Sam Konstas: ಮೆಲ್ಬೋರ್ನ್‌ನಲ್ಲಿ ಸ್ಯಾಮ್ ಕಾನ್‌ಸ್ಟಾಸ್ ಪಾದಾರ್ಪಣೆ ಫಿಕ್ಸ್
ಆಸ್ಟ್ರೇಲಿಯಾದ ಯುವ ಬ್ಯಾಟರ್ ಸ್ಯಾಮ್ ಕಾನ್‌ಸ್ಟಾಸ್ ಗುರುವಾರ ಮೆಲ್ಬೋರ್ನ್ ಅಂಗಳದಲ್ಲಿ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ಸ್ಯಾಮ್ ಕಾನ್‌ಸ್ಟಾಸ್ ಅವರು ಚೊಚ್ಚಲ ಪಂದ್ಯವನ್ನಾಡುವ ಬಗ್ಗೆ ಹೆಡ್‌ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಮಂಗಳವಾರ ಖಚಿತಪಡಿಸಿದ್ದಾರೆ. ಸ್ಯಾಮ್ ಕಾನ್‌ಸ್ಟಾಸ್ ಇತ್ತೀಚೆಗೆ ತಮ್ಮ ಆಟದಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆದ್ದರಿಂದ ಅವರು ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಮೆಕ್‌ಡೊನಾಲ್ಡ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾಥನ್ ಮೆಕ್‌ಸ್ವೀನಿ ಬದಲಿಗೆ 19 ವರ್ಷದ ಬ್ಯಾಟರ್ ಸ್ಯಾಮ್ ಕಾನ್‌ಸ್ಟಾಸ್ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಮೆಕ್‌ಸ್ವೀನಿ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ಕೋಚ್ ಹೇಳಿದ್ದೇನು?
ಸ್ಯಾಮ್ ಕಾನ್‌ಸ್ಟಾಸ್ ಉತ್ತಮ ಶಾಟ್‌ಗಳನ್ನು ಆಡುವ ಮೂಲಕ ಎದುರಾಳಿ ತಂಡಗಳ ಮೇಲೆ ಒತ್ತರ ಹೇರುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರಿಗೆ ಆಡುವ ಅವಕಾಶ ಸಿಕ್ಕಿರುವುದರಿಂದ ನಾವು ಉತ್ಸುಕರಾಗಿದ್ದೇವೆ ಮೆಕ್ಡೊನಾಲ್ಡ್ ಹೇಳಿದ್ದಾರೆ.
ಗಾಯದ ಸಮಸ್ಯೆ ಎದುರಿಸುತ್ತಿದ್ದರೂ ಟ್ರಾವಿಸ್ ಹೆಡ್ ಬ್ಯಾಟಿಂಗ್ ಮಾಡಲು ಫಿಟ್ ಆಗುವ ಭರವಸೆ ಇದೆ. ಆಲ್‌ರೌಂಡರ್ ಮಿಚೆಲ್ ಮಾರ್ಷ್ ಕೂಡ ಬೌಲಿಂಗ್ ಮಾಡಲಿದ್ದಾರೆ. ಆಸ್ಟ್ರೇಲಿಯಾದ ಉಳಿದ ತಂಡವನ್ನು ಬುಧವಾರದಂದು ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರಕಟಿಸಲಿದ್ದಾರೆ ಎಂದು ಕೋಚ್ ತಿಳಿಸಿದ್ದಾರೆ.
ಭಾರತ ವಿರುದ್ಧ ಶತಕ
ಇತ್ತೀಚೆಗೆ ಭಾರತ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಸ್ಯಾಮ್ ಕಾನ್‌ಸ್ಟಾಸ್ ಶತಕ ಬಾರಿಸಿದ್ದರು. ಡಿಸೆಂಬರ್ 1 ರಂದು ಕ್ಯಾನ್‌ಬೆರಾದಲ್ಲಿ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ಪರ ಸ್ಯಾಮ್ ಕಾನ್‌ಸ್ಟಾಸ್ ಅವರು 97 ಎಸೆತಗಳಲ್ಲಿ 107 ರನ್‌ಗಳನ್ನು ಬಾರಿಸಿದ್ದರು. ಆದರೆ ಭಾರತ ವಿರುದ್ಧ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ಸೋಲು ಕಂಡಿತ್ತು.
ಅವರು 11 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 42.2 ಸರಾಸರಿಯಲ್ಲಿ 718 ರನ್ ಗಳಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅವರ ಗರಿಷ್ಠ ಸ್ಕೋರ್ 152 ರನ್. ಕಾನ್‌ಸ್ಟಾಸ್ 2 ಶತಕ ಹಾಗೂ 3 ಅರ್ಧ ಶತಕ ಹೊಂದಿದ್ದಾರೆ.
ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೆ ಉಭಯ ತಂಡಗಳು
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ಟ್ರಾವಿಸ್ ಹೆಡ್ (ಉಪನಾಯಕ), ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕಾನ್ಸ್ಟಾಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್.
ಭಾರತ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಜಡೇಜಾ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ತನುಷ್ ಕೋಟ್ಯಾನ್, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications