
30 ವರ್ಷ ವಯಸ್ಸಿನ ನಂತರ ಮೂರು ಸ್ವರೂಪದ ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶ
ಈ ಮೂಲಕ ಸೂರ್ಯಕುಮಾರ್ ಯಾದವ್ ಕ್ರಿಕೆಟ್ ಇತಿಹಾಸದಲ್ಲಿ 30 ವರ್ಷ ವಯಸ್ಸಿನ ನಂತರ ಎಲ್ಲಾ ಮೂರು ಸ್ವರೂಪದ ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶ ಮಾಡಿದ ಮೊದಲ ಭಾರತೀಯ ಆಟಗಾರನಾದರು.
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಗಾಧ ಅನುಭವ ಹೊಂದಿರುವ ಸೂರ್ಯಕುಮಾರ್ ಯಾದವ್, 79 ಪ್ರಥಮ ದರ್ಜೆ ಪಂದ್ಯಗಳಲ್ಲಿ 5549 ರನ್ ಗಳಿಸಿದ್ದಾರೆ. ಆದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಯೋಜನೆಯ ಭಾಗವಾಗಿರಲಿಲ್ಲ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಲ್ಲದೆ, ಫೆಬ್ರವರಿ 9ರಂದು ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ಪದಾರ್ಪಣೆ
ಚೊಚ್ಚಲ ಟಿ20 ಕ್ರಿಕೆಟ್: 30 ವರ್ಷ ಮತ್ತು 6 ತಿಂಗಳು
ಚೊಚ್ಚಲ ಏಕದಿನ ಕ್ರಿಕೆಟ್: 30 ವರ್ಷ, 10 ತಿಂಗಳು ಮತ್ತು 4 ದಿನಗಳು
ಚೊಚ್ಚಲ ಟೆಸ್ಟ್ ಕ್ರಿಕೆಟ್: 32 ವರ್ಷ, 4 ತಿಂಗಳು ಮತ್ತು 26 ದಿನಗಳು
ಮುಂಬೈ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಉತ್ತಮವಾಗಿ ಆಡುತ್ತಿದ್ದರೂ, ಅವರ ಅಸ್ಥಿರತೆಯ ಕಾರಣದಿಂದಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿರಲಿಲ್ಲ. ಕಳೆದೆರಡು ವರ್ಷಗಳಲ್ಲಿ 32 ವರ್ಷ ವಯಸ್ಸಿನ ಬಲಗೈ ಬ್ಯಾಟ್ಸ್‌ಮನ್ ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ಆಟಗಾರನಾಗಿದ್ದಾರೆ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ.

ಸೂರ್ಯಕುಮಾರ್‌ಗೆ ತಮ್ಮ ಸ್ವಾಭಾವಿಕ ಆಟವನ್ನು ಆಡುವ ಸ್ವಾತಂತ್ರ್ಯ
ಗಾಯಾಳು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಆಕ್ರಮಣಕಾರಿ ಆಟದ ಮೂಲಕ ವೇಗವಾಗಿ ರನ್ ಗಳಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸೂರ್ಯಕುಮಾರ್‌ಗೆ ತಮ್ಮ ಸ್ವಾಭಾವಿಕ ಆಟವನ್ನು ಆಡುವ ಸ್ವಾತಂತ್ರ್ಯ ನೀಡಲಾಗಿದೆ. ಹೀಗಾಗಿ ಆಸ್ಟ್ರೇಲಿಯಾದ ಬಲಿಷ್ಠ ಬೌಲಿಂಗ್ ದಾಳಿಯನ್ನು ಎದುರಿಸಲು ಯಶಸ್ವಿಯಾದರೆ, ಭಾರತ ತಂಡ ಬೃಹತ್ ಮೊತ್ತ ಕಲೆಹಾಕುವುದರಲ್ಲಿ ಎರಡು ಮಾತಿಲ್ಲ.
ಇದೇ ವೇಳೆ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಕೆಎಸ್ ಭರತ್ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟೆಸ್ಟ್ ಕ್ಯಾಪ್ ಧರಿಸುತ್ತಿರುವ 305ನೇ ಭಾರತೀಯ ಆಟಗಾರನಾದರು.
ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಕೆಎಸ್ ಭರತ್ 86 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ ಮತ್ತು 37.95 ಸರಾಸರಿಯಲ್ಲಿ 4707 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಅಗತ್ಯ ಆಟಗಾರನಾಗಿದ್ದು, ವಿಶೇಷವಾಗಿ ತವರಿನ ಪರಿಸ್ಥಿತಿಗಳಲ್ಲಿ ಉತ್ತಮವಾಗಿ ಆಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications
