Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Gautam Gambhir: ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಔಟ್‌: ಗಂಭೀರ್ ಬಿಚ್ಚಿಟ್ಟ 5 ಸಂಗತಿಗಳಿವು

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ನಾಳೆ ಅಂದರೆ ಜನವರಿ 3 ರಿಂದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಒಂದು ದಿನ ಮೊದಲು ಟೀಮ್ ಇಂಡಿಯಾ ಹೆಡ್‌ ಕೋಚ್ ಗೌತಮ್ ಗಂಭೀರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಮ್ಮ ಉತ್ತರದ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ. ಸಿಡ್ನಿ ಟೆಸ್ಟ್‌ನಿಂದ ನಾಯಕ ರೋಹಿತ್ ಶರ್ಮಾ ಆಡುವ ಬಗ್ಗೆ ಗೌತಮ್ ಗಂಭೀರ್ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ, ನಾಯಕ ರೋಹಿತ್ ಶರ್ಮಾ ಅವರು ಸಿಡ್ನಿಯಲ್ಲಿ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಾರೆಯೇ ಎಂದು ಗೌತಮ್ ಗಂಭೀರ್ ಅವರನ್ನು ಕೇಳಿದಾಗ, ನಾವು ವಿಕೆಟ್ ನೋಡಿದ ನಂತರವೇ ಆಡುವ ಹನ್ನೊಂದನ್ನು ನಾಳೆ ಘೋಷಿಸುತ್ತೇವೆ ಎಂದು ಉತ್ತರಿಸಿದ್ದಾರೆ.

IND vs AUS What did Gautam Gambhir say about Rohit Sharma playing in Sydney Test match

ಸಿಡ್ನಿ ಟೆಸ್ಟ್‌ಗೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಬದಲಿಗೆ ಕೋಚ್ ಗೌತಮ್ ಗಂಭೀರ್ ಭಾಗವಹಿಸಿದ್ದರು. ಆದರೆ ನಾಯಕ ಸಾಮಾನ್ಯವಾಗಿ ಪಂದ್ಯದ ಮುನ್ನಾದಿನದಂದು ಮಾತುಕತೆಗೆ ಬರುತ್ತಾರ. ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯ ಬಗ್ಗೆ ಕೋಚ್ ಗೌತಮ್ ಗಂಭೀರ್ ಅವರನ್ನು ಕೇಳಿದಾಗ, ಎಲ್ಲವೂ ಸರಿಯಾಗಿದೆ. ಸುದ್ದಿಗೋಷ್ಠಿಯಲ್ಲಿ ಮುಖ್ಯ ಕೋಚ್ ಹಾಜರಿದ್ದರೆ ಸಾಕು ಎಂದು ಖಾರವಾಗಿ ನುಡಿದ್ದಾರೆ.

ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಔಟ್?

ಗೌತಮ್ ಗಭೀರ್ ಹೇಳಿಕೆ ನಂತರ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್ ಪಂದ್ಯವನ್ನಾಡುವ ಬಗ್ಗೆ ಇನ್ನೂ ಸಸ್ಪೆನ್ಸ್ ಹೆಚ್ಚಾಗಿದೆ. ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ರೋಹಿತ್ ಶರ್ಮಾ ಆಡುತ್ತಾರಾ ಎಂಬ ಕುತೂಹಲ ಎಲ್ಲರಲ್ಲೂ ಇದೆ. ರೋಹಿತ್ ಶರ್ಮಾ ಬಗ್ಗೆ ಕೋಚ್ ಗೌತಮ್ ಗಂಭೀರ್ ದೊಡ್ಡ ಮಾಹಿತಿ ನೀಡಿದ್ದಾರೆ. 'ರೋಹಿತ್ ಅವರೊಂದಿಗೆ ಎಲ್ಲವೂ ಚೆನ್ನಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಅವರ ಅನುಪಸ್ಥಿತಿಯು ಚರ್ಚೆಯ ವಿಷಯ ಎಂದು ನಾನು ಭಾವಿಸುವುದಿಲ್ಲ. ಹೆಡ್‌ಕೋಚ್ ಇಲ್ಲಿದ್ದಾರೆ. ನಾವು ನಾಳೆ ವಿಕೆಟ್ ಅನ್ನು ನೋಡುತ್ತೇವೆ. ಇದಾದ ನಂತರ ನಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.

ಊಹಾಪೋಹಗಳಿಗೆ ತೆರೆ

ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದಲ್ಲಿ ಬಿರುಕು ಮೂಡಿರುವ ಬಗ್ಗೆ ಇರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತಂಡದಲ್ಲಿ ಬಿರುಕು ಇರುವುದೆಲ್ಲವೂ ವದಂತಿಗಳಾಗಿವೆ. ಅವುಗಳಲ್ಲಿ ಯಾವುದೇ ಸತ್ಯವಿಲ್ಲ. ಅಂತಹ ವದಂತಿಗಳಿಗೆ ನಾನು ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಒಟ್ಟಾಗಿ ಯಶಸ್ಸನ್ನು ಸಾಧಿಸಿಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ಆಟಗಾರನಿಗೆ ತಾನು ಎಲ್ಲಿ ಸುಧಾರಿಸಬೇಕು ಎಂದು ತಿಳಿದಿದೆ. ಟೆಸ್ಟ್ ಪಂದ್ಯಗಳನ್ನು ಗೆಲ್ಲುವುದು ಹೇಗೆ ಎಂಬ ಬಗ್ಗೆ ಮಾತ್ರ ನಾವು ಅವರೊಂದಿಗೆ ಮಾತನಾಡಿದ್ದೇವೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಪ್ರಾಮಾಣಿಕರು ಇರುವವರೆಗೂ ಭಾರತ ಕ್ರಿಕೆಟ್ ಸುರಕ್ಷಿತ ಕೈಯಲ್ಲಿದೆ. ಒಂದೇ ಒಂದು ವಿಷಯವು ನಿಮ್ಮನ್ನು ಡ್ರೆಸ್ಸಿಂಗ್ ಕೋಣೆಯಲ್ಲಿ ಇರಿಸಬಹುದು. ಕೋಚ್ ಮತ್ತು ಆಟಗಾರನ ನಡುವಿನ ಚರ್ಚೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಮಾತ್ರ ಉಳಿಯಬೇಕು. ಟೆಸ್ಟ್ ಪಂದ್ಯವನ್ನು ಗೆಲ್ಲುವ ತಂತ್ರವನ್ನು ಹೊರತುಪಡಿಸಿ ಅನುಭವಿ ಬ್ಯಾಟರ್ಸ್ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಬೇರೆ ಯಾವುದರ ಬಗ್ಗೆಯೂ ಮಾತನಾಡಿಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

Story first published: Thursday, January 2, 2025, 10:43 [IST]
Other articles published on Jan 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+