IND vs AUS Test: ಕಾಂಗರೂ ನಾಡಿನಲ್ಲಿ ಮುಂದುವರೆದ ವಿರಾಟ್ ಫ್ಲಾಪ್ ಶೋ: ದಾಖಲೆ ತಪ್ಪಿಸಿಕೊಂಡ ಯಶಸ್ವಿ ಜೈಸ್ವಾಲ್
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪರ್ತ್‌ನಲ್ಲಿ ಆರಂಭವಾಗಿದೆ. ಈ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಮೊದಲ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಲ್ಲಿ ಇಬ್ಬರು ಯುವ ಆಟಗಾರರಿಗೆ ಪದಾರ್ಪಣೆ ಮಾಡುವ ಅವಕಾಶ ನೀಡಲಾಯಿತು. ಇನ್ನು ಟೀಮ್ ಇಂಡಿಯಾದಲ್ಲಿ ಇಬ್ಬರು ಕನ್ನಡಿಗರು ಸ್ಥಾನ ಪಡೆದರು. ಟೀಮ್ ಇಂಡಿಯಾದ ನಾಯಕ ಜಸ್ಪ್ರಿತ್ ಬುಮ್ರಾ ಎರಡನೇ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಆರಂಭಿಕ ಯಶಸ್ವಿ ಜೈಸ್ವಾಲ್ ಸೊನ್ನೆ ಸುತ್ತಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಅವಕಾಶ ಪಡೆದ ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಎಲ್ಲರ ಚಿತ್ತ ಕದ್ದ ವಿರಾಟ್ ಕೊಹ್ಲಿ, ಅಂಗಳಕ್ಕೆ ಇಳಿಯುತ್ತಿದ್ದಂತೆ ಭಾರತೀಯ ಅಭಿಮಾನಿಗಳಲ್ಲಿ ನವ ಉತ್ಸಾಹ ತುಂಬಿದರು.

ಫ್ಲಾಪ್ ಶೋ..
ಮೈದಾನಕ್ಕೆ ವಿರಾಟ್ ಎಂಟ್ರಿ ನೀಡುವಾಗ ಇವರ ಬಾಡಿ ಲ್ಯಾಂಗ್ವೇಜ್ ಚೆನ್ನಾಗಿತ್ತು. ಶುಕ್ರವಾರ ದೊಡ್ಡ ಇನಿಂಗ್ಸ್ ಆಡುವ ಕನಸು ಹೊಂದಿದ್ದರು. ಆದರೆ ಈ ಆಸೆ ಫಲಿಸಲಿಲ್ಲ. ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 12 ಎಸೆತಗಳನ್ನು ಎದುರಿಸಿ 5 ರನ್ ಬಾರಿಸಿ ಔಟ್ ಆದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಲಯಕ್ಕೆ ಮರಳುವ ವಿಶ್ವಾಸವನ್ನು ವಿರಾಟ್ ಹುಸಿಯಾಗಿಸಿದರು. ಪರ್ತ್ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ವಿರಾಟ್ ನಿರಾಸೆ ಅನುಭವಿಸಿದರು. ಜೋಶ್ ಹ್ಯಾಜಲ್‌ವುಡ್‌ನ ಶಾರ್ಟ್ ಪಿಚ್ ಬಾಲ್ ಅನ್ನು ಗ್ರಹಿಸಲು ಕೊಹ್ಲಿಗೆ ಸಾಧ್ಯವಾಗಲಿಲ್ಲ.
ಈ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10ನೇ ಬಾರಿ ಜೋಶ್ ಹ್ಯಾಜಲ್ ವುಡ್ ಗೆ ಬಲಿಯಾದರು. ವಿರಾಟ್ ಕೊಹ್ಲಿ ಅವರನ್ನು ಹೆಚ್ಚು ಬಾರಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಕೆಟ್ ಪಡೆದ ಜಂಟಿ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ಎರಡನೇ ಬೌಲರ್ ಎಂಬ ಹೆಗ್ಳಳಿಕೆ ಜೋಶ್ ಅವರ ಪಾಲಾಯಿತು. ಇದಕ್ಕೂ ಮೊದಲು ಜೇಮ್ಸ್ ಆಂಡರ್ಸನ್ ಮತ್ತು ಮೊಯಿನ್ ಅಲಿ ತಲಾ 10 ಬಾರಿ ಕೊಹ್ಲಿಯನ್ನು ಔಟ್ ಮಾಡಿದ್ದಾರೆ. ಅಷ್ಟೇ ಅಲ್ಲ, ವಿರಾಟ್ ಕೊಹ್ಲಿಯನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ಆಸ್ಟ್ರೇಲಿಯಾದ ಬೌಲರ್ ಎಂಬ ಹೆಗ್ಗಳಿಕೆಗೆ ಹೇಜಲ್ ವುಡ್ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿಯನ್ನು ಜೇಮ್ಸ್ ಆಂಡರ್ಸನ್ ಸಹ 10 ಬಾರಿ ಪೆವಿಲಿಯನ್ ಸೇರಿಸಿದ್ದಾರೆ.

ವಿರಾಟ್ ಕೊಹ್ಲಿ ಕಳಪೆ ಫಾರ್ಮ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ ಬೌಲರ್ ಎಂಬ ಕೀರ್ತಿ ನ್ಯೂಜಿಲೆಂಡ್ ತಂಡದ ಟೀಮ್ ಸೌಥಿ ಅವರಿಗೆ ಸಲ್ಲುತ್ತದೆ. ಇವರು 11 ಬಾರಿ ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್‌ನಲ್ಲಿ ಸತತ ಐದು ಇನ್ನಿಂಗ್ಸ್‌ಗಳಲ್ಲಿ 20 ರನ್ ಗಳಿಸಲು ವಿಫಲರಾಗಿದ್ದಾರೆ. ಈ ಮೂಲಕ 7 ವರ್ಷಗಳಲ್ಲಿ ಮೊದಲ ಬಾರಿಗೆ ಟೆಸ್ಟ್‌ನಲ್ಲಿ ಸತತ 5 ಇನ್ನಿಂಗ್ಸ್‌ಗಳಲ್ಲಿ 20 ರನ್‌ಗಳ ಗಡಿ ಮುಟ್ಟಲು ಕೊಹ್ಲಿ ವಿಫಲರಾಗಿದ್ದಾರೆ.
ಯಶಸ್ವಿ ಜೈಸ್ವಾಲ್ ವಿಫಲ
ಟೀಮ್ ಇಂಡಿಯಾದ ಆರಂಭಿಕ ಸ್ಟಾರ್ ಆಟಗಾರ ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ ವಿಶ್ವ ದಾಖಲೆಯನ್ನು ಬರೆಯುವುದನ್ನು ತಪ್ಪಿಸಿಕೊಂಡಿದ್ದಾರೆ. ಭಾರತದ ಭರವಸೆಯ ಬ್ಯಾಟರ್ ಮೊದಲ ಇನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿದರು. 2024 ರಲ್ಲಿ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 32 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಎರಡು ಸಿಕ್ಸರ್ ಬಾರಿಸುವಲ್ಲಿ ಸಫಲರಾಗಿದ್ದರೆ, ವಿಶ್ವ ದಾಖಲೆ ನಿರ್ಮಿಸಬಹುದಿತ್ತು. 2014 ರಲ್ಲಿ ನ್ಯೂಜಿಲೆಂಡ್ ತಂಡದ ಬ್ರೆಂಡಮ್ ಮೆಕಲಂ ಒಂದೇ ವರ್ಷ 33 ಸಿಕ್ಸರ್‌ಗಳನ್ನು ಬಾರಿಸಿದ್ದ ದಾಖಲೆ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications