Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Aus T20: ರಿಂಕು, ಅಕ್ಷರ್ ಪಟೇಲ್ ಉತ್ತಮ ಆಟ: ಸರಣಿ ಗೆದ್ದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ 20 ರನ್‌ಗಳ ಗೆಲುವು ಸಾಧಿಸಿದ ಭಾರತ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ. 175 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.

ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.

Ind vs Aus T20: Rinku Singh and Axar Patel Propel India to a Historic Victory, Clinching the Series 3-1

ಭಾರತದ ಪರವಾಗಿ ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಜೈಸ್ವಾಲ್ 28 ಎಸೆತಗಳಲ್ಲಿ 37 ರನ್ ಗಳಿಸಿದರೆ, ರುತುರಾಜ್ ಗಾಯಕ್ವಾಡ್ 28 ಎಸೆತಗಳಲ್ಲಿ 32 ರನ್ ಗಳಿಸಿ ಉತ್ತಮ ಆರಂಭ ನೀಡಿದರು.

ಶ್ರೇಯಸ್ ಅಯ್ಯರ್ (8), ಸೂರ್ಯಕುಮಾರ್ ಯಾದವ್ (1), ಅಕ್ಷರ್ ಪಟೇಲ್ (0), ದೀಪಕ್ ಚಾಹರ್ (0) ರನ್ ಗಳಿಸಲು ವಿಫಲವಾದರು. ಆದರೆ ರಿಂಕು ಸಿಂಗ್ 29 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 46 ರನ್ ಗಳಿಸಿದರೆ, ಜಿತೇಶ್ ಶರ್ಮಾ 19 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 35 ರನ್ ಗಳಿಸಿ ಮಿಂಚಿದರು.

ಅಕ್ಷರ್ ಪಟೇಲ್ ಬೌಲಿಂಗ್ ದಾಳಿ

175 ರನ್‌ಗಳ ಸವಾಲಿನ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಸ್ಫೋಟಕ ಆರಂಭ ಸಿಕ್ಕಿತು. ಟ್ರಾವಿಸ್ ಹೆಡ್ 16 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ಉತ್ತಮ ಆರಂಭ ನೀಡಿದರು. ಜೋಶ್ ಫಿಲಿಪ್ 8 ರನ್ ಗಳಿಸಿ ಔಟಾದರು. ಹೆಡ್ ಔಟಾದ ನಂತರ ಆಸ್ಟ್ರೇಲಿಯಾ ಸತತವಾಗಿ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ನಾಯಕ ಮ್ಯಾಥ್ಯೂ ವೇಡ್ 23 ಎಸೆತಗಳಲ್ಲಿ ಅಜೇತ 36 ರನ್ ಗಳಿಸಿದರೂ ತಂಡವನ್ನು ಗೆಲುವಿನ ಗೆರೆ ದಾಟಿಸಲು ಸಾಧ್ಯವಾಗಲಿಲ್ಲ. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಅಕ್ಷರ್ ಪಟೇಲ್ ಅತ್ಯುತ್ತಮ ಬೌಲಿಂಗ್ ಮಾಡುವ ಮೂಲಕ ಮಿಂಚಿದರು. 4 ಓವರ್ ಗಳಲ್ಲಿ 16 ರನ್ ನೀಡಿ 3 ವಿಕೆಟ್ ಪಡೆದರು. ದೀಪಕ್ ಚಹಾರ್ 2 ವಿಕೆಟ್ ಪಡೆದರೆ, ರವಿ ಬಿಷ್ಣೋಯಿ ಮತ್ತು ಆವೇಶ್ ಖಾನ್ ತಲಾ 1 ವಿಕೆಟ್ ಪಡೆದರು.

Story first published: Friday, December 1, 2023, 22:52 [IST]
Other articles published on Dec 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+