Virat Kohli: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಿಕಿ ಪಾಂಟಿಂಗ್ ದಾಖಲೆ ಅಳಿಸಲು ಕೊಹ್ಲಿ ತಯಾರು
ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ . ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 1-0 ಮುನ್ನಡೆ ಸಾಧಿಸಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ತಮ್ಮ ಲಯವನ್ನು ಕಂಡುಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಅಡಿಲೇಡ್‌ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 9:30 ಗಂಟೆಗೆ ಆರಂಭವಾಗಲಿದೆ. ಅಡಿಲೇಡ್ ಮೈದಾನದಲ್ಲಿ ಅದ್ಭುತ ಅಂಕಿ-ಅಂಶ ಹೊಂದಿರುವ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ಆಸೀಸ್ ನಿದ್ದೆಗೆಡಿಸಿದೆ.ಅಡಿಲೇಡ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಬ್ಯಾಟರ್ ರಿಕಿ ಪಾಂಟಿಂಗ್ ಅವರ ಶ್ರೇಷ್ಠ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿಯುವ ಸನಿಹದಲ್ಲಿದ್ದಾರೆ.

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡ ಒಬ್ಬರು. ರಿಕಿ ಪಾಂಟಿಂಗ್ ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜೊತೆಗೆ ಅತಿಹೆಚ್ಚು ರನ್‌ಗಳನ್ನು ಕಲೆ ಹಾಕಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್ ಟೆಸ್ಟ್‌ನಲ್ಲಿ 245 ರನ್ ಗಳಿಸುವ ಮೂಲಕ ರಿಕಿ ಪಾಂಟಿಂಗ್ ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಲಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕೊಹ್ಲಿ ಏರಲಿದ್ದಾರೆ.
ಪ್ರಸ್ತುತ ವಿರಾಟ್ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27239 ರನ್ ಗಳಿಸಿರುವ ದಾಖಲೆ ಹೊಂದಿದ್ದಾರೆ. ಅಡಿಲೇಡ್ ಟೆಸ್ಟ್‌ನಲ್ಲಿ ಅವರು 245 ರನ್ ಗಳಿಸುವಲ್ಲಿ ಯಶಸ್ವಿಯಾದರೆ,
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27484 ರನ್ ಪೂರೈಸಲಿದ್ದಾರೆ. ಇದರೊಂದಿಗೆ 27483 ರನ್ ಗಳಿಸಿರುವ ರಿಕಿ ಪಾಂಟಿಂಗ್ ಅವರನ್ನು ಕೊಹ್ಲಿ ಹಿಂದಿಕ್ಕಲಿದ್ದಾರೆ.
ಅತಿಹೆಚ್ಚು ಶತಕ
ಪರ್ತ್ ಟೆಸ್ಟ್‌ನಲ್ಲಿಯೂ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 81 ಶತಕ ಬಾರಿಸಿದ ದಾಖಲೆಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕಗಳನ್ನು ಬಾರಿಸಿದ ಬ್ಯಾಟರ್‌ಗಳ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಭಾರತದ ಮತ್ತೊಬ್ಬ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಹೊಂದಿದ್ದಾರೆ.
ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್
- ಸಚಿನ್ ತೆಂಡೂಲ್ಕರ್ (ಭಾರತ): 34357 ರನ್
- ಕುಮಾರ್ ಸಂಗಕ್ಕಾರ (ಶ್ರೀಲಂಕಾ): 28016 ರನ್
- ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ): 27483 ರನ್
- ವಿರಾಟ್ ಕೊಹ್ಲಿ (ಭಾರತ): 27239 ರನ್
- ಮಹೇಲಾ ಜಯವರ್ಧನೆ (ಶ್ರೀಲಂಕಾ): 25957 ರನ್
- ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ): 25534 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications