IND vs AUS: ಸಿಡ್ನಿ ಟೆಸ್ಟ್‌ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್-11; ಯಾರ ಬದಲಿಗೆ ಗಿಲ್‌ಗೆ ಸ್ಥಾನ?
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಸೋಲಿನ ನಂತರ ಟೀಮ್ ಇಂಡಿಯಾ ತನ್ನ ಹಿಡಿತವನ್ನು ಕಳೆದುಕೊಂಡಿದೆ. ಈಗ ಸರಣಿಯನ್ನು ಉಳಿಸಿಕೊಳ್ಳುವುದು ಬಿಟ್ಟರೆ ಭಾರತ ತಂಡಕ್ಕೆ ಬೇರೆ ಆಯ್ಕೆ ಉಳಿದಿಲ್ಲ. ಕಳೆದ 4 ಟೆಸ್ಟ್‌ಗಳಲ್ಲಿ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಕೈಬಿಟ್ಟಾಗ ದೊಡ್ಡ ಸಮಸ್ಯೆ ಎದುರಾಗಿತ್ತು. ಇದೀಗ ಸಿಡ್ನಿಯಲ್ಲಿ ನಡೆಯಲಿರುವ 5ನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ಸಂಚಲನ ಮೂಡಬಹುದು. ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ಜನವರಿ 3ರಿಂದ ಸಿಡ್ನಿಯಲ್ಲಿ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಆಡಲಿವೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಸ್ವಲ್ಪ ಸಮಯದ ನಂತರ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿರಲಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆಯೇ ದೊಡ್ಡ ತಲೆ ನೋವಾಗಿದೆ.

ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಗಿಲ್ ಅವರನ್ನು ಹೊರಗಿಟ್ಟು ವಾಷಿಂಗ್ಟನ್ ಸುಂದರ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಆದ್ಯತೆ ನೀಡಲಾಗಿತ್ತು. ಇದಾದ ನಂತರ ಸುಂದರ್ ಆಯ್ಕೆ ಬಗ್ಗೆ ಬಹಳಷ್ಟು ಪ್ರಶ್ನೆಗಳನ್ನು ಎತ್ತಲಾಗಿತ್ತು. ಏಕೆಂದರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾ ಪರ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟರ್ ಗಿಲ್. ಇಂತಹ ಸಂದರ್ಭದಲ್ಲಿ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಗಿಲ್ ಮಂಕಾಗಿದ್ದರು. ಈ ಕಾರಣದಿಂದಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದರೂ, ಏಕೆ ಅವರನ್ನು ಕೈ ಬಿಟ್ಟಿಲ್ಲ ಎಂಬ ಚರ್ಚೆ ಶುರುವಾಗಿತ್ತು.
ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಭಾರತದ ಆಡುವ ಹನ್ನೊಂದರ ಆಯ್ಕೆ ಮಾಡುವುದು ರೋಹಿತ್ ಶರ್ಮಾಗೆ ಕಠಿಣ ನಿರ್ಧಾರವಾಗಿದೆ. ಭಾರತ ತಂಡ ಅತ್ಯುತ್ತಮ ಬ್ಯಾಟಿಂಗ್‌ನೊಂದಿಗೆ ಮೈದಾನಕ್ಕಿಳಿದರೆ ಗಿಲ್ ಆಡುವ ಹನ್ನೊಂದರಲ್ಲಿರುವುದು ಖಚಿತ. ಪಿಚ್‌ಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಂಡರೆ, ಬ್ಯಾಟಿಂಗ್ ಆಲ್‌ರೌಂಡರ್ ಸುಂದರ್ ಅಥವಾ ತನುಷ್ ಕೋಟ್ಯಾನ್ ರವೀಂದ್ರ ಜಡೇಜಾ ಅವರಿಗೆ ಅವಕಾಶ ಸಿಗಬಹುದು. ಈ ವೇಳೆ ಶುಭಮನ್ ಗಿಲ್ ಮತ್ತೆ ಬೆಂಚ್ ಕಾಯಬೇಕಾಗುತ್ತದೆ. ಕೊನೆಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುವ ಹನ್ನೊಂದರ ಬಳಗದ ಆಯ್ಕೆಯ ಸಮಸ್ಯೆಯನ್ನು ಹೇಗೆ ಪರಿಹರಿಸುತ್ತಾರೆ ಎಂಬುದು ಈಗ ಕುತೂಹಲಕಾರಿಯಾಗಿದೆ.
ಸಿಡ್ನಿ ಟೆಸ್ಟ್‌ಗಾಗಿ ಭಾರತದ ಸಂಭಾವ್ಯ ಪ್ಲೇಯಿಂಗ್-11
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್‌ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications