IND vs AUS 1st Test: ಕಳಪೆ ಫಾರ್ಮ್ ಮುಂದುವರೆಸಿದ ಕೊಹ್ಲಿ; ಭರ್ಜರಿ ಶತಕ ಬಾರಿಸಿದ ರೋಹಿತ್ ಶರ್ಮಾ!

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರವಾಸಿ ತಂಡದ ವಿರುದ್ಧ ಭಾರತದ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಬಾರಿಸಿದರು.
ಆರಂಭಿಕರಾಗಿ ಬ್ಯಾಟಿಂಗ್‌ಗೆ ಬಂದಿರುವ ರೋಹಿತ್ ಶರ್ಮಾ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಗಳಿಸಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ, ಮತ್ತೊಂದು ಕಡೆ ರೋಹಿತ್ ಶರ್ಮಾ ನೆಲಕಚ್ಚಿ ಆಡುತ್ತಿದ್ದಾರೆ.
ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕ್ರಿಕೆಟ್‌ನ 9ನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸುತ್ತಿದ್ದಂತೆ, ಆಟಗಾರನಾಗಿ ಮತ್ತು ನಾಯಕನಾಗಿ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪ (ಟೆಸ್ಟ್, ಏಕದಿನ ಮತ್ತು ಟಿ20)ಗಳಲ್ಲಿ ಶತಕ ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ರೋಹಿತ್ ಶರ್ಮಾ ನಾಯಕನಾಗಿ ಏಕದಿನ ಪಂದ್ಯಗಳಲ್ಲಿ ಶತಕ ಮತ್ತು ದ್ವಿಶತಕವನ್ನು ಗಳಿಸಿದ್ದಾರೆ. ಟಿ20 ಪಂದ್ಯಗಳಲ್ಲಿ ಎರಡು ಶತಕಗಳನ್ನು ಬಾರಿಸಿದ್ದರೆ, ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ನಾಯಕನಾಗಿ ತಮ್ಮ ಮೊದಲ ಶತಕವನ್ನು ಗಳಿಸಿದರು.
171 ಎಸೆತಗಳಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ ಶತಕ ಪೂರೈಸಿದ ರೋಹಿತ್ ಶರ್ಮಾಗೆ ಭಾರತ ತಂಡದ ಉಳಿದ ಬ್ಯಾಟ್ಸ್‌ಮನ್‌ಗಳಿಂದ ಯಾವುದೇ ಸಾಥ್ ಸಿಗುತ್ತಿಲ್ಲ.

ಮೊದಲ ದಿನ ಉಪನಾಯಕ ಕೆಎಲ್ ರಾಹುಲ್ 71 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರೆ, ಎರಡನೆಯವರಾಗಿ ಬಂದ ರವಿಚಂದ್ರನ್ ಅಶ್ವಿನ್ 62 ಎಸೆತಗಳಲ್ಲಿ 23 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಅನುಭವಿ ಚೇತೇಶ್ವರ ಪೂಜಾರ 14 ಎಸೆತಗಳಲ್ಲಿ 7 ರನ್ ಗಳಿಸಿ ಬಂದಷ್ಟೆ ವೇಗವಾಗಿ ಪೆವಿಲಿಯನ್ ಸೇರಿದರು.
ಇನ್ನು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ(26 ಎಸೆತಗಳಲ್ಲಿ 12 ರನ್) ಉತ್ತಮವಾಗಿ ಆಡುವಂತೆ ತೋರುತ್ತಿರುವಾಗಲೇ 2ನೇ ದಿನದ ಊಟದ ವಿರಾಮ ನಂತರದ ಮೊದಲ ಎಸೆತದಲ್ಲಿಯೇ ಮತ್ತೊಮ್ಮೆ ಔಟಾಗಿ ನಿರಾಸೆ ಮೂಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿಯೂ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಮುಂದುವರೆಯಿತು.

2019ರ ಬಾಂಗ್ಲಾದೇಶದ ವಿರುದ್ಧದ ಶತಕದ ನಂತರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕದ ಬರ ಎದುರಿಸುತ್ತಿದ್ದಾರೆ. ಭಾರತದ ಮಾಜಿ ನಾಯಕನಿಗೆ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಉತ್ತಮ ದಾಖಲೆ ಹೊಂದಿಲ್ಲ ಮತ್ತು ಬಾರ್ಡರ್-ಗವಾಸ್ಕರ್ ಟ್ರೋಫಿ 2023ರ ಮೊದಲ ಟೆಸ್ಟ್ ಪಂದ್ಯದಲ್ಲಿ ಇದು ಮುಂದುವರೆದಿದೆ.
ಆಸ್ಟ್ರೇಲಿಯಾದ 177 ರನ್‌ಗಳಿಗೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ್ದ ಭಾರತ ತಂಡ, ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತ್ತು. ಇದೀಗ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications