ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs AUS Test : ಫೆಬ್ರವರಿ 1 ರಂದು ಭಾರತಕ್ಕೆ ಆಸ್ಟ್ರೇಲಿಯಾ ತಂಡ : ಬೆಂಗಳೂರಿನಲ್ಲಿ ಅಭ್ಯಾಸ

IND vs AUS Test Series: Pat Cummins Led Australia Team Will Arrive India On February 1st

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಫೆಬ್ರವರಿ 1 ರಂದು ಭಾರತಕ್ಕೆ ಆಗಮಿಸಲಿದೆ. ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಫೆಬ್ರವರಿ 9ರಂದು ಆರಂಭವಾಗಲಿದೆ. 4 ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಆಸ್ಟ್ರೇಲಿಯಾ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.

ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಂದು ನಾಗ್ಪುರದಲ್ಲಿ ನಡೆಯಲಿದೆ. ಫೆಬ್ರವರಿ 1ರಂದು ಭಾರತಕ್ಕೆ ಬರುವ ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಕಿರು ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದೆ.

Ind vs NZ 2nd T20: ಭಾರತ ತಂಡದಲ್ಲಿ ಹಲವು ಬದಲಾವಣೆ: ಪೃಥ್ವಿ ಶಾ, ಮುಖೇಶ್ ಕುಮಾರ್ ಕಣಕ್ಕೆ?Ind vs NZ 2nd T20: ಭಾರತ ತಂಡದಲ್ಲಿ ಹಲವು ಬದಲಾವಣೆ: ಪೃಥ್ವಿ ಶಾ, ಮುಖೇಶ್ ಕುಮಾರ್ ಕಣಕ್ಕೆ?

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಡಲಿರುವ ಕೆಲವು ಆಟಗಾರರು ಸದ್ಯ ನಡೆಯುತ್ತಿರುವ ಬಿಗ್‌ ಬ್ಯಾಷ್‌ ಲೀಗ್‌ನಲ್ಲಿ ಆಡುತ್ತಿದ್ದಾರೆ. ನಂತರ ಕ್ರಿಕೆಟ್‌ ಆಸ್ಟ್ರೇಲಿಯಾದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಜನವರಿ 31ರಂದು ಭಾರತಕ್ಕೆ ಪ್ರಯಾಣ ಬೆಳೆಸಲಿದ್ದು, ಫೆಬ್ರವರಿ 1ರಂದು ಭಾರತಕ್ಕೆ ಬಂದಿಳಿಯಲಿದ್ದಾರೆ.

ಆಸ್ಟ್ರೇಲಿಯಾದ ಕೆಲವು ಆಟಗಾರರು ಭಾರತದಲ್ಲಿ ಸುಮಾರು 4 ರಿಂದ 5 ತಿಂಗಳು ನೆಲೆಸಲಿದ್ದಾರೆ. ಭಾರತದ ವಿರುದ್ಧದ ಸರಣಿ ಮುಕ್ತಾಯವಾದ ನಂತರ ಏಪ್ರಿಲ್ ತಿಂಗಳಿನಲ್ಲಿ ಐಪಿಎಲ್ ಆರಂಭವಾಗಲಿದ್ದು, ಐಪಿಎಲ್‌ ಮುಗಿಯುವವರೆಗೂ ಭಾರತದಲ್ಲಿ ಇರಲಿದ್ದಾರೆ.

ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!

 ಭಾರತದಲ್ಲಿ 2004ರ ನಂತರ ಟೆಸ್ಟ್ ಸರಣಿ ಗೆದ್ದಿಲ್ಲ

ಭಾರತದಲ್ಲಿ 2004ರ ನಂತರ ಟೆಸ್ಟ್ ಸರಣಿ ಗೆದ್ದಿಲ್ಲ

ಕಳೆದ ಮೂರು ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ ಗೆಲುವು ಸಾಧಿಸಿಲ್ಲ. 2014ರಲ್ಲಿ ಆಸ್ಟ್ರೇಲಿಯಾ ತವರಿನಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಆದರೆ, 2004ರ ನಂತರ ಭಾರತದಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ.

ಕಳೆದ ಮೂರು ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತವೇ ಪ್ರಾಬಲ್ಯ ಸಾಧಿಸಿದೆ. ಟೀಂ ಇಂಡಿಯಾ ತನ್ನ ಪ್ರಾಬಲ್ಯವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದು, ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಭಾರತದ ವಿರುದ್ಧ ಸರಣಿ ಗೆಲ್ಲಬೇಕೆನ್ನುವ ಹಂಬಲದಲ್ಲಿದೆ.

 ಸರಣಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸ್ಟೋಯಿನಿಸ್

ಸರಣಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸ್ಟೋಯಿನಿಸ್

ಆಸ್ಟ್ರೇಲಿಯಾದ ಆಟಗಾರ ಮಾರ್ಕಸ್ ಸ್ಟೊಯಿನಿಸ್ ಕೂಡ ಭಾರತದಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಗೆಲ್ಲುತ್ತೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ಈ ಬಾರಿ ನಾವು ಟ್ರೋಫಿಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ, ಮೂರು ಬಾರಿ ನಾವು ಸರಣಿಯನ್ನು ಕಳೆದುಕೊಂಡಿದ್ದೇವೆ. ಈ ವರ್ಷ ನಮ್ಮ ತಂಡ ಬಲಿಷ್ಠವಾಗಿದೆ, ಭಾರತದಲ್ಲಿ ಅವರ ನೆಲದಲ್ಲಿ ಸೋಲಿಸುವುದು ಕಷ್ಟ, ನಾವು ಅಲ್ಲಿ ಸ್ಪಿನ್‌ ಪಿಚ್‌ಗಳಲ್ಲಿ ಆಡಬೇಕಿದೆ" ಎಂದು ಸ್ಟೊಯಿನಿಸ್ ಹೇಳಿದ್ದಾರೆ.

"ಟೀಂ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾರಂತಹ ವಿಶೇಷ ಬೌಲರ್ ಗಳಿದ್ದಾರೆ. ಅವರು ತವರಿನ ಪಿಚ್‌ಗಳಲ್ಲಿ ಪರಿಣಾಮಕಾರಿಯಾಗಿರುತ್ತಾರೆ. ಆದರೆ, ನಾವು ಕೂಡ ಈ ಬಾರಿ ವಿಶೇಷ ಸ್ಪಿನ್ನರ್‌ಗಳೊಂದಿಗೆ ಬರುತ್ತಿದ್ದೇವೆ. ಭಾರತಕ್ಕೆ ಈ ಬಾರಿ ಉತ್ತಮ ಸ್ಪರ್ಧೆಯನ್ನು ನಿರೀಕ್ಷಿಸಬಹುದು" ಎಂದು ಹೇಳಿದ್ದಾರೆ.

 ಟೀಂ ಇಂಡಿಯಾ ಅಭ್ಯಾಸ

ಟೀಂ ಇಂಡಿಯಾ ಅಭ್ಯಾಸ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಭಾರತ ತಂಡದ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನೂ ಕೆಲವು ಆಟಗಾರರು ಟಿ20 ಸರಣಿಯಲ್ಲಿ ಆಡುತ್ತಿದ್ದಾರೆ. ಫೆಬ್ರವರಿ 2ರಿಂದ ಭಾರತ ತಂಡದ ಆಟಗಾರರು ಟೆಸ್ಟ್ ಸರಣಿಗಾಗಿ ಅಭ್ಯಾಸ ಆರಂಭಿಸಲಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ವಿಶ್ರಾಂತಿಯಲ್ಲಿದ್ದು, ನಾಗ್ಪುರದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಭಾರತದ ಕೋಚಿಂಗ್ ಸಿಬ್ಬಂದಿ ಕೂಡ ನ್ಯೂಜಿಲೆಂಡ್ ವಿರುದ್ಧ ಕೊನೆಯ ಟಿ20 ಪಂದ್ಯದ ನಂತರ ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ.

 ಟೆಸ್ಟ್ ಸರಣಿಗೆ ಭಾರತ, ಆಸ್ಟ್ರೇಲಿಯಾ ತಂಡ

ಟೆಸ್ಟ್ ಸರಣಿಗೆ ಭಾರತ, ಆಸ್ಟ್ರೇಲಿಯಾ ತಂಡ

ಭಾರತ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್ಕಾಂಬ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಲ್ಯಾನ್ಸ್ ಮಾರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Story first published: Saturday, January 28, 2023, 16:55 [IST]
Other articles published on Jan 28, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X