Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಗಬ್ಬಾ ಟೆಸ್ಟ್‌ನಲ್ಲಿ 2 ರನ್ ಗಳಿಸಿ ರಾಹುಲ್ ದ್ರಾವಿಡ್ ದಾಖಲೆ ಮುರಿದ ಕೊಹ್ಲಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯವು ಬ್ರಿಸ್ಬೇನ್‌ನ ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ 100ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಗಬ್ಬಾ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ರನ್ ಕಲೆ ಹಾಕುವ ಮೂಲಕ ಟೀಮ್ ಇಂಡಿಯಾ ಮಾಜಿ ಹೆಡ್‌ಕೋಚ್ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದಿದ್ದಾರೆ.

ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಬ್ಯಾಟರ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಭಾರತದ ಬ್ಯಾಟರ್ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ ಗಬ್ಬಾ ಟೆಸ್ಟ್ ನಲ್ಲಿ 2 ರನ್ ಗಳಿಸುವ ಮೂಲಕ ಸಾಧನೆ ಮಾಡಿರುವುದು ವಿಶೇಷವಾಗಿದೆ.

IND vs AUS Virat Kohli breaks Rahul Dravid record by scoring 2 runs in Gabba Test

ಆಸ್ಟ್ರೇಲಿಯಾ ವಿರುದ್ಧ ರಾಹುಲ್ ದ್ರಾವಿಡ್ 62 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 2166 ರನ್ ಗಳಿಸಿದ್ದಾರೆ. ಇದೀಗ ವಿರಾಟ್ ಕೊಹ್ಲಿ 48 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 2 ರನ್‌ಗಳ ಕಲೆ ಹಾಕುವ ಮೂಲಕ 2168 ರನ್ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ 3630 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ವಿವಿಎಸ್ ಲಕ್ಷ್ಮಣ್ 2434 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಅಬ್ಬರಿಸಿ ಮಂಕಾದ ಕೊಹ್ಲಿ

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 100 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು. ಇದಾದ ನಂತರ ನಡೆದ ಎರಡು ಟೆಸ್ಟ್ ಪಂದ್ಯಗಳ ಮೂರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಮಂಕಾಗಿದ್ದಾರೆ. ಪ್ರಸ್ತುತ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 17 ಶತಕಗಳ ಸಹಾಯದಿಂದ 5329 ರನ್ ಗಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ 100 ಟೆಸ್ಟ್ ಪಂದ್ಯಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ ನಂತರ ಎರಡನೇ ಭಾರತದ ಆಟಗಾರ ಎನಿಸಿಕೊಂಡಿದ್ದಾರೆ.

ಭಾರತದ ಟಾಪ್ ಆರ್ಡರ್ ಕುಸಿತ

ಗಬ್ಬಾ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 445 ರನ್ ಗಳಿಸಿದೆ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಭಾರತ ಇದುವರೆಗೆ ಮೊದಲ ಇನಿಂಗ್ಸ್‌ನಲ್ಲಿ 17 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 51 ರನ್ ಗಳಿಸಿದೆ. ಗಬ್ಬಾ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 3 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ವಿರಾಟ್ ಕೊಹ್ಲಿ ಅವರನ್ನು ಜೋಶ್ ಹ್ಯಾಜಲ್‌ವುಡ್ ಔಟ್ ಮಾಡಿದರು. ಕೆಎಲ್ ರಾಹುಲ್ (33) ಮತ್ತು ರೋಹಿತ್ ಶರ್ಮಾ (0) ಅಜೇಯರಾಗುಳಿದಿದ್ದಾರೆ. ಯಶಸ್ವಿ ಜೈಸ್ವಾಲ್ (4), ಶುಭಮನ್ ಗಿಲ್ (1) ಮತ್ತು ರಿಷಬ್ ಪಂತ್ (9) ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ.

Story first published: Monday, December 16, 2024, 14:14 [IST]
Other articles published on Dec 16, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+