Virat Kohli: ಅಡಿಲೇಡ್ ಟೆಸ್ಟ್‌ಗೂ ಮುನ್ನ ವಿರಾಟ್ ಕೊಹ್ಲಿಗೆ ಗಾಯ?
ಬಾರ್ಡರ್-ಗವಾಸ್ಕರ್ ಟ್ರೋಫಿ 2024ರ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆದ್ದು 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ಆರಂಭವಾಗಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲಲು ಯೋಜನೆ ರೂಪಿಸಿದೆ. ಅಡಿಲೇಡ್ ಟೆಸ್ಟ್‌ಗೂ ಮುನ್ನ ಟೀಮ್ ಇಂಡಿಯಾ ನೆಟ್ಸ್‌ನಲ್ಲಿ ಬೆವರು ಹರಿಸುತ್ತಿದೆ. ಆದರೆ ಈ ನಡುವೆ ವಿರಾಟ್ ಕೊಹ್ಲಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಮ್ ಇಂಡಿಯಾದ ಟೆನ್ಶನ್ ಅನ್ನು ಹೆಚ್ಚಿಸಿದೆ.
ಆಸ್ಟ್ರೇಲಿಯಾ ವಿರುದ್ಧ ಅಡಿಲೇಟ್ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ವಿರಾಟ್ ಕೊಹ್ಲಿ ಪಾತ್ರ ಬಹಳ ಮುಖ್ಯವಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅವರ ದಾಖಲೆ ಅತ್ಯುತ್ತಮವಾಗಿರುವುದು ಮಾತ್ರವಲ್ಲ, ಪರ್ತ್ ಟೆಸ್ಟ್‌ನಲ್ಲಿ ಅವರ ಅದ್ಭುತ ಶತಕ ಕಾಂಗೂರು ಪಡೆಗೆ ನಡುಕ ಹುಟ್ಟಿಸಿದೆ. ಆದರೆ, ಟೀಮ್ ಇಂಡಿಯಾ ಅಭ್ಯಾಸದ ಸಮಯದಲ್ಲಿ ಕೊಹ್ಲಿಯ ಬಲ ಮೊಣಕಾಲಿನ ಮೇಲೆ ಬ್ಯಾಂಡೇಜ್ ಕಟ್ಟಿರುವು ಕಂಡು ಬಂದಿದೆ. ಈ ಫೋಟೋ ಹೊರಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಅಡಿಲೇಟ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಅವರ ಫಿಟ್‌ನೆಸ್ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮಾಡುವ ನಿರೀಕ್ಷೆಯಲ್ಲಿದ್ದಾರೆ. ಕೊಹ್ಲಿ ಮತ್ತೊಂದು ಶತಕ ಸಿಡಿಸಿದರೆ, ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸೃಷ್ಟಿಸಲಿದ್ದಾರೆ. ಜೊತೆಗೆ 76 ವರ್ಷಗಳಿಂದ ಡಾನ್ ಬ್ರಾಡ್ಮನ್ ಹೆಸರಿನಲ್ಲಿರುವ ದಾಖಲೆಯನ್ನು ಮುರಿಯಲಿದ್ದಾರೆ. ಬ್ರಾಡ್ಮನ್ 1930 ಮತ್ತು 1948 ರ ನಡುವೆ ಇಂಗ್ಲೆಂಡ್‌ನಲ್ಲಿ 11 ಶತಕಗಳನ್ನು ಗಳಿಸಿದ್ದರು. ಪ್ರಸ್ತುತ ವಿರಾಟ್ ಕೊಹ್ಲೊ 10 ಶತಕಗಳನ್ನು ಹೊಂದಿದ್ದಾರೆ. ಭಾರತದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ 9 ಶತಕಗಳನ್ನ ಬಾರಿಸಿದ್ದಾರೆ.
ಭಾರತಕ್ಕೆ ಹೊಡೆತ?
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗೆ ವಿರಾಟ್ ಕೊಹ್ಲಿ ಆಟ ಪ್ರಮುಖವಾಗಿದೆ. ಒಂದು ವೇಳೆ ಅವರು, ಗಾಯದಿಂದ ಚೇತರಿಸಿಕೊಳ್ಳದೆ, ಅಡಿಲೇಡ್ ಟೆಸ್ಟ್ ಪಂದ್ಯದಿಂದ ಹೊರಗುಳಿದರೆ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ಕೊಹ್ಲಿ ಉತ್ತಮ ದಾಖಲೆಗಳನ್ನು ಹೊಂದಿದ್ದಾರೆ.
ಇಲ್ಲಿಯವರೆಗೆ, ಕೊಹ್ಲಿ ಅವರು ಓವಲ್ ಮೈದಾನದಲ್ಲಿ ಆಡಿದ 4 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 63.63 ರ ಸರಾಸರಿಯಲ್ಲಿ 509 ರನ್ ಕಲೆ ಹಾಕಿದ್ದಾರೆ. ಇದೇ ವೇಳೆ ಮೂರು ಶತಕ ಮತ್ತು ಒಂದು ಅರ್ಧಶತಕವನ್ನು ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications