Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

King is Back: ಪರ್ತ್‌ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ವೀರಾವೇಶದ ಶತಕ

ಭಾರತ ತಂಡದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಕೊನೆಗೂ 81ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಮೂಲಕ ಅಭಿಮಾನಿಗಳ ಬಹುದಿನಗಳ ಕಾಯುವಿಕೆಗೆ ತೆರೆ ಎಳೆದಿದ್ದಾರೆ. ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸ್ಫೋಟಕ ಶತಕ ಬಾರಿಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.

ಪರ್ತ್‌ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 2 ಸಾವಿರ ರನ್ ಪೂರೈಸಿದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಈಗ ತಮ್ಮ ಹೆಸರಿನಲ್ಲಿ 81 ಶತಕಗಳನ್ನು ಹೊಂದಿದ್ದಾರೆ. ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 100 ಶತಕಗಳ ದಾಖಲೆಯನ್ನು ಮಾಡಿದ್ದು, ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 81 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 71 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

IND vs AUS Virat Kohli hits brilliant century in Perth Test

ವಿರಾಟ್ ಕೊಹ್ಲಿ 2023ರ ಜುಲೈ 21ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಶತಕ ಗಳಿಸಿದ್ದರು. ಇದಾದ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮಂಕಾಗಿದ್ದರು. ತವರಿನಲ್ಲಿ ನಡೆದ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಗಳಲ್ಲಿ ವಿರಾಟ್ ಕೊಹ್ಲಿ ರನ್ ಗಳಿಸಲು ಪರದಾಟ ನಡೆಸಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ತಮ್ಮ ಹಳೆಯ ಟ್ರ್ಯಾಕ್‌ಗೆ ಮರಳಿದ್ದು, ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಕೇವಲ 5 ರನ್‌ ಗಳಿಸಿ ಔಟಾಗಿದ್ದರು. ಈಗ ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಲಯವನ್ನು ಕಂಡುಕೊಂಡರು. ತಾಳ್ಮೆಯುತ ಆಟವಾಡಿದ ಕೊಹ್ಲಿ ರನ್ ಕಲೆ ಹಾಕಿದರು. ಕೊಹ್ಲಿ ಎದುರಿಸಿದ 143 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 100 ರನ್ ಕೆಲ ಹಾಕಿದರು. ಇದರೊಂದಿಗೆ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 487 ರನ್ ಕಲೆ ಹಾಕುವ ಮೂಲಕ ಡಿಕ್ಲೇರ್ ಮಾಡಿಕೊಂಡಿತು. ಆಸ್ಟ್ರೇಲಿಯಾ ತಂಡಕ್ಕೆ ಭಾರತ 534 ರನ್‌ಗಳ ಟಾರ್ಗೆಟ್ ನೀಡಿದೆ.

ಆಸ್ಟ್ರೇಲಿಯಾ ತಂಡಕ್ಕೆ ಭಾರತ 534 ರನ್‌ಗಳ ಟಾರ್ಗೆಟ್ ನೀಡಿದೆ. ಗುರಿ ಬೆನ್ನಟ್ಟಿರುವ ಆಸ್ಟ್ರೇಲಿಯಾ ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 12 ರನ್ ಕಲೆ ಹಾಕಿದೆ. ನಾಥನ್ ಮೆಕ್‌ಸ್ವೀನಿ(0), ನಾಯಕ ಪ್ಯಾಟ್ ಕಮ್ಮಿನ್ಸ್ (2) ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ (3) ತಂಡಕ್ಕೆ ಆಸರೆಯಾಗಲಿಲ್ಲ. ಟೀಮ್ ಇಂಡಿಯಾ ಪರ ನಾಯಕ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 1 ವಿಕೆಟ್‌ ಉರುಳಿಸಿದ್ದಾರೆ.

Story first published: Sunday, November 24, 2024, 15:13 [IST]
Other articles published on Nov 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+