ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs AUS Test Series: ಆಸೀಸ್‌ನ ಈ ಸ್ಪಿನ್ನರ್ ವಿರುದ್ಧ ಕೊಹ್ಲಿ ಆಕ್ರಮಣಕಾರಿಯಾಗಬೇಕು; ಇರ್ಫಾನ್ ಪಠಾಣ್

IND vs AUS Test Series: Virat Kohli Should Play Aggressively Against Nathan Lyon Says Irfan Pathan

ಫೆಬ್ರವರಿ 9ರಿಂದ ಆರಂಭಗೊಳ್ಳುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಎರಡೂ ತಂಡಗಳು ತಯಾರಿ ನಡೆಸಿವೆ. ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಟೆಸ್ಟ್ ಸರಣಿಯಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಎದುರಾಳಿ ತಂಡದ ಸ್ಪಿನ್ ಬೌಲಿಂಗ್ ವಿರುದ್ಧ ಹೆಚ್ಚು ಆಕ್ರಮಣಕಾರಿ ಪ್ರದರ್ಶನ ನೀಡಬೇಕು ಎಂದು ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್ ಸಲಹೆ ನೀಡಿದ್ದಾರೆ.

IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಇದೀಗ ಆತಿಥೇಯ ತಂಡಕ್ಕೆ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಮುಖ ಬ್ಯಾಟ್ಸ್‌ಮನ್ ಆಗಿದ್ದಾರೆ.

ವಿರಾಟ್ ಕೊಹ್ಲಿ ಸದ್ಯ ಅದ್ಭುತ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ವೈಟ್‌ಬಾಲ್‌ನಲ್ಲಿ ನೀಡುತ್ತಿರುವ ಪ್ರದರ್ಶನವನ್ನು ರೆಡ್ ಬಾಲ್ ಕ್ರಿಕೆಟ್‌ನಲ್ಲಿಯೂ ಪ್ರದರ್ಶಿಸಬೇಕಿದೆ. ಶ್ರೇಯಸ್ ಅಯ್ಯರ್ ಅನುಪಸ್ಥಿಯಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ವಿರಾಟ್ ಕೊಹ್ಲಿ ನಿರ್ಣಾಯಕ ಆಟಗಾರನಾಗಿದ್ದಾರೆ.

ಸ್ಪಿನ್ ಬೌಲಿಂಗ್ ವಿರುದ್ಧ ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಬೇಕು

ಸ್ಪಿನ್ ಬೌಲಿಂಗ್ ವಿರುದ್ಧ ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಬೇಕು

ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡಿದ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್, ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅವರೇ ಇಷ್ಟಪಡುವಷ್ಟು ಉತ್ತಮವಾಗಿ ಆಡದ ಕಾರಣ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಸ್ಪಿನ್ ಬೌಲಿಂಗ್ ವಿರುದ್ಧ ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.

"ವಿರಾಟ್ ಕೊಹ್ಲಿ ಅವರು ಆಸೀಸ್‌ನ ನಾಥನ್ ಲಿಯಾನ್ ಮತ್ತು ಆಶ್ಟನ್ ಅಗರ್ ಅವರ ಸ್ಪಿನ್ ದಾಳಿಯನ್ನು ಹೇಗೆ ಎದುರಿಸಲಿದ್ದಾರೆ ಎಂಬುದು ದೊಡ್ಡ ವಿಷಯವಾಗಿದೆ. ವಿರಾಟ್ ಕೊಹ್ಲಿ ವಿಶೇಷವಾಗಿ ಸ್ಪಿನ್ ಬೌಲಿಂಗ್ ವಿರುದ್ಧ ಹೋರಾಡುತ್ತಿದ್ದಾರೆ ಮತ್ತು ಕಳಪೆಯಾಗಿ ವಿಕೆಟ್ ಒಪ್ಪಿಸುತ್ತಿದ್ದಾರೆ".

ಸ್ಪಿನ್ ವಿರುದ್ಧದ ಅವರ ಸ್ಟ್ರೈಕ್ ರೇಟ್ ಕೂಡ ಕಡಿಮೆಯಾಗಿದೆ

ಸ್ಪಿನ್ ವಿರುದ್ಧದ ಅವರ ಸ್ಟ್ರೈಕ್ ರೇಟ್ ಕೂಡ ಕಡಿಮೆಯಾಗಿದೆ

"ವಿರಾಟ್ ಕೊಹ್ಲಿ ವೈಯಕ್ತಿಕವಾಗಿ ಮಾಡಬೇಕಾದ ಒಂದು ದೊಡ್ಡ ಕೆಲಸವೆಂದರೆ, ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಲು ಪ್ರಯತ್ನಿಸುವುದು ಎಂದು ನಾನು ಭಾವಿಸುತ್ತೇನೆ. ಸ್ಪಿನ್ ವಿರುದ್ಧದ ಅವರ ಸ್ಟ್ರೈಕ್ ರೇಟ್ ಕೂಡ ಕಡಿಮೆಯಾಗಿದೆ," ಎಂದು ಇರ್ಫಾನ್ ಪಠಾಣ್ ಹೇಳಿದರು.

ಪ್ರವಾಸಿ ಆಸ್ಟ್ರೇಲಿಯಾ ತನ್ನ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳನ್ನು ಹೊಂದಿದೆ. ಇದರಲ್ಲಿ ಇಬ್ಬರು ಅನುಭವಿ ಸ್ಪಿನ್ನರ್‌ಗಳಾದ ನಾಥನ್ ಲಿಯಾನ್ ಮತ್ತು ಆಶ್ಟನ್ ಅಗರ್ ಇದ್ದಾರೆ. ಆ ಇಬ್ಬರನ್ನು ಹೊರತುಪಡಿಸಿ, ಆಸ್ಟ್ರೇಲಿಯಾ ಮಣಿಕಟ್ಟಿನ ಸ್ಪಿನ್ನರ್ ಆದ ಮಿಚೆಲ್ ಸ್ವೆಪ್ಸನ್ ಅವರನ್ನು ಕೂಡ ಭಾರತದ ಪ್ರವಾಸಕ್ಕೆ ಆಯ್ಕೆ ಮಾಡಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ

"ನಾವು ಇಲ್ಲಿ ಟೆಸ್ಟ್ ಕ್ರಿಕೆಟ್ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ ಕೆಲವೊಮ್ಮೆ ಅವರು ಸ್ಪಿನ್ ವಿರುದ್ಧ ಸ್ವಲ್ಪ ಹೆಚ್ಚು ಆಕ್ರಮಣಕಾರಿಯಾಗಿರಬೇಕಾಗುತ್ತದೆ. ಆಸ್ಟ್ರೇಲಿಯಾದ ಸ್ಪಿನ್, ಹೆಚ್ಚುವರಿ ಬೌನ್ಸ್ ಮತ್ತು ನಾಥನ್ ಲಿಯಾನ್ ಅವರಂತಹ ಬೌಲರ್‌ಗಳನ್ನು ಎದುರಿಸುತ್ತಿರುವಾಗ ಅದು ನಿಮ್ಮ ಆಟವನ್ನು ಉತ್ತಮಗೊಳಿಸಬಹುದು. ಎದುರಾಳಿ ಬೌಲರ್‌ಗಳು ಚೆಂಡನ್ನು ದೂರ ಎಸೆಯಲು ನೋಡುತ್ತಾರೆ. ಆದ್ದರಿಂದ, ವಿರಾಟ್ ಕೊಹ್ಲಿ ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕಾದ ಒಂದು ವಿಷಯವೆಂದು ನಾನು ಭಾವಿಸುತ್ತೇನೆ," ಎಂದು ಇರ್ಫಾನ್ ಪಠಾಣ್ ಸ್ಟಾರ್ ಸ್ಪೋರ್ಟ್ಸ್ ಶೋನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾವನ್ನು ಎದುರಿಸಲಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ದೊಡ್ಡ ಗುರಿಯನ್ನು ಹೊಂದಿದೆ.

Story first published: Thursday, February 2, 2023, 19:55 [IST]
Other articles published on Feb 2, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X