Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

BGT 2023: ಸ್ಮಿತ್, ಬಾರ್ಡರ್, ಹೇಡನ್ ರೆಕಾರ್ಡ್ ಬ್ರೇಕ್: ಒಂದೇ ಇನ್ನಿಂಗ್ಸ್‌ನಲ್ಲಿ ದಿಗ್ಗಜರನ್ನು ಹಿಂದಿಕ್ಕಿದ ಖವಾಜ

Ind vs Aus: Usman Khawaja marathon innings, break the record of steve Smith, Border, Hayden in India

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಭಾರತದ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಬಹುತೇಕ 7 ಸೆಶನ್‌ಗಳಲ್ಲಿ ಬ್ಯಾಟಿಂಗ್ ನಡೆಸಿದ ಆಸಿಸ್ ಅನುಭವಿ ಆಟಗಾರ 180 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಈ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪರವಾಗಿ ಉಸ್ಮಾನ್ ಖವಾಜ ಕೆಲ ಅಪರೂಪದ ದಾಖಲೆಗಳನ್ನು ಬರೆದಿದ್ದು ಆಸ್ಟ್ರೇಲಿಯಾದ ದಿಗ್ಗಜ ಆಟಗಾರರಾದ ಅಲನ್ ಬಾರ್ಡರ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ಹೇಡನ್ ದಾಖಲೆಯನ್ನು ಮುರಿದು ವಿಶೇಷ ಸಾಧನೆ ಮಾಡಿದ್ದಾರೆ.

36ರ ಹರೆಯದ ಉಸ್ಮಾನ್ ಖವಾಜ ಈ ಪಂದ್ಯದಲ್ಲಿ ಭಾರತದ ನೆಲದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಉಸ್ಮಾನ್ ಖವಾಜ 422 ಎಸೆತಗಳನ್ನು ಎದುರಿಸಿ 180 ರನ್‌ಗಳಿಸಿದರು. ಇದು ಆಸ್ಟ್ರೇಲಿಯಾದ ಯಾವುದೇ ಆಟಗಾರ ಭಾರತದ ನೆಲದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಎದುರಿಸಿದ ಅತ್ಯಂತ ಹೆಚ್ಚಿನ ಎಸೆತಗಳು ಎನಿಸಿಕೊಂಡಿದೆ.

ಅಂದ ಹಾಗೆ ಇದಕ್ಕೂ ಮುನ್ನ ಈ ದಾಖಲೆ ಗ್ರಹಾಮ್ ಯಲ್ಲೋಪ್ ಹೆಸರಿನಲ್ಲಿತ್ತು. 1979ರಲ್ಲಿ ಈಡನ್ ಗಾರ್ಡನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅವರು 492 ಎಸೆತಗಳನ್ನು ಎದುರಿಸಿದ್ದರು. ನಂತರದ ಸ್ಥಾನದಲ್ಲಿ ಸ್ಟೀವ್ ಸ್ಮಿತ್ ಇದ್ದರು. 2017ರಲ್ಲಿ ಸ್ಮಿತ್ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ 361 ಎಸೆತ ಎದುರಿಸಿದ್ದರು. ಇನ್ನು ಆಸಿಸ್ ದಿಗ್ಗಜ ಆಲನ್ ಬಾರ್ಡರ್ 1979ರಲ್ಲಿ 360 ಎಸೆತಗಳನ್ನು ಎದುರಿಸಿ ಈ ಪಟ್ಟಿಯಲ್ಲಿದ್ದಾರೆ. ಇದೀಗ ಈ ಎಲ್ಲಾ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ ಉಸ್ಮಾನ್ ಖವಾಜ.

ಇನ್ನು ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನವೂ ಉಸ್ಮಾನ್ ಖವಾಜಾ ಈ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಎರಡು ಅರ್ಧ ಶತಕ ಸಿಡಿಸಿದ್ದಾರೆ. ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಮಹತ್ವದ ಅರ್ಧ ಶತಕ ಸಿಡಿಸಿದ್ದರು. ಈ ಪ್ರದರ್ಶನದಿಂದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ನಿರ್ಣಾಯಕ 88 ರನ್‌ಗಳ ಮುನ್ನಡೆಯನ್ನು ಕೂಡ ಪಡೆದುಕೊಂಡಿತ್ತು. ಬಳಿಕ ಈ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದ್ದು ಸರಣಿಯ ಹಿನ್ನಡೆಯನ್ನು 1-2ಕ್ಕೆ ತಗ್ಗಿಸಿಕೊಂಡಿತ್ತು.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್

ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕನ್ನೇಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್

Story first published: Friday, March 10, 2023, 16:03 [IST]
Other articles published on Mar 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+