Team India: ಗೌತಮ್ ಗಂಭೀರ್ ಟೀಮ್ ಇಂಡಿಯಾ ಸೇರುವುದು ಯಾವಾಗ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 6 ರಂದು ಅಡಿಲೇಡ್‌ನಲ್ಲಿ ನಡೆಯಲಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಟೀಮ್ ಇಂಡಿಯಾಕ್ಕೆ ಹೊಸ ಸವಾಲು ಎದುರಾಗಿದೆ. ಇದೀಗ ಅಡಿಲೇಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ಹೆಡ್ ಕೋಚ್ ಗೌತಮ್ ಗಂಭೀರ್ ಶೀಘ್ರದಲ್ಲೇ ಅಡಿಲೇಡ್ ತಲುಪಲಿದ್ದು, ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.
ಗೌತಮ್ ಗಂಭೀರ್ ಪರ್ತ್ ಟೆಸ್ಟ್ ಪಂದ್ಯದ ನಂತರ ವೈಯಕ್ತಿಕ ಕಾರಣದಿಂದ ಟೀಮ್ ಇಂಡಿಯಾವನ್ನು ತೊರೆದು ಭಾರತಕ್ಕೆ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಿತ್ತು. ಹವಾಮಾನ ವೈಪರೀತ್ಯದಿಂದಾಗಿ ಅಭ್ಯಾಸ ಪಂದ್ಯವನ್ನು 46 ಓವರ್‌ಗಳಿಗೆ ಮಾತ್ರ ಆಡಲಾಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯುವ ಆಟಗಾರರ ಅದ್ಭುತ ಪ್ರದರ್ಶನ ನೀಡಿದರು.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನವಾದ ನವೆಂಬರ್ 26 ರಂದು ಗಂಭೀರ್ ಪರ್ತ್‌ನಲ್ಲಿ ಭಾರತ ತಂಡವನ್ನು ತೊರೆದಿದ್ದರು. ಮೊದಲ ಟೆಸ್ಟ್‌ನಲ್ಲಿ ಭಾರತ 295 ರನ್‌ಗಳ ಜಯ ಸಾಧಿಸಿತ್ತು. ಭಾರತ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ. ಆಸ್ಟ್ರೇಲಿಯಾದಲ್ಲಿ ಭಾರತ ತಂಡ ಕಳೆದ ಎರಡು ಸರಣಿಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ. 2018-19ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಗೆದ್ದರೆ, 2020-21ರಲ್ಲಿ ಸರಣಿ ಗೆದ್ದ ಭಾರತ ತಂಡವನ್ನು ನಾಯಕನಾಗಿ ಅಜಿಂಕ್ಯ ರಹಾನೆ ಮುನ್ನಡೆಸಿದ್ದರು. ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಹ್ಯಾಟ್ರಿಕ್ ಸರಣಿ ಗೆಲ್ಲಲು ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿದೆ.
ಪ್ಲೇಯಿಂಗ್-11 ಟೆನ್ಷನ್
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿನ ಜನನದ ಕಾರಣ ಆಸ್ಟ್ರೇಲಿಯಾಬ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ ಗಾಯದ ಕಾರಣ ಶುಭಮನ್ ಗಿಲ್ ಕೂಡ ಪರ್ತ್ ಟೆಸ್ಟ್ ಆಡಿರಲಿಲ್ಲ. ಇದೀಗ ಅಡಿಲೇಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ರೋಹಿತ್ ಮತ್ತು ಗಿಲ್ ಟೀಮ್ ಇಂಡಿಯಾ ಸೇರಿರುವುದು ತಂಡಕ್ಕೆ ಮತ್ತಷ್ಟು ಬಲ ಬಂದಿದೆ. ಈಗ ಟೀಮ್ ಇಂಡಿಯಾ ಪ್ಲೇಯಿಂಗ್-11 ಅನ್ನು ಅಂತಿಮಗೊಳಿಸುವುದು ಗಂಭೀರ್ ಅವರ ಮೊದಲ ಆದ್ಯತೆಯಾಗಿದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಎಲ್ಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರ ಬದಲಿಗೆ ರೋಹಿತ್ ಮತ್ತು ಗಿಲ್ ಆಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications