IND vs AUS 3rd T20: ಗ್ರೀನ್, ಟಿಮ್ ಡೇವಿಡ್ ಅರ್ಧಶತಕ, ಭಾರತಕ್ಕೆ ಗೆಲ್ಲಲು 187 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿದೆ. ಆಸ್ಟ್ರೇಲಿಯಾ ಪರವಾಗಿ ಕ್ಯಾಮರೂನ್ ಗ್ರೀನ್ ಮತ್ತು ಟಿಮ್ ಡೇವಿಡ್ ಭರ್ಜರಿ ಅರ್ಧಶತಕ ಗಳಿಸಿದರು.
ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಸ್ಫೋಟಕ ಆರಂಭ ಪಡೆಯಿತು. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ದ ಕ್ಯಾಮರೂನ್ ಗ್ರೀನ್, ಮೊದಲನೇ ಓವರ್ ನಿಂದಲೇ ಬೌಂಡರಿಗಳನ್ನು ಹೊಡೆಯಲು ಆರಂಭಿಸಿದರು. ನಾಯಕ ಫಿಂಚ್ 6 ಎಸೆತಗಳಲ್ಲಿ 7 ರನ್ ಗಳಿಸಿ ಔಟಾದರು.
ಪ್ರತಿ ಓವರ್ ನಲ್ಲಿ ಬೌಂಡರಿಗಳನ್ನು ಬಾರಿಸಿದ ಕ್ಯಾಮರೂನ್ ಗ್ರೀನ್ ಭಾರತದ ವಿರುದ್ಧ ಅತಿ ವೇಗದ ಅರ್ಧ ಶತಕ ಗಳಿಸಿದ ಆಟಗಾರ ಎನಿಸಿಕೊಂಡರು. 19 ಎಸೆತಗಳಲ್ಲಿ 7 ಬೌಂಡರಿ ಮೂರು ಭರ್ಜರಿ ಸಿಕ್ಸರ್ ನೆರವಿನಿಂದ ಅರ್ಧಶತಕ ಗಳಿಸಿದರು. 21 ಎಸೆತಗಳಲ್ಲಿ 52 ರನ್ ಗಳಿಸಿದ ಗ್ರೀನ್ 5ನೇ ಓವರ್ ನ ಕೊನೆಯ ಎಸೆತದಲ್ಲಿ ಭುವನೇಶ್ವರ್ ಕುಮಾರ್ ಗೆ ವಿಕೆಟ್ ಒಪ್ಪಿಸಿದರು.
ಕ್ಯಾಮರೂನ್ ಗ್ರೀನ್ ಔಟಾಗುತ್ತಿದ್ದಂತೆ ಆಸ್ಟ್ರೇಲಿಯಾ ರನ್ ಗಳಿಕೆಯ ವೇಗಕ್ಕೆ ಕಡಿವಾಣ ಬಿದ್ದಿತು. ನಂತರ ಬಂದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು. ಸ್ಟೀವ್ ಸ್ಮಿತ್ 9 ರನ್ ಗಳಿಸಿ ಔಟಾದರೆ, ಮ್ಯಾಕ್ಸ್‌ವೆಲ್ 6 ರನ್ ಗಳಿಸಿ ರನೌಟ್‌ಗೆ ಬಲಿಯಾದರು. ಜೋಶ್ ಇಂಗ್ಲಿಸ್ 24 ರನ್ ಗಳಿಸಿದರೆ, ಮೊದಲ ಎರಡು ಪಂದ್ಯಗಳಲ್ಲಿ ಮಿಂಚಿದ್ದ ಮ್ಯಾಥ್ಯೂ ವೇಡ್ 1 ರನ್‌ಗೆ ಔಟಾದರು.

ಟಿಮ್ ಡೇವಿಡ್ ಅರ್ಧಶತಕ
ಆದರೆ ಅಂತಿಮ ಓವರ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಡೇನಿಯಲ್ ಸ್ಯಾಮ್ಸ್ ಮತ್ತು ಟಿಮ್ ಡೇವಿಡ್ ಆಸ್ಟ್ರೇಲಿಯಾ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಸಹಾಯ ಮಾಡಿದರು. ಟಿಮ್ ಡೇವಿಡ್ 27 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 54 ರನ್ ಗಳಿಸಿದರು.
ಭಾರತದ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದರು. ಯುಜುವೇಂದ್ರ ಚಹಾಲ್ ಓವರ್ ಗಳಲ್ಲಿ 22 ರನ್ ನೀಡಿ 1 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 4 ಓವರ್ ಗಳಲ್ಲಿ 33 ರನ್ ನೀಡಿ ಪ್ರಮುಖ 3 ವಿಕೆಟ್‌ಗಳನ್ನು ಪಡೆದರು. ಜಸ್ಪ್ರೀತ್ ಬುಮ್ರಾ 4 ಓವರ್ ಗಳಲ್ಲಿ 50 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದರು.
ಮೊಹಾಲಿಯಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಸೋಲನುಭವಿಸಿದ್ದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ 1-1ರಲ್ಲಿ ಸರಣಿಯನ್ನು ಸಮಬಲಗೊಳಿಸಿಕೊಂಡಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಸರಣಿಯ ಮೂರನೇ ಪಂದ್ಯ ನಿರ್ಣಾಯಕವಾಗಿದ್ದು, ಗೆಲ್ಲುವ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಆರನ್ ಫಿಂಚ್ (ಸಿ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್ (ಡಬ್ಲ್ಯೂ), ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ (ಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications