Rohit Sharma: ವಿರಾಟ್ ಕಳಪೆ ಫಾರ್ಮ್ ಬಗ್ಗೆ ಕ್ಯಾಪ್ಟನ್ ರೋಹಿತ್ ಹೇಳಿದ್ದೇನು?
ಮೇಲ್ಬೋರ್ನ್‌ನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಪಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿವೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು. ಇದಾದ ನಂತರ ವಿರಾಟ್ ಕೊಹ್ಲಿ ಅವರಿಂದ ಹೇಳಿಕೊಳ್ಳವಂತಹ ಪ್ರದರ್ಶನ ಬಂದಿಲ್ಲ. ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಅವರ ಫಾರ್ಮ್ ಸಮಸ್ಯೆಯೇ ದೊಡ್ಡ ತಲೆ ನೋವಾಗಿದೆ. ಇದೀಗ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.
ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕ್ಯಾಪ್ಟನ್ ರೋಹಿತ್ ಶರ್ಮಾ ಪ್ರತಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಉಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಪುನರಾಗಮನ ಮಾಡಲಿದ್ದಾರೆ ಎಂದಿದ್ದಾರೆ.

ಪರ್ತ್ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮೂರು ಇನ್ನಿಂಗ್ಸ್‌ಗಳಲ್ಲಿ 7, 11 ಮತ್ತು 3 ರನ್ ಗಳಿಸಿದ್ದಾರೆ. ಇದಾದ ಬಳಿಕ ವಿರಾಟ್ ತಮ್ಮ ಲಯ ಕಂಡುಕೊಳ್ಳಲು ಹೆಣಗಾಡುತ್ತಿದ್ದಾರೆ. ಇದೀಗ ಮೆಲ್ಬೋರ್ನ್‌ನಲ್ಲಿ ತಮ್ಮ ಬ್ಯಾಟ್‌ನಿಂದ ರನ್ ಗಳಿಸಿ ಭಾರತ ತಂಡಕ್ಕೆ ಗೆಲುವು ತಂದು ಕೊಡುವ ಅವಕಾಶವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಮೆಲ್ಬೋರ್ನ್ ಅಂಗಳದಲ್ಲಿ ವಿರಾಟ್ ಕೊಹ್ಲಿ 316 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಭಾರತ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹೀಗಾಗಿ ಮೆಲ್ಬೋರ್ನ್ ಅಂಗಳದಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುವ ನಿರೀಕ್ಷೆಯಿದೆ.
ರೋಹಿತ್ ಹೇಳಿದ್ದೇನು?
ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ರೋಹಿತ್ ಶರ್ಮಾಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರೋಹಿತ್, 'ಆಧುನಿಕ ಯುಗದ ಶ್ರೇಷ್ಠ ಆಟಗಾರರು ತಮ್ಮದೇ ಆದ ಹಾದಿಯನ್ನು ಕಂಡುಕೊಳ್ಳುತ್ತಾರೆ ಎಂದು ಒಂದು ವಾಕ್ಯದಲ್ಲಿ ಉತ್ತರಿಸಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಬ್ಯಾಟಿಂಗ್ ಬಗ್ಗೆ ಮಾತನಾಡಿದ್ದಾರೆ. ಯಾರು ಎಲ್ಲಿ ಬ್ಯಾಟ್ ಮಾಡುತ್ತಾರೆ ಎಂಬ ಚಿಂತೆ ಬೇಡ. ಇದು ತಂಡಕ್ಕೆ ಯಾವುದು ಉತ್ತಮ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ನುಡಿದ್ದಾರೆ.
ರೋಹಿತ್ ಶರ್ಮಾ 2 ಟೆಸ್ಟ್ ಪಂದ್ಯಗಳಲ್ಲಿ ಕೇವಲ 19 ರನ್ ಗಳಿಸಿದ್ದಾರೆ. ಈಗ ಅವರ ನಾಯಕತ್ವದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಏಕೆಂದರೆ ಅವರ ನಾಯಕತ್ವದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ತವರಿನ ಸರಣಿಯನ್ನು 3-0 ಅಂತರದಲ್ಲಿ ಕಳೆದುಕೊಂಡಿತು. ಈಗ ಆಸ್ಟ್ರೇಲಿಯಾದಲ್ಲಿ ಅವರ ನಾಯಕತ್ವದಲ್ಲಿ ತಂಡವು ಅಡಿಲೇಡ್ ಟೆಸ್ಟ್‌ನಲ್ಲಿ ಸೋತಿದೆ.
ಭಾನುವಾರದ ಅಭ್ಯಾಸದ ವೇಳೆ ರೋಹಿತ್ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಚೆಂಡು ಅವರ ಎಡ ಮೊಣಕಾಲಿಗೆ ಬಡಿದಿತ್ತು. ಈ ಕುರಿತು ಅಪ್ಡೇಟ್ ನೀಡಿರುವ ರೋಹಿತ್, 'ಎಲ್ಲವೂ ಚೆನ್ನಾಗಿದೆ. ಕಳೆದ ಕೆಲವು ದಿನಗಳಿಂದ ನಾವು ಅಭ್ಯಾಸ ಮಾಡುತ್ತಿರುವ ಪಿಚ್‌ಗಳು ಹಳೆಯದಾಗಿದ್ದು, ಬಹುಶಃ ಈ ಪಿಚ್‌ಗಳನ್ನು ಬಿಗ್‌ಬಾಶ್‌ಗಾಗಿ ಬಳಸಲಾಗಿದೆ. ಇಂದು ನಮಗೆ ಹೊಸ ಪಿಚ್‌ನಲ್ಲಿ ಅಭ್ಯಾಸ ಮಾಡಲು ಅವಕಾಶ ಸಿಗುತ್ತದೆ. ಅದಕ್ಕೆ ತಕ್ಕಂತೆ ತಯಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications