
ತವರಿಗೆ ವಾಪಸಾದ ಹಲವು ಆಟಗಾರರು
ಮುಂದಿನ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಸಿಗದಿರುವುದು ಖಚಿತವಾದ ಬಳಿಕ ತಂಡದ ಸ್ಪಿನ್ನರ್ ಆಷ್ಟನ್ ಅಗರ್ ಮತ್ತು ಬ್ಯಾಟರ್ ಮ್ಯಾಟ್ ರೆನ್‌ಶಾ ಕೂಡ ಆಸ್ಟ್ರೇಲಿಯಾಗೆ ವಾಪಸ್ ಹೋಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಶೆಫಲ್ಡ್ ಶೀಲ್ಡ್ ಟೂರ್ನಿಯಲ್ಲಿ ಇವರಿಬ್ಬರೂ ಆಡಲು ನಿರ್ಧರಿಸಿದ್ದಾರೆ. ಇವರಿಬ್ಬರ ಜೊತೆ ಲ್ಯಾನ್ಸ್ ಮೋರಿಸ್ ಕೂಡ ವಾಪಸ್ ತೆರಳಲಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದ ಸ್ಪಿನ್ನರ್ ಟಾಡ್ ಮರ್ಫಿ ಕೂಡ ಸೈಡ್ ಸ್ಟ್ರೈನ್‌ಗೆ ತುತ್ತಾಗಿದ್ದು ಮುಂದಿನ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಅವರು ಕೂಡ ತವರಿಗೆ ವಾಪಸ್ ಹೋಗಲು ಸಿದ್ಧತೆ ನಡೆಸಿದ್ದಾರೆ.

ಭಾರತಕ್ಕೆ ಬರಲಿದ್ದಾರೆ ಪ್ಯಾಟ್ ಕಮಿನ್ಸ್
ತಂಡದ ಮತ್ತೊಬ್ಬ ಪ್ರಮುಖ ಸ್ಪಿನ್ನರ್ ಮಿಚೆಲ್ ಸ್ವೆಪ್ಸನ್ ಕೂಡ ಮೊದಲನೇ ಟೆಸ್ಟ್ ಪಂದ್ಯದ ಬಳಿಕ ತವರಿಗೆ ವಾಪಸಾಗಿದ್ದರು. ಮಗುವಿನನ ನಿರೀಕ್ಷೆಯಲ್ಲಿದ್ದ ಅವರು ಕುಟುಂಬದ ಜತೆ ಕಾಲ ಕಳೆಯಲು ವಾಪಸಾಗಿದ್ದರು. ಕುಟುಂಬದವರ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾಗೆ ತೆರಳಿದ್ದು, ಅವರು ಮೂರನೇ ಟೆಸ್ಟ್ ಪಂದ್ಯಕ್ಕೆ ಮುನ್ನವೇ ಭಾರತಕ್ಕೆ ಮರಳಲಿದ್ದು, ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ವಾರ್ನರ್ ತೋಳಿಗೆ ಗಾಯಗೊಂಡಿದ್ದರು. ಮೂಳೆ ಮುರಿತಕ್ಕೆ ಒಳಗಾಗಿರುವ ಕಾರಣ ಅವರು ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದು, ಚೇತರಿಸಿಕೊಳ್ಳಲು ತವರಿಗೆ ಮರಳಿದ್ದಾರೆ.

ಪರಿಷ್ಕೃತ ತಂಡ ಪ್ರಕಟಿಸುತ್ತೇವೆ ಎಂದ ಕೋಚ್
ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗಾಗಿ ಪರಿಷ್ಕೃತ ತಂಡವನ್ನು ಪ್ರಕಟಿಸಲಾಗುವುದು ಎಂದು ಆಸ್ಟ್ರೇಲಿಯಾದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ತಿಳಿಸಿದ್ದಾರೆ.
"ಆಸ್ಟ್ರೇಲಿಯಾದಲ್ಲಿ ಶೆಫಲ್ಡ್ ಶೀಲ್ಡ್ ಟೂರ್ನಿ ನಡೆಯುತ್ತಿದೆ. ಕೆಲವು ಆಟಗಾರರು ಫಿಟ್ ಆಗಿದ್ದು ತಂಡಕ್ಕೆ ಮರಳಿದ್ದಾರೆ. ಹೆಚ್ಚುವರಿ ಆಟಗಾರರು ತವರಿಗೆ ವಾಪಸ್ ಹೋಗಲಿದ್ದಾರೆ. ಮುಂದಿನ ಎರಡು ಟೆಸ್ಟ್ ಪಂದ್ಯಗಳು ನಮಗೆ ಮುಖ್ಯವಾಗಿದ್ದು, ನಾವು ಏನು ಮಾಬೇಕು ಎನ್ನುವುದರ ಬಗ್ಗೆ ಸ್ಪಷ್ಟನೆ ಇರಬೇಕು. ಕೆಲವು ಆಟಗಾರರಿಗೆ ಇಲ್ಲಿ ಅವಕಾಶ ಸಿಗುತ್ತಿಲ್ಲ, ಅವರು ತವರಿಗೆ ಹೋಗಿ ಕ್ರಿಕೆಟ್ ಆಡಲು ಬಯಸಿದ್ದಾರೆ ಅದನ್ನು ನಾವು ಗೌರವಿಸುತ್ತೇವೆ" ಎಂದು ಮೆಕ್‌ಡೊನಾಲ್ಡ್ ಹೇಳಿದ್ದಾರೆ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮ್ಯಾಟ್ ಕುಹ್ನೆಮನ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಟ್ , ಸ್ಟೀವ್ ಸ್ಮಿತ್ (ಉಪ ನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.


Click it and Unblock the Notifications












