ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಅಲ್ಲ, ರೋಹಿತ್ ಅಲ್ಲ; ಈತ ಭಾರತದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದ ಆರ್ ಅಶ್ವಿನ್

IND vs AUS: Shreyas Iyer Is The Backbone Of Indias Batting Order Says Ravichandran Ashwin Praises

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ಇದೇ ಫೆಬ್ರವರಿ 9ರಿಂದ ಆರಂಭವಾಗಲಿದೆ. ಮೊದಲ ಪಂದ್ಯಕ್ಕೆ ನಾಗ್ಪುರ ಆತಿಥ್ಯ ವಹಿಸಲಿದೆ.

ರೋಹಿತ್ ಶರ್ಮಾ ಆತಿಥೇಯ ಭಾರತ ತಂಡ ಈಗಾಗಲೇ ನಾಗ್ಪುರದಲ್ಲಿ ಅಭ್ಯಾಸ ನಡೆಸುತ್ತಿದ್ದರೆ, ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಪ್ರವಾಸಿ ಆಸ್ಟ್ರೇಲಿಯಾ ತಂಡ ಬೆಂಗಳೂರು ಸಮೀಪದ ಆಲೂರು ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ.

Border-Gavaskar Trophy: ಭಾರತ vs ಆಸ್ಟ್ರೇಲಿಯಾ ಪೂರ್ಣ ತಂಡಗಳು, ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರBorder-Gavaskar Trophy: ಭಾರತ vs ಆಸ್ಟ್ರೇಲಿಯಾ ಪೂರ್ಣ ತಂಡಗಳು, ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಭಾರತ ತಂಡ ಸತತ ಮೂರು ಬಾರಿ ಟ್ರೋಫಿ ಗೆದ್ದಿದ್ದು, ಅದರಲ್ಲಿ ಎರಡು ಬಾರಿ ಆಸ್ಟ್ರೇಲಿಯಾ ನೆಲದಲ್ಲಿ ಎನ್ನುವುದು ಮತ್ತೊಂದು ವಿಶೇಷವಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ ಉಳಿಸಿಕೊಳ್ಳಲು ಅಸೀಸ್ ವಿರುದ್ಧ ಸೆಣಸಾಡಲಿದೆ.

ಭಾರತ ತಂಡದ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸಹ ಆಟಗಾರ ಶ್ರೇಯಸ್ ಅಯ್ಯರ್‌ಗೆ ಅಭಿನಂದನೆ ಸಲ್ಲಿಸಿದ್ದು, 28 ವರ್ಷದ ಆಟಗಾರ ಶ್ರೇಯಸ್ ಅಯ್ಯರ್‌ ಭಾರತ ಟೆಸ್ಟ್ ತಂಡದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಕಳೆದ ವರ್ಷ ಪಂದ್ಯದ ಟೆಸ್ಟ್ ಸ್ವರೂಪದಲ್ಲಿ 422 ರನ್

ಕಳೆದ ವರ್ಷ ಪಂದ್ಯದ ಟೆಸ್ಟ್ ಸ್ವರೂಪದಲ್ಲಿ 422 ರನ್

ಶ್ರೇಯಸ್ ಅಯ್ಯರ್‌ ಕಳೆದ ವರ್ಷ ಪಂದ್ಯದ ಟೆಸ್ಟ್ ಸ್ವರೂಪದಲ್ಲಿ 422 ರನ್ ಗಳಿಸಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. 680 ರನ್ ಗಳಿಸಿದ್ದ ರಿಷಭ್ ಪಂತ್ ಮೊದಲ ಸ್ಥಾನದಲ್ಲಿದ್ದರು.

ಶ್ರೇಯಸ್ ಅಯ್ಯರ್‌ 2022ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 50 ಓವರ್‌ಗಳ ಸ್ವರೂಪದಲ್ಲಿ 724 ರನ್ ಗಳಿಸಿದ್ದ ಅಯ್ಯರ್, ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಜೊತೆಗೆ 2022ರ ಐಸಿಸಿ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ಸಹಾಯ ಮಾಡಿತು.

ಶ್ರೇಯಸ್ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್

ಶ್ರೇಯಸ್ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್

ಇನ್ನು ಕಳೆದ ಡಿಸೆಂಬರ್‌ನಲ್ಲಿ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಿಷಭ್ ಪಂತ್ ಸುದೀರ್ಘ ಕಾಲದವರೆಗೆ ಕ್ರಿಕೆಟ್‌ನಿಂದ ಹೊರಗುಳಿಯಲಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ರವಿಚಂದ್ರನ್ ಅಶ್ವಿನ್, "ಕಳೆದ ಎರಡು ವರ್ಷಗಳಲ್ಲಿ ವಿಕೆಟ್‌ಕೀಪರ್- ಬ್ಯಾಟರ್ ರಿಷಭ್ ಪಂತ್ ಜೊತೆಗೆ ಶ್ರೇಯಸ್ ಅಯ್ಯರ್ ಭಾರತದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿದ್ದಾರೆ," ಎಂದು ಹೇಳಿದರು.

ಶ್ರೇಯಸ್ ಅಯ್ಯರ್ ಭಾರತೀಯ ಟೆಸ್ಟ್ ತಂಡದ ಬ್ಯಾಟಿಂಗ್ ಕ್ರಮಾಂಕದ ಬೆನ್ನೆಲುಬು ಎಂದು ಶ್ಲಾಘಿಸಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ನಿರ್ಣಾಯಕ ಆಟಗಾರರಾಗಲಿದ್ದಾರೆ ಎಂದು ಹೇಳಿದರು.

ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಆಡಲ್ಲ

ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಆಡಲ್ಲ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೂ ಮುನ್ನ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಭಾರತ ತಂಡವು ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರ ಸೇವೆ ಕಳೆದುಕೊಳ್ಳಲಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸಮಯದಲ್ಲಿ ಬೆನ್ನು ನೋವು ಕಾಣಿಸಿಕೊಂಡ ಕಾರಣ, ಆ ಸರಣಿಯಿಂದಲೂ ಹೊರಬಿದ್ದಿದ್ದರು. ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇದೇ ವೇಳೆ, ಶ್ರೇಯಸ್ ಅಯ್ಯರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಲಗೈ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಬೆನ್ನು ನೋವಿಗೆ ಇಂಜೆಕ್ಷನ್ ಶ್ರೇಯಸ್ ಅಯ್ಯರ್ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

Story first published: Saturday, February 4, 2023, 14:40 [IST]
Other articles published on Feb 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X