India vs Australia: ವಿರಾಟ್ ಕೊಹ್ಲಿಗೆ ಬೆಂಬಿಡದೆ ಕಾಡುತ್ತಿದ್ದಾರೆ ಎಡಗೈ ವೇಗಿಗಳು!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಹಾಗೂ ಆಸ್ಟ್ರೇಲಿಯಾ ತಂಡಗಳು ಪೈಪೊಟಿಯ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಭಾರತಕ್ಕೆ ದೊಡಡ ಮೊತ್ತದ ಗುರಿ ನೀಡಲು ವಿಫಲವಾಯಿತು. ಆದರೆ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ತೀವ್ರ ಪೈಪೋಟಿ ಸ್ಪರ್ಧೆ ಏರ್ಪಟ್ಟಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಗ್ರ ಕ್ರಮಾಂಕದ ಪ್ರಮುಖ ಆಟಗಾರರು ಸುಲಭವಾಗಿ ವಿಕೆಟ್ ಕಳೆದುಕೊಂಡಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್‌ನಿಂದಲೂ ಹೆಚ್ಚಿನ ರನ್ ಹರಿದು ಬಾರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕೇವಲ 4 ರನ್‌ಗಳಿಸಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಚೆಲ್ ಸ್ಟಾರ್ಕ್‌ಗೆ ಔಟಾಗುವ ಮೂಲಕ ಮತ್ತೊಮ್ಮೆ ಎಡಗೈ ದಾಂಡಿಗರ ಮುಂದೆ ತಿಣುಕಾಡಿದ್ದಾರೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬೌಂಡರಿ ಮೂಲಕ ಇನ್ನಿಂಗ್ಸ್ ಆರಂಭಿಸಿದರು. ಆದರೆ ಬಳಿಕ ಮಿಚೆಲ್ ಸ್ಟಾರ್ಕ್ ಬಲೆಗೆ ಬಿದ್ದು ವಿಕೆಟ್ ಕಳೆದುಕೊಳ್ಳಬೇಕಾಯಿತು. ಇನ್ನು ಕೊಹ್ಲಿ ಔಟಾದ ಮುಮದಿನ ಎಸೆತದಲ್ಲಿಯೇ ಸೂರ್ಯಕುಮಾರ್ ಯಾದವ್ ಕೂಡ ಔಟಾಗುವ ಮೂಲಕ ಭಾರತವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದರು.
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಭಾರತ ತಂಡದ ಪರವಾಗಿ ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಅದರಲ್ಲೂ ವಾಂಖೆಡೆಯ ಹಸಿರು ಪಿಚ್‌ನ ಲಾಭವನ್ನು ಅದ್ಭುತವಾಗಿ ಬಳಸಿಕೊಂಡ ಟೀಮ್ ಇಂಡಿಯಾದ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ನೀಡಿದರು. ಹೀಗಾಗಿ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 188 ರನ್ ಮಾತ್ರವೇ ಗಳಿಸಿದ್ದು ಟೀಮ್ ಇಂಡಿಯಾಗೆ ಸಾಧಾರಣ ಮೊತ್ತದ ಸವಾಲು ಮುಂದಿಟ್ಟಿತು
ಡೇವಿಡ್ ವಾರ್ನರ್ ಅಲಭ್ಯತೆಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಶ್ ಮಾತ್ರವೇ ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು ಆಸ್ಟ್ರೇಲಿಯಾ ತಂಡ 200ರ ಸನಿಹಕ್ಕೆ ಬಂದು ತಲುಪಲು ಕಾರಣವಾದರು. ಮಿಚೆಲ್ ಮಾರ್ಶ್ ಈ ಪಂದ್ಯದಲ್ಲಿ 81 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಉಳಿದಂತೆ ಜೋಸ್ ಇಂಗ್ಲಿಸ್ ಗಳಿಸಿದ 26 ರನ್ ಆಸಿಸ್ ಪರ ದಾಖಲಾದ ದೊಡ್ಡ ಮೊತ್ತ ಎನಿಸಿಕೊಂಡಿತು. ಆಸಿಸ್ ನಾಯಕ ಸ್ಟೀವ್ ಸ್ಮಿತ್ 22 ರನ್‌ಗಳಿಸಿ ಔಟಾದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 35.4 ಓವರ್‌ಗಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 188 ರನ್‌ಗಳಿಗೆ ಆಲೌಟ್ ಆಯಿತು.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದ್ದು ಟೀಮ್ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಶಮಿ 6 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ ಮೂರು ವಿಕೆಟ್ ಕಬಳಿಸಿದರೆ ಸಿರಾಜ್ 5.4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ರವೀಂದ್ರ ಜಡೇಜಾ 2 ವಿಕೆಟ್ ಪಡೆದು ಮಿಂಚಿದ್ದು ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications