IND vs AUS 3rd ODI: ಭಾರತ ತಂಡದ ಬಿಗಿ ಬೌಲಿಂಗ್ ದಾಳಿ; ರೋಹಿತ್ ಪಡೆಗೆ ಸವಾಲಿನ ಗುರಿ ನೀಡಿದ ಆಸ್ಟ್ರೇಲಿಯಾ

ಬುಧವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಆತಿಥೇಯ ಭಾರತದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸ್ಟೀವನ್ ಸ್ಮಿತ್ ನಾಯಕತ್ವದ ಆಸ್ಟ್ರೇಲಿಯಾ ತಂಡ 49 ಓವರ್‌ಗಳಲ್ಲಿ 269 ರನ್ ಗಳಿಸಿ ಸರ್ವಪತನ ಕಂಡಿತು. ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ 270 ರನ್‌ಗಳ ಗುರಿ ನೀಡಿದೆ.
ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಮೊದಲ ವಿಕೆಟ್‌ಗೆ 10.5 ಓವರ್‌ಗಳಲ್ಲಿ 68 ರನ್‌ಗಳ ಜೊತೆಯಾಟ ನೀಡಿದರು. 31 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳಿಂದ 33 ರನ್ ಗಳಿಸಿದ್ದ ಟ್ರಾವಿಸ್ ಹೆಡ್ ವಿಕೆಟ್ ಒಪ್ಪಿಸಿದರು.

ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿದರು. ಬಳಿಕ 47 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 47 ರನ್ ಬಾರಿಸಿದ್ದ ಮಿಚೆಲ್ ಮಾರ್ಷ್ ಕೂಡ ಔಟಾದರು. ಡೇವಿಡ್ ವಾರ್ನರ್ 31 ಎಸೆತಗಳಲ್ಲಿ 23 ರನ್ ಗಳಿಸಿ ವಿಕೆಟ್ ನೀಡಿದರು.
ನಂತರ ಬ್ಯಾಟಿಂಗ್‌ಗೆ ಇಳಿದ ಮಾರ್ನಸ್ ಲ್ಯಾಬುಶ್ಚಾಗ್ನೆ 45 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ 25 ರನ್ ಗಳಿಸಿದರೆ, ಅಲೆಕ್ಸ್ ಕ್ಯಾರಿ 48 ಎಸೆತಗಳಲ್ಲಿ 38 ರನ್ ಬಾರಿಸಿದರು. ಮಾರ್ಕಸ್ ಸ್ಟೋಯಿನಿಸ್ 25 ರನ್, ಸೀನ್ ಅಬೋಟ್ 26 ರನ್, ಆಶ್ಟನ್ ಅಗರ್ 17 ರನ್, ಮಿಚೆಲ್ ಸ್ಟಾರ್ಕ್ 10 ರನ್ ಮತ್ತು ಆಡಂ ಝಂಪಾ 10 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 8 ಓವರ್‌ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ಸ್ಪಿನ್ನರ್ ಕುಲದೀಪ್ ಯಾದವ್ 10 ಓವರ್‌ಗಳಲ್ಲಿ 56 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಮೊಹಮ್ಮದ್ ಸಿರಾಜ್ 7 ಓವರ್‌ಗಳಲ್ಲಿ 37 ರನ್ ನೀಡಿ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 8 ಓವರ್‌ಗಳಲ್ಲಿ 57 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.

ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು 2-1 ಅಂತರದಿಂದ ಸೋಲಿಸಿದ ನಂತರ ಭಾರತ ತಂಡ 5 ವಿಕೆಟ್‌ಗಳ ಜಯದೊಂದಿಗೆ ತನ್ನ ಏಕದಿನ ಸರಣಿ ಅಭಿಯಾನವನ್ನು ಆರಂಭಿಸಿತು. ನಂತರ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಇನ್ನು ಈ ಪಂದ್ಯದಲ್ಲಿ ಭಾರತ ತಂಡ ಯಾವುದೇ ಬದಲಾವಣೆ ಮಾಡದೇ ಕಳೆದ ಪಂದ್ಯದ ತಂಡವನ್ನೇ ಆಡುತ್ತಿದೆ. ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ಡೇವಿಡ್ ವಾರ್ನರ್ ಮತ್ತು ಆಶ್ಟನ್ ಅಗರ್ ಆಡುವ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ vs ಆಸ್ಟ್ರೇಲಿಯಾ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಅಗರ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications