IND vs AUS ODI Series: ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ- ರೋಹಿತ್ ಪ್ರದರ್ಶನ ಹೇಗಿದೆ? ಇಲ್ಲಿದೆ ಒಂದು ನೋಟ

ಸದ್ಯ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿದ್ದು, ಇನ್ನೂ ಎರಡು ಟೆಸ್ಟ್ ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಗಳಿಸಿದೆ.
ಇಂದೋರ್ ಮತ್ತು ಅಹಮದಾಬಾದ್‌ನಲ್ಲಿ ನಡೆಯುವ ಮೂರು ಮತ್ತು ನಾಲ್ಕನೇ ಪಂದ್ಯದಲ್ಲಿ ಇದೇ ರೀತಿ ಭಾರತ ತಂಡದ ಪ್ರದರ್ಶನ ಮುಂದುವರೆದರೆ, ಆಸ್ಟ್ರೇಲಿಯಾ ವಿರುದ್ಧ ವೈಟ್ ವಾಶ್ ಮಾಡಿದರೂ ಅಚ್ಚರಿ ಇಲ್ಲ. ಟೆಸ್ಟ್ ಸರಣಿ ಮುಗಿದ ನಂತರ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡಲಿವೆ.
ಇದೇ ವರ್ಷದ ಅಂತ್ಯದಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಎರಡೂ ತಂಡಗಳು ದೃಷ್ಟಿ ನೆಟ್ಟಿವೆ. ಇದಕ್ಕೂ ಮುನ್ನ ನಡೆಯುವ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತ ತಂಡದ ಬ್ಯಾಟಿಂಗ್ ಲೈನ್‌ಅಪ್‌ನ ಪ್ರಮುಖ ಆಟಗಾರರಾಗಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮಾದರಿಯಲ್ಲಿ ಇವರಿಬ್ಬರ ಪ್ರದರ್ಶನದ ಒಂದು ನೋಟ ಇಲ್ಲಿದೆ.

ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಪ್ರದರ್ಶನ
ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ಅದ್ಭುತವಾಗಿದೆ. ಭಾರತದ ಈ ಹಿಟ್‌ಮ್ಯಾನ್ ಆಸೀಸ್ ವಿರುದ್ಧ 40 ಇನ್ನಿಂಗ್ಸ್‌ಗಳನ್ನು ಆಡಿದ್ದು, 61ರ ಸರಾಸರಿಯಲ್ಲಿ ಮತ್ತು 93.87 ಸ್ಟ್ರೈಕ್‌ರೇಟ್‌ನಲ್ಲಿ 2208 ರನ್ ದಾಖಲಿಸಿದ್ದಾರೆ. ಅಲ್ಲದೇ ಆಸ್ಟ್ರೇಲಿಯಾ ವಿರುದ್ಧ 8 ಅರ್ಧಶತಕಗಳು ಮತ್ತು 8 ಶತಕಗಳನ್ನು ಹೊಂದಿದ್ದಾರೆ. 209 ರನ್ ಗರಿಷ್ಠ ಸ್ಕೋರ್ ಆಗಿದೆ. ಇದೇ ವೇಳೆ ರೋಹಿತ್ ಶರ್ಮಾ 2 ಬಾರಿ ಸೊನ್ನೆಗೆ ಔಟಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಪ್ರದರ್ಶನ
ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 54ರ ಸರಾಸರಿಯಲ್ಲಿ ಮತ್ತು 96.34 ಸ್ಟ್ರೈಕ್‌ರೇಟ್‌ನಲ್ಲಿ 2083 ರನ್‌ಗಳನ್ನು ಗಳಿಸಿದ್ದಾರೆ. ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಆಸ್ಟ್ರೇಲಿಯಾ ವಿರುದ್ಧ 10 ಅರ್ಧಶತಕ ಮತ್ತು 8 ಶತಕಗಳನ್ನು ದಾಖಲಿಸಿದ್ದಾರೆ. 123 ರನ್ ಕೊಹ್ಲಿಯ ಅತ್ಯಧಿಕ ಸ್ಕೋರ್ ಆಗಿದೆ ಹಾಗೂ ಎರಡು ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ.

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ
ಇನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಇವರಿಬ್ಬರು ಮತ್ತೆ ಅಬ್ಬರಿಸಲು ಎದುರು ನೋಡುತ್ತಿದ್ದಾರೆ.
ಮಾರ್ಚ್ 17 - ಮೊದಲ ಏಕದಿನ ಪಂದ್ಯ - ವಾಂಖೆಡೆ ಸ್ಟೇಡಿಯಂ, ಮುಂಬೈ.
ಮಾರ್ಚ್ 19 - 2ನೇ ಏಕದಿನ ಪಂದ್ಯ - ಡಾ.ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ, ವಿಶಾಖಪಟ್ಟಣ.
ಮಾರ್ಚ್ 22 - 3ನೇ ಏಕದಿನ ಪಂದ್ಯ - ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ.

ಆಸ್ಟ್ರೇಲಿಯಾ ವಿರುದ್ಧ ಭಾರತದ ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications