For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲು ಇನ್ನೂ ಸಿದ್ಧವಾಗಿಲ್ಲ ಟೀಂ ಇಂಡಿಯಾ!

Ind vs Aus Test: These 3 Reasons That Team India Not Yet Ready For Border-Gavaskar Trophy

2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯುಟಿಸಿ) ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದ ಟೀಂ ಇಂಡಿಯಾ ರನ್ನರ್ ಅಪ್ ಆಗಿತ್ತು. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ಫೈನಲ್‌ಗೆ ತಲುಪುವ ಸನಿಹದಲ್ಲಿದೆ.

ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವೈಟ್ ವಾಶ್ ಮಾಡಿದ ನಂತರ, ಭಾರತ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಬೇಕೆಂದರೆ ಭಾರತ, ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೆಬ್ರವರಿ ಮಾರ್ಚ್‌ನಲ್ಲಿ ನಡೆಯಲಿರುವ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆಲ್ಲಬೇಕಿದೆ.

4 ಪಂದ್ಯಗಳಲ್ಲಿ ಕನಿಷ್ಠ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಟೀಂ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಪ್ರವೇಶಿಸಲಿದೆ. ಆಸ್ಟ್ರೇಲಿಯಾ ಟೆಸ್ಟ್ ಮಾದರಿಯಲ್ಲಿ ಸದ್ಯ ಪ್ರಚಂಡ ಫಾರ್ಮ್‌ನಲ್ಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡು ಪಂದ್ಯಗಳನ್ನು ಗೆದ್ದು, ಸರಣಿಯ ಕೊನೆಯ ಪಂದ್ಯಕ್ಕೆ ಸಜ್ಜಾಗಿದೆ.

ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಬೇಕೆಂದರೆ, ಭಾರತ ಬಲಿಷ್ಠ ತಂಡವನ್ನು ಕಣಕ್ಕಿಳಿಸಬೇಕಿದೆ. ಇಡೀ ತಂಡ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಭಾರತಕ್ಕೆ ಗೆಲ್ಲಲು ಸಾಧ್ಯವಾಗುತ್ತದೆ. ಆದರೆ, ಪ್ರತಿಷ್ಠಿತ ಟೆಸ್ಟ್ ಸರಣಿಗಾಗಿ ಭಾರತ ತಂಡ ಸಿದ್ಧವಾಗಿಲ್ಲ ಎನ್ನುತ್ತವೆ ಈ ಮೂರು ಅಂಶಗಳು.

ಪ್ರಮುಖ ಆಟಗಾರರ ಗಾಯದ ಸಮಸ್ಯೆ

ಪ್ರಮುಖ ಆಟಗಾರರ ಗಾಯದ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಭಾರತದ ಆರಂಭಿಕ ಜೋಡಿ ಉತ್ತಮ ಪ್ರದರ್ಶನ ನೀಡಿಲ್ಲ. ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಕೆಲವು ದಿನಗಳು ತಂಡದಿಂದ ಹೊರಗುಳಿದರೆ, ರೋಹಿತ್ ಶರ್ಮಾ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದರು.

ಭಾರತ ಹಲವು ವಿಭಿನ್ನ ಸಂಯೋಜನೆಗಳನ್ನು ಪ್ರಯತ್ನಿಸಿದರೂ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಕೆಎಲ್ ರಾಹುಲ್ 2022ರಲ್ಲಿ ಕೇವಲ ನಾಲ್ಕು ಟೆಸ್ಟ್ ಪಂದ್ಯಗಳನ್ನಾಡಿದ್ದು, ಕೇವಲ 137 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಕೇವಲ 2 ಪಂದ್ಯಗಳನ್ನಾಡಿದ್ದು 90 ರನ್ ಗಳಿಸಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಕೂಡ ಭಾರತದ ಬ್ಯಾಟಿಂಗ್ ಸ್ಥಿರವಾಗಿಲ್ಲ. ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆರು ಪಂದ್ಯಗಳಲ್ಲಿ 26.50 ಸರಾಸರಿಯಲ್ಲಿ 265 ರನ್ ಗಳಿಸಿದ್ದಾರೆ. ಶುಭಮನ್ ಗಿಲ್ ಕೂಡ 6 ಪಂದ್ಯಗಳನ್ನಾಡಿದ್ದು, 29.66 ರ ಸರಾಸರಿಯಲ್ಲಿ 178 ರನ್ ಗಳಿಸಿದ್ದಾರೆ.

ಶ್ರೈಯಸ್ ಅಯ್ಯರ್ ಮತ್ತು ಚೇತೇಶ್ವರ ಪೂಜಾರ ಮಾತ್ರ 2022ರಲ್ಲಿ 400 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ರಿಷಬ್ ಪಂತ್ ಅಪಘಾತದಲ್ಲಿ ಗಾಯಗೊಂಡು ಹೊರಗುಳಿದಿರುವುದು ತಂಡದ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಭಾರತದ ಬ್ಯಾಟಿಂಗ್ ಸುಧಾರಣೆಯಾಗದಿದ್ದರೆ, ಆಸ್ಟ್ರೇಲಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಎದುರಿಸುವುದು ಸಾಧ್ಯವಿಲ್ಲ.

Flashback 2022: ಈ ವರ್ಷ ಭಾರತದ 3 ಅತ್ಯುತ್ತಮ ಏಕದಿನ ಬ್ಯಾಟಿಂಗ್ ಪ್ರದರ್ಶನಗಳು

ಸಂದರ್ಭಕ್ಕೆ ತಕ್ಕಂತೆ ಆಡುವುದಿಲ್ಲ

ಸಂದರ್ಭಕ್ಕೆ ತಕ್ಕಂತೆ ಆಡುವುದಿಲ್ಲ

ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ-ಶಾಸ್ತ್ರಿ ಇದ್ದ ಸಮಯದಲ್ಲಿ ಭಾರತ ಆಕ್ರಮಣಕಾರಿ ನೀತಿಯನ್ನು ಅಳವಡಿಸಿಕೊಂಡಿತ್ತು. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ತವರಿನಲ್ಲಿ ಮಾತ್ರವಲ್ಲ ವಿದೇಶದಲ್ಲೂ ಕೂಡ ಟೆಸ್ಟ್ ಸರಣಿಯನ್ನು ಗೆದ್ದಿತ್ತು.

ಕೊಹ್ಲಿ ನಾಯಕತ್ವ ತ್ಯಜಿಸಿದ ನಂತರ, ಭಾರತ ಟೆಸ್ಟ್ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. 2022ರ ಆರಂಭದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸೋಲನುಭವಿಸಿತ್ತು. ಗೆಲ್ಲುವ ಪಂದ್ಯಗಳನ್ನು ಕೂಡ ಕೈಚೆಲ್ಲಿತ್ತು.

ಪಟೌಡಿ ಟ್ರೋಫಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮುಂದೂಡಲ್ಪಟ್ಟ ಟೆಸ್ಟ್‌ನಲ್ಲಿ, ಭಾರತ ತಂಡ ಸೋಲನುಭವಿಸಿತು. ಇಂಗ್ಲೆಂಡ್‌ನ ಬಾಝ್‌ಬಾಲ್ ನೀತಿ ವಿರುದ್ಧ ಭಾರತಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ.

ಬಾಂಗ್ಲಾದೇಶದ ವಿರುದ್ಧದ ಸರಣಿಯ 2ನೇ ಪಂದ್ಯದಲ್ಲಿ ಕೂಡ ಭಾರತ ಪ್ರಯಾಸದ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ಆಡಲು ನಿರ್ದಿಷ್ಟ ರಣನೀತಿ ಬೇಕು.

ಪ್ರಮುಖ ಆಟಗಾರ ಅಲಭ್ಯತೆ

ಪ್ರಮುಖ ಆಟಗಾರ ಅಲಭ್ಯತೆ

2022ರಲ್ಲಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದು ತಂಡದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಅವರು 2022ರಲ್ಲಿ 5 ಟೆಸ್ಟ್ ಪಂದ್ಯಗಳನ್ನಾಡಿದ್ದು 22 ವಿಕೆಟ್ ಪಡೆದಿದ್ದರು.

ಭಾರತದ ಪಿಚ್‌ಗಳಲ್ಲಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸುವ ನಿರೀಕ್ಷೆಯಿದ್ದು, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಮೇಲೆ ಹೆಚ್ಚಿನ ಅವಲಂಬನೆ ಮಾಡುತ್ತದೆ. ಬುಮ್ರಾ ವಾಪಸಾದರೆ ತಂಡದ ಬೌಲಿಂಗ್ ಮತ್ತಷ್ಟು ಬಲಿಷ್ಠಗೊಳ್ಳಲಿದೆ.

ರಿಷಬ್ ಪಂತ್ ಅಪಘಾತದಲ್ಲಿ ಗಾಯಗೊಂಡಿರುವುದು ತಂಡಕ್ಕೆ ಮತ್ತೊಂದು ದೊಡ್ಡ ಹೊಡೆತ. 2022ರಲ್ಲಿ 7 ಪಂದ್ಯಗಳಲ್ಲಿ 61.81 ಸರಾಸರಿಯೊಂದಿಗೆ 680 ರನ್ ಗಳಿಸುವ ಮೂಲಕ ಅವರ ಪ್ರಮುಖ ರನ್ ಸ್ಕೋರರ್ ಆಗಿದ್ದಾರೆ.

ರವೀಂದ್ರ ಜಡೇಜಾ ಏಷ್ಯಾ ಕಪ್ 2022ರ ಸಂದರ್ಭದಲ್ಲಿ ಗಾಯಗೊಂಡಿದ್ದರು, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ತಂಡಕ್ಕೆ ವಾಪಸಾಗುವ ಸಾಧ್ಯತೆ ಇದೆ. ಆದರೆ, ಟೆಸ್ಟ್ ಸರಣಿಗೆ ಲಭ್ಯವಿರುತ್ತಾರೆಯೆ ಎಂದು ನೋಡಬೇಕಿದೆ. ಪ್ರಮುಖ ಆಟಗಾರರ ಅಲಭ್ಯತೆ ತಂಡದ ಮೇಲಿನ ಒತ್ತಡವನ್ನು ಹೆಚ್ಚಿಸುವ ಸಾಧ್ಯತೆ ಇದೆ.

Story first published: Sunday, January 1, 2023, 5:45 [IST]
Other articles published on Jan 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+