75ನೇ ಅಂತಾರಾಷ್ಟ್ರೀಯ ಶತಕ: ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ವಿಶ್ವದಾಖಲೆ ಮುರಿದ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ತಮ್ಮ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ 241 ಎಸೆತಗಳನ್ನು ಎದುರಿಸಿ 28ನೇ ಟೆಸ್ಟ್ ಶತಕ ಬಾರಿಸಿದ್ದಾರೆ. ಈ ಮೂಲಕ ತಮ್ಮ 75ನೇ ಅಂತಾರಾಷ್ಟ್ರೀಯ ಶತಕವನ್ನು ಕೂಡ ಪೂರ್ಣಗೊಳಿಸಿದಂತಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪ್ರಸ್ತುತ ಶತಕಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗಿಂತ ಸಚಿನ್ ತೆಂಡೂಲ್ಕರ್ ಮಾತ್ರವೇ ಮುಂದಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ 100 ಶತಕಗಳನ್ನು ಹೊಂದಿದ್ದು ಈ ಮಹೋನ್ನತ ದಾಖಲೆಯ ಬೆನ್ನತ್ತಿದ್ದಾರೆ ವಿರಾಟ್ ಕೊಹ್ಲಿ. ಆದರೆ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ದೊಡ್ಡ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಚಿನ್ ತೆಂಡೂಲ್ಕರ್ ದಾಖಲೆ ಭಗ್ನ
ಕ್ರಿಕೆಟ್ ಇತಿಹಾಸದಲ್ಲಿ 75ಕ್ಕೂ ಅಧಿಕ ಶತಕ ಸಿಡಿಸಿರುವ ಆಟಗಾರರ ಪಟ್ಟಿಯಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರವೇ ಇದ್ದಾರೆ. ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ ಆ ಇಬ್ಬರು ಸಾಧಕರು. ಈ ವಿಶೇಷ ಮೈಲಿಗಲ್ಲನ್ನು ಅತ್ಯಂತ ವೇಗವಾಗಿ ದಾಟಿದ ದಾಖಲೆಯನ್ನು ವಿರಾಟ್ ಕೊಹ್ಲಿ ಈಗ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್‌ಗಿಂತಲೂ ಕಡಿಮೆ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ 75ನೇ ಅಂತಾರಾಷ್ಟ್ರೀಯ ಶತಕವನ್ನು ಪೂರ್ಣಗೊಳಿಸಲು 566 ಇನ್ನಿಂಗ್ಸ್‌ಗಳನ್ನು ಬಳಸಿದ್ದರು. ಆದರೆ ವಿರಾಟ್ ಕೊಹ್ಲಿ ಈ ಸಾಧನೆಯನ್ನು 552 ಇನ್ನಿಂಗ್ಸ್‌ಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ಮಹಾ ದಾಖಲೆಯೊಂದನ್ನು ವಿರಾಟ್ ಕೊಹ್ಲಿ ಮುರಿದಂತಾಗಿದೆ.
ಸುದೀರ್ಘ ಕಾಲದ ಕಾಯುವಿಕೆ ಅಂತ್ಯ
ಇನ್ನು ವಿರಾಟ್ ಕೊಹ್ಲಿ ಇದಕ್ಕೂ ಮುನ್ನ ಟೆಸ್ಟ್ ಮಾದರಿಯಲ್ಲಿ ತಮ್ಮ ಕೊನೆಯ ಶತಕ ಸಿಡಿಸಿದ್ದು 2019ರ ನವೆಂಬರ್‌ನಲ್ಲಿ. ಅಂದು ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದರು. ಆದರೆ ಅದಾದ ಬಳಿಕ ಎರಡೂವರೆ ವರ್ಷಗಳ ಕಾಲ ಫಾರ್ಮ್ ಕಳೆದುಕೊಂಡ ಕೊಹ್ಲಿ ಸಾಕಷ್ಟು ಟೀಕೆಗೂ ಗುರಿಯಾಗಿದ್ದರು.
ಆದರೆ ಕಳೆದ ವರ್ಷ ಏಷ್ಯಾ ಕಪ್‌ನಲ್ಲಿ ಫಾರ್ ಕಂಡುಕೊಂಡ ವಿರಾಟ್ ಕೊಹ್ಲಿ ಬಳಿಕ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಟಿ20ಯಲ್ಲಿ ಚೊಚ್ಚಲ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಏಕದಿನ ಮಾದರಿಯಲ್ಲಿಯೂ ಕಳೆದ ಮೂರು ತಿಂಗಳಿನಲ್ಲಿ ಮೂರು ಶತಕ ಸಿಡಿಸಿದ್ದಾರೆ. ಇದೀಗ ಟೆಸ್ಟ್‌ನಲ್ಲಿಯೂ ಕೊಹ್ಲಿ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications