Ind vs Aus T20: 2 ರನ್‌ ಗಳಿಸಿ ಔಟ್ ಆದ ವಿರಾಟ್ ಕೊಹ್ಲಿ ವಿರುದ್ಧ ಅಭಿಮಾನಿಗಳ ಟೀಕೆ

ಸೆಪ್ಟೆಂಬರ್ 20, ಮಂಗಳವಾರ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 2 ರನ್ ಗಳಿಸುವ ಮೂಲಕ ಮತ್ತೆ ನಿರಾಸೆ ಅನುಭವಿಸಿದರು.

ಟಾಸ್ ಗೆದ್ದ ಆಸೀಸ್ ನಾಯಕ ಆರನ್ ಫಿಂಚ್ ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಕೇಳಿಕೊಂಡರು. ಭಾರತ ತಂಡವು ತಮ್ಮ ನಾಯಕ ರೋಹಿತ್ ಶರ್ಮಾ 9 ಎಸೆತಗಳಲ್ಲಿ 11 ರನ್ ಗಳಿಸಿ ಔಟಾದರು. ನಂತರ ವಿರಾಟ್ ಕೊಹ್ಲಿ ಬ್ಯಾಟಿಂಗ್‌ ಬಂದರು, ಕೊಹ್ಲಿ ಕ್ರೀಸ್‌ಗೆ ಬರುತ್ತಿದ್ದಂತೆ ಆಸ್ಟ್ರೇಲಿಯಾ ಆಡಂ ಜಂಪಾರನ್ನು ಬೌಲಿಂಗ್‌ಗೆ ಇಳಿಸಿದರು. ಜಂಪಾ ವಿರುದ್ಧ ರನ್ ಗಳಿಸಲು ವಿರಾಟ್ ಕೊಹ್ಲಿ ಪರದಾಡಿದರು.

Ind Vs Aus T20: ಗ್ರೀನ್, ವೇಡ್ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾInd Vs Aus T20: ಗ್ರೀನ್, ವೇಡ್ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ

ಐದನೇ ಓವರ್‌ನಲ್ಲಿ ಕೊಹ್ಲಿ ನಾಥನ್ ಎಲ್ಲಿಸ್ ಬೌಲಿಂಗ್‌ನಲ್ಲಿ ರನ್ ಗಳಿಸುವ ಭರದಲ್ಲಿ ಕ್ಯಾಮರೂನ್ ಗ್ರೀನ್‌ಗೆ ಕ್ಯಾಚ್‌ ನೀಡಿ ಔಟಾದರು. ಏಳು ಎಸೆತಗಳಲ್ಲಿ ಕೇವಲ ಎರಡು ರನ್ ಗಳಿಸಿದ ಕೊಹ್ಲಿ ಔಟಾಗುವುದನ್ನು ಕಂಡು ಅಭಿಮಾನಿಗಳು ನಿರಾಸೆಗೊಂಡರು.

ಕೊಹ್ಲಿ ವಿರುದ್ಧ ಅಭಿಮಾನಿಗಳ ಟೀಕೆ

ಅಫ್ಘಾನಿಸ್ತಾನದ ವಿರುದ್ಧ ಶತಕ ಗಳಿಸಿದ್ದ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ಅನ್ನು ಮುಂದುವರೆಸುವ ಬಗ್ಗೆ ಅಪಾರ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಪಂದ್ಯದಲ್ಲೇ 2 ರನ್‌ಗೆ ಔಟಾಗಿರುವುದಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಲವರು ಕೊಹ್ಲಿಯನ್ನು ಟೀಕಿಸಿದ್ದಾರೆ.

ಟ್ವಿಟರ್ ನಲ್ಲಿ ವಿರಾಟ್ ಕೊಹ್ಲಿ ಔಟ್ ಆದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಳಕೆದಾರರೊಬ್ಬರು, ವಿರಾಟ್ ಕೊಹ್ಲಿ ಔಟಾಗಿದ್ದು ಸಮಸ್ಯೆಯಲ್ಲ, ಆದರೆ ಅವರು ಅಷ್ಟು ಸುಲಭವಾಗಿ ತಮ್ಮ ವಿಕೆಟ್ ಒಪ್ಪಿಸುವುದು ಮಾತ್ರ ಸಹಿಸಿಕೊಳ್ಳಲಾಗದು ಎಂದು ಹೇಳಿದ್ದಾರೆ.

ಮತ್ತೊಬ್ಬ ಟ್ವಿಟರ್ ಬಳಕೆದಾರರು, "ವಿರಾಟ್ ಕೊಹ್ಲಿ ಕೇವಲ 98 ರನ್‌ಗಳಿಂದ ತಮ್ಮ ಶತಕವನ್ನು ತಪ್ಪಿಸಿಕೊಂಡಿದ್ದಾರೆ" ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ಟ್ವಿಟರ್ ಬಳಕೆದಾರ, "ವಿರಾಟ್ ಕೊಹ್ಲಿ ಕ್ರಿಕೆಟ್ ಹೊರತಾಗಿ ಬೇರೆ ಏನನ್ನಾದರೂ ಮಾಡಲು ಆರಂಭಿಸಲಿ. ಅವರು ಕ್ರಿಕೆಟ್ ತೊರೆಯುವ ಮೂಲಕ ತಮ್ಮ ಸ್ಥಾನವನ್ನು ಯುವ ಆಟಗಾರರಿಗೆ ಬಿಟ್ಟುಕೊಡಬೇಕು" ಎಂದು ಒತ್ತಾಯಿಸಿದ್ದಾರೆ.

"ವಿರಾಟ್ ಕೊಹ್ಲಿ ಪೂರ್ಣಾವಧಿ ಟಿವಿ ಆಕ್ಟರ್ ಮತ್ತು ಅಲ್ಪಾವಧಿ ಕ್ರಿಕೆಟರ್ ರೀತಿ ನಡೆದುಕೊಳ್ಳುತ್ತಿದ್ದಾರೆ" ಎಂದು ಮತ್ತೊಬ್ಬರು ಟೀಕಿಸಿದ್ದಾರೆ.

ಪಂದ್ಯ ಸೋತ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಸರಣಿಯ ಮೊದಲನೇ ಪಂದ್ಯದಲ್ಲಿ ಕೊಹ್ಲಿ, ರೋಹಿತ್ ಶರ್ಮಾ ವೈಫಲ್ಯದ ಬಳಿಕವೂ, ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಉತ್ತಮ ಬ್ಯಾಟಿಂಗ್ ನೆರವಿನಿಂದ 208 ರನ್ ಬೃಹತ್ ಮೊತ್ತ ಕಲೆಹಾಕಿತ್ತು. ಆದರೆ, ಈ ಗುರಿಯನ್ನು ಆಸ್ಟ್ರೇಲಿಯಾ ತಂಡ ಇನ್ನೂ ನಾಲ್ಕು ಎಸೆತಗಳ ಬಾಕಿ ಇರುವಂತೆಯೇ ತಲುಪುವ ಮೂಲಕ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ 1-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, September 20, 2022, 23:32 [IST]
Other articles published on Sep 20, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X