IND vs AUS Test: ಭಾರತದ ಪರ ಇಬ್ಬರು ಪದಾರ್ಪಣೆ: ಇಬ್ಬರು ಕನ್ನಡಿಗರಿಗೆ ಸ್ಥಾನ
ಬಹುನಿರೀಕ್ಷಿತ ಭಾರತ ಹಾಗೂ ಬಾರ್ಡರ್ ಗವಾಸ್ಕರ್ ಸರಣಿ ಪರ್ತ್‌ನಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಜಸ್ಪ್ರಿತ್ ಬುಮ್ರಾ ಮುನ್ನಡೆಸಲಿದ್ದಾರೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಪರ ಇಬ್ಬರು ವೇಗಿಗಳು ತಂಡವನ್ನು ಮುನ್ನಡೆಸುತ್ತಿರುವುದು ಕುತೂಹಲ ಮೂಡಿಸಿದೆ. ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಪರ್ತ್‌ನ ಮೊದಲ ಟೆಸ್ಟ್‌ನಲ್ಲಿ ಇಬ್ಬರು ಪದಾರ್ಪಣೆ ಮಾಡಿದರೆ, ಕರ್ನಾಟಕದ ಇಬ್ಬರು ಆಟಗಾರರು ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಭಾರತದ ಪರ ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಹಾಗೂ ದೇವದತ್ ಪಡಿಕ್ಕಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಹುಲ್ ಆರಂಭಿಕರಾಗಿ ಕಣಕ್ಕೆ ಇಳಿದಿದ್ದಾರೆ. ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಬ್ಬರು ಪದಾರ್ಪಣೆ
ಟೀಮ್ ಇಂಡಿಯಾದ ಪರ ಇಬ್ಬರು ಯುವಕರು ಪದಾರ್ಪಣೆ ಮಾಡಿದ್ದಾರೆ. ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಪ್ಲೇಯಿಂಗ್ 11ನಲ್ಲಿ ಸೇರಿಸಿಕೊಂಡಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಇದೊಂದು ವಿಶೇಷ ಕ್ಷಣವಾಗಿತ್ತು. ಇವರಲ್ಲದೆ ವೇಗಿ ಹರ್ಷಿತ್ ರಾಣಾ ಅವರಿಗೂ ಪದಾರ್ಪಣೆ ಅವಕಾಶ ನೀಡಲಾಗಿದೆ. ವಿರಾಟ್ ಕೊಹ್ಲಿ ಕ್ಯಾಪ್ ನೀಡಿ ಇವರನ್ನು ತಂಡಕ್ಕೆ ಬರಮಾಡಿಕೊಂಡಿದ್ದಾರೆ.
ಭಾರತದ ಪರ ಜಸ್ಪ್ರಿತ್ ಬುಮ್ರಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರ ವೈಯಕ್ತಿಕ ಕಾರಣಗಳಿಂದ ಮೊದಲ ಟೆಸ್ಟ್‌ನಿಂದ ದೂರ ಉಳಿದಿದ್ದರು. ಹೀಗಾಗಿ ಇವರ ಸ್ಥಾನದಲ್ಲಿ ಉಪನಾಯಕ ಜಸ್ಪ್ರಿತ್ ಬುಮ್ರಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಮ್ರಾ ಎರಡನೇ ಬಾರಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಜುರೇಲ್‌ಗೆ ಅವಕಾಶ
ಭಾರತ ಎ ಹಾಗೂ ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಯುವ ಆಟಗಾರ ಧ್ರುವ್ ಜುರೇಲ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಇವರು ಮಿಡ್ಲ್ ಆರ್ಡರ್‌ನಲ್ಲಿ ಬ್ಯಾಟ್ ಮಾಡಲಿದ್ದಾರೆ.
ಸುಂದರ್‌ಗೆ ಸ್ಥಾನ
ಮೊದಲ ಟೆಸ್ಟ್‌ನಲ್ಲಿ ಭಾರತ ಕೇವಲ ಒಬ್ಬರಿಗೆ ಸ್ಥಾನ ಪಡೆದಿದ್ದಾರೆ. ಈ ಟೆಸ್ಟ್ ಸರಣಿಯಲ್ಲಿ ನಾಯಕ ಜಸ್ಪ್ರಿತ್ ಬುಮ್ರಾಗೆ ಮೊಹಮ್ಮದ್ ಸಿರಾಜ್ ಅವರು ಅವಕಾಶ ಪಡೆದಿದ್ದಾರೆ. ಇನ್ನು ಮೂರನೇ ವೇಗಿಯಾಗಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್ ರೂಪದಲ್ಲಿ ಯುವ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಅವರು ಅಂಗಳ ಪ್ರವೇಶಿಸಲಿದ್ದಾರೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್,
ಆಸ್ಟ್ರೇಲಿಯಾ ತಂಡ: ನಾಥನ್ ಮೆಕ್‌ಸ್ವೀನಿ, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications