ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs AUS 1st T20I highlights ಗ್ರೀನ್, ವೇಡ್ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ

ಮೊಹಾಲಿಯಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಭಾರತ ನೀಡಿದ 209ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ನಾಯಕ ಆರನ್ ಫಿಂಚ್‌, ಕ್ಯಾಮರೂನ್ ಗ್ರೀನ್ ಸ್ಫೋಟಕ ಆರಂಭ ನೀಡಿದರು. ಸಿಕ್ಸರ್ ಬಾರಿಸುವ ಮೂಲಕ ಇನ್ನಿಂಗ್ಸ್ ಆರಂಭಿಸಿದ ಆರನ್ ಫಿಂಚ್‌ ಭಾರತಕ್ಕೆ ಶಾಕ್ ನೀಡಿದರು.

ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ಕ್ಯಾಮರೂನ್ ಗ್ರೀನ್ ಭಾರತದ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. ಅಂತಿಮವಾಗಿ ಟಿಮ್‌ ಡೇವಿಡ್ ಮತ್ತು ಮ್ಯಾಥ್ಯೂ ವೇಡ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ಬೃಹತ್ ಮೊತ್ತದ ಗುರಿಯನ್ನು ಸುಲಭವಾಗಿ ತಲುಪಿತು.

T20 World Cup 2022: ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ, ಅಂಕಿಅಂಶT20 World Cup 2022: ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ, ಅಂಕಿಅಂಶ

ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೊನ್ ಫಿಂಚ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದರು. ಬ್ಯಾಟಿಂಗ್‌ಗೆ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತು. 9 ಎಸೆತಗಳಲ್ಲಿ 11 ರನ್ ಗಳಿಸಿದ ನಾಯಕ ರೋಹಿತ್ ಶರ್ಮಾ ಹೇಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಆದರೆ, ಕೆಎಲ್‌ ರಾಹುಲ್ ಭರ್ಜರಿ ಅರ್ಧಶತಕ, ಸೂರ್ಯಕುಮಾರ್ ಯಾದವ್ ಸ್ಫೋಟಕ ಆಟ ಮತ್ತು ಅಂತಿಮ ಓವರ್ ಗಳಲ್ಲಿ ಪಾಂಡ್ಯ ಪವರ್ ಫುಲ್ ಅರ್ಧಶತಕದ ನೆರವಿನಿಂದ ಭಾರತ 208 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಆಸ್ಟ್ರೇಲಿಯಾ ಪರವಾಗಿ ಜೋಶ್ ಹೇಜಲ್‌ವುಡ್ 4 ಓವರ್ ಗಳಲ್ಲಿ 39 ರನ್ ನೀಡಿ 2 ವಿಕೆಟ್ ಪಡೆದರು. ನಥಾನ್ ಎಲ್ಲಿಸ್ 4 ಓವರ್ ಗಳಲ್ಲಿ ರನ್ ನೀಡಿ 3 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಬ್ಯಾಟರ್ ಗಳ ಆರ್ಭಟ

ಆಸ್ಟ್ರೇಲಿಯಾ ಬ್ಯಾಟರ್ ಗಳ ಆರ್ಭಟ

209ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಲಿಷ್ಠ ಆಸ್ಟ್ರೇಲಿಯಾ ಪಡೆ ಉತ್ತಮ ಆರಂಭ ಪಡೆಯಿತು. ನಾಯಕ ಆರನ್ ಫಿಂಚ್ ಮತ್ತು ಕ್ಯಾಮರೂನ್ ಗ್ರೀನ್ ಬೌಂಡರಿ ಮೂಲಕ ರನ್ ಖಾತೆ ತೆರೆದರು. ಇನ್ನಿಂಗ್ಸ್‌ನ ಮೊದಲನೇ ಬಾಲ್‌ ಅನ್ನು ಸಿಕ್ಸರ್ ಸಿಡಿಸುವ ಮೂಲಕ ಫಿಂಚ್ ಖಾತೆ ತೆರೆದರೆ, ಎರಡನೇ ಓವರ್ ನಲ್ಲಿ ಉಮೇಶ್ ಯಾದವ್‌ಗೆ ಕ್ಯಾಮೆರೂನ್ ಗ್ರೀನ್ ಸತತ ನಾಲ್ಕು ಬೌಂಡರಿ ಹೊಡೆದರು.

13 ಎಸೆತಗಳಲ್ಲಿ 22 ರನ್ ಗಳಿಸಿದ ಪಿಂಚ್ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಕ್ಲೀನ್ ಬೋಲ್ಡ್ ಆದರು, ನಂತರ ಬಂದ ಸ್ಟೀವ್ ಸ್ಮಿತ್, ಗ್ರೀನ್ ಜೊತೆಗೂಡಿ ಉತ್ತಮ ಆಟವಾಡಿದರು. ಒಂದೆಡೆ ಸ್ಮಿತ್ ಎಚ್ಚರಿಕೆಯ ಆಟವಾಡುತ್ತಿದ್ದರೆ ಮತ್ತೊಂದೆಡೆ ಕ್ರಿಸ್ ಗ್ರೀನ್ ಬೌಂಡರಿಗಳನ್ನು ಚಚ್ಚಿದರು. 30 ಎಸೆತಗಳಲ್ಲಿ 61 ರನ್ ಗಳಿಸಿದ ಗ್ರೀನ್ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

IND vs AUS 1st T20: ಆಸ್ಟ್ರೇಲಿಯ ವಿರುದ್ಧ ಸೋಲು; ಕೊಹ್ಲಿಯ ಶಾಟ್ ಆಯ್ಕೆ ಬಗ್ಗೆ ಮಾಜಿ ಕೋಚ್ ಗರಂ!

ಜಯ ತಂದುಕೊಟ್ಟ ಮ್ಯಾಥ್ಯೂ ವೇಡ್

ಜಯ ತಂದುಕೊಟ್ಟ ಮ್ಯಾಥ್ಯೂ ವೇಡ್

ಕ್ಯಾಮೆರೂನ್ ಗ್ರೀನ್ ಔಟ್ ಆಗುತ್ತಿದ್ದಂತೆ ಆಸ್ಟ್ರೇಲಿಯಾ ದಿಢೀರ್ ಕುಸಿತ ಕಂಡಿತು. 14 ರನ್ ಅಂತರದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಆಗ ಕ್ರೀಸ್‌ಗೆ ಬಂದ ಟಿಮ್‌ ಡೇವಿಡ್ ಮತ್ತು ಮ್ಯಾಥ್ಯೂ ವೇಡ್ ಆಸ್ಟ್ರೇಲಿಯಾ ಸೋಲಿನ ಭಯ ದೂರಾಗಿಸಿದರು.

ಟಿಮ್‌ ಡೇವಿಡ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರೆ, ಮ್ಯಾಥ್ಯೂ ವೇಡ್ ಮಾತ್ರ ಸಿಕ್ಸರ್, ಬೌಂಡರಿ ಬಾರಿಸಿದರು. 21 ಎಸೆತಗಳಲ್ಲಿ 6 ಬೌಂಡರಿ, 2 ಭರ್ಜರಿ ಸಿಡಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆಸ್ಟ್ರೇಲಿಯಾ ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿತು.

 ಫಾರ್ಮ್‌ಗೆ ಮರಳಿದ ಕೆ.ಎಲ್‌. ರಾಹುಲ್‌

ಫಾರ್ಮ್‌ಗೆ ಮರಳಿದ ಕೆ.ಎಲ್‌. ರಾಹುಲ್‌


ಆರಂಭಿಕ ಆಘಾತ ಅನುಭವಿಸಿದ ಟೀಂ ಇಂಡಿಯಾಗೆ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಸರೆಯಾದರು. ನಾಲ್ಕನೇ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 65 ರನ್‌ ಕಲೆಹಾಕಿತು. ಕಳಪೆ ಫಾರ್ಮ್‌ಗಾಗಿ ಟೀಕೆಗೆ ಗುರಿಯಾಗಿದ್ದ ಕೆ.ಎಲ್‌. ರಾಹುಲ್ ಭರ್ಜರಿಯಾಗ ಬ್ಯಾಟ್ ಮಾಡಿದರು.

35 ಎಸೆತಗಳಲ್ಲಿ 4 ಬೌಂಡರಿ ಭರ್ಜರಿ ಸಿಕ್ಸರ್ ಸಿಡಿಸಿದ ಕೆ ಎಲ್‌ ರಾಹುಲ್‌ 55 ರನ್ ಗಳಿಸುವ ಮೂಲಕ ತಮ್ಮ 18ನೇ ಟಿ20 ಅಂತಾರಾಷ್ಟ್ರೀಯ ಅರ್ಧಶತಕ ಪೂರೈಸಿದರು. ಇದೇ ವೇಳೆ ಟಿ20 ಮಾದರಿ ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದರು. 62 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ಕೆ.ಎಲ್ ರಾಹುಲ್ 141.31 ಸ್ಟ್ರೈಕ್‌ ರೇಟ್‌ನಲ್ಲಿ 39.57 ಸರಾಸರಿಯಲ್ಲಿ ಈವರೆಗೆ 2018 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಕೂಡ ಸೇರಿದೆ.

ಅಂತಿಮ ಓವರ್ ಗಳಲ್ಲಿ ಅಬ್ಬರಿಸಿದ ಹಾರ್ದಿಕ್

ಅಂತಿಮ ಓವರ್ ಗಳಲ್ಲಿ ಅಬ್ಬರಿಸಿದ ಹಾರ್ದಿಕ್

ಅಂತಿಮ ಓವರ್ ಗಳಲ್ಲಿ ಅಕ್ಷರಶಃ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ಬೌಲರ್ ಗಳ ಬೆವರಿಳಿಸಿದರು. ತಾವು ಎದುರಿಸಿದ 30 ಎಸೆತಗಳಲ್ಲಿ 7 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 71 ರನ್ ಗಳಿಸಿದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಎರಡನೇ ಅರ್ಧಶತಕವಾಗಿದೆ.

ಕೊನೆಯ ಮೂರು ಬಾಲ್‌ಗಳನ್ನು ಸತತವಾಗಿ ಸಿಕ್ಸರ್ ಸಿಡಿಸಿದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಮೊತ್ತ 200 ರನ್ ಗಡಿ ದಾಟಿಸಿದರು.

Story first published: Wednesday, September 21, 2022, 8:52 [IST]
Other articles published on Sep 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X