IND vs AUS: ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡ 10 ವಿಕೆಟ್ ಸೋಲು ಕಂಡಿದ್ದು ಎಷ್ಟು ಬಾರಿ? ಯಾವಾಗ? ಯಾರ ವಿರುದ್ಧ?

ಭಾನುವಾರ, ಮಾರ್ಚ್ 19ರಂದು ವಿಶಾಖಪಟ್ಟಣದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಮೂಲಕ ಸರಣಿಯಲ್ಲಿ ಭಾರತ ತಂಡ 1-1 ಅಂತರದಲ್ಲಿ ಸಮಬಲಗೊಂಡಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 26 ಓವರ್‌ಗಳಲ್ಲಿ ಕೇವಲ 117 ರನ್ ಗಳಿಸಿ ಸರ್ವಪತನ ಕಂಡಿತು. ಭಾರತದ ಪರ ವಿರಾಟ್ ಕೊಹ್ಲಿ 31 ರನ್ ಮತ್ತು ಅಕ್ಷರ್ ಪಟೇಲ್ 29 ರನ್ ಹೆಚ್ಚಿನ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳಾದರು.
ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ಪರ ಮಾರಕ ಬೌಲಿಂಗ್ ಪ್ರದರ್ಶನ ನೀಡಿದ ಮಿಚೆಲ್ ಸ್ಟಾರ್ಕ್ 8 ಓವರ್‌ಗಳಲ್ಲಿ 53 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದರು. ಸೀನ್ ಅಬೋಟ್ 6 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಕಿತ್ತರೆ, ಉಳಿದಂತೆ ನಾಥನ್ ಎಲ್ಲಿಸ್ 5 ಓವರ್‌ಗಳಲ್ಲಿ 13 ರನ್ ನೀಡಿ 2 ವಿಕೆಟ್ ತಮ್ಮದಾಗಿಸಿಕೊಂಡರು.

118 ರನ್‌ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ, ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಮುರಿಯದ ಮೊದಲ ವಿಕೆಟ್‌ಗೆ 121 ರನ್ ಸೇರಿಸಿ ಗೆಲುವಿನ ಗುರಿ ತಲುಪಿಸಿದರು. ಟ್ರಾವಿಸ್ ಹೆಡ್ ಅಜೇಯ 51 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ ಔಟಾಗದೇ 66 ರನ್ ಬಾರಿಸಿದರು.
ಭಾರತದ ಅಗ್ರ ಕ್ರಮಾಂಕದ ಬ್ಯಾಟಿಂಗ್ ಲೈನ್‌ಅಪ್ ಅನ್ನು ಬೇಟೆಯಾಡಿ, ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದ ಮಿಚೆಲ್ ಸ್ಟಾರ್ಕ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಇನ್ನು ಭಾರತ ತಂಡ ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ 10 ವಿಕೆಟ್ ಸೋಲು ಅನುಭವಿಸಿತು. ಇದಕ್ಕೂ ಮುನ್ನ 2020ರಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 10 ವಿಕೆಟ್‌ಗಳ ಮುಖಭಂಗ ಅನುಭವಿಸಿತ್ತು. ಅಲ್ಲದೇ, ಭಾರತ ತಂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 6ನೇ ಬಾರಿಗೆ ಹತ್ತು ವಿಕೆಟ್‌ಗಳ ಸೋಲು ಕಂಡಿದೆ.

ಏಕದಿನ ಕ್ರಿಕೆಟ್‌ನಲ್ಲಿ ಈ ಹಿಂದಿನ ಭಾರತ ತಂಡದ 10 ವಿಕೆಟ್‌ಗಳ ಸೋಲು
1981ರಲ್ಲಿ ನ್ಯೂಜಿಲೆಂಡ್ ವಿರುದ್ಧ 10 ವಿಕೆಟ್‌ಗಳ ಸೋಲು
1997ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 10 ವಿಕೆಟ್‌ಗಳ ಸೋಲು
2000ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಸೋಲು
2005ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಸೋಲು
2020ರಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳ ಸೋಲು
2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳ ಸೋಲು
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದರುವ ಕಾರಣ, ಉಭಯ ತಂಡಗಳ ನಡುವಿನ ಸರಣಿ ನಿರ್ಣಾಯಕ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications