಶಾ ಹಠ, ಪಾಕ್‌ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರಗೆದ್ದ ಜಯ್ ಶಾ ಹಠ, ಪಾಕ್‌ಗೆ ಹಿನ್ನೆಡೆ; ತಟಸ್ಥ ಸ್ಥಳದಲ್ಲಿ 2023ರ ಏಷ್ಯಾಕಪ್ ಆಯೋಜಿಸಲು ನಿರ್ಧಾರ

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

Story first published: Monday, February 6, 2023, 5:35 [IST]
Other articles published on Feb 6, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X