IND vs AUS: ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಯಾವ ದಿನದಂದು ಮಳೆಯಾಗುವ ಸಾಧ್ಯತೆ ಹೆಚ್ಚು?
ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಮೂರು ಪಂದ್ಯಗಳ ಬಳಿಕ 1-1ರಲ್ಲಿ ಸಮಬಲವಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ಆರಂಭವಾಗಲಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವೂ ಭಾರತೀಯ ಕಾಲಮಾನ ಬೆಳಗ್ಗೆ 5 ಗಂಟೆಗೆ ಆರಂಭವಾಗಲಿದೆ. ಉಭಯ ತಂಡಗಳಿಗೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಮಹತ್ವದ್ದಾಗಿದೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋತರೆ ಡಬ್ಲ್ಯೂಟಿಸಿ ಫೈನಲ್ ತಲುಪುವ ಹಾದಿ ಕಷ್ಟಕರವಾಗಲಿದೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ಇತರ ತಂಡಗಳ ಪಂದ್ಯಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ. ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧ ಟೆಸ್ಟ್ ಸರಣಿಯನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಭಾರತ ತಂಡ ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದು ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಉಳಿಸಿಕೊಳ್ಳುವ ಯೋಜನೆಯಲ್ಲಿದೆ. ಆದರೆ, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಕಳೆದ ಪಂದ್ಯದಂತೆ ಇಲ್ಲಿಯೂ ಮಳೆ ವಿಲನ್ ಆಗುತ್ತಾ? ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಬ್ರಿಸ್ಪೇನ್‌ನ ಗಬ್ಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮಳೆಯಿಂದಾಗಿ ಡ್ರಾದಲ್ಲಿ ಅಂತ್ಯಗೊಂಡಿತ್ತು. ಇದೀಗ ಮೇಲ್ಬೋರ್ನ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆಯಾಗುವ ಸಾಧ್ಯೆತೆ ಇಲ್ಲ. ಆದರೆ, ಮೂರನೇ ದಿನದಲ್ಲಿ 24 ಪ್ರತಿಶತದಷ್ಟು ಮಳೆಯ ಸಾಧ್ಯತೆಯಿದೆ. ಇದು ಪಂದ್ಯದ ಎಲ್ಲಾ ಐದು ದಿನಗಳಲ್ಲಿ ಗರಿಷ್ಠ ಮಳೆಯಾಗುವ ಸೂಚನೆಯಾಗಿದೆ. ಆದರೆ, ಪಂದ್ಯದುದ್ದಕ್ಕೂ ಮೋಡ ಕವಿದ ವಾತಾವರಣವಿರಲಿದೆ.
ಹವಾಮಾನ ಇಲಾಖೆ ಪ್ರಕಾರ, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನ ಬಿಸಿಲಿನ ವಾತಾವರಣವಿದ್ದು, ತಾಪಮಾನ ಸುಮಾರು 37 ಡಿಗ್ರಿ ಸೆಲ್ಸಿಯಸ್ ಇರಲಿದೆ. ಎರಡನೇ ದಿನದಿಂದ ಆಟಕ್ಕೆ ವಾತಾವರಣ ತುಂಬಾ ತಂಪಾಗಿರಲಿದೆ. ಮೊದಲ ದಿನದಲ್ಲಿ ತೇವಾಂಶವು ಸುಮಾರು 20 ಡಿಗ್ರಿಗಳಷ್ಟಿರುತ್ತದೆ. ನಂತರ ಅದು 40 ರಿಂದ 50 ಡಿಗ್ರಿಗಳ ನಡುವೆ ಇರಲಿದೆ.
ಮೆಲ್ಬೋರ್ನ್‌ನಲ್ಲಿ ಭಾರತದ ದಾಖಲೆ
ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಭಾರತ ತಂಡದ ದಾಖಲೆ ಉತ್ತಮವಾಗಿದೆ. ಮೇಲ್ಬೋರ್ನ್‌ನಲ್ಲಿ ಭಾರತ ಇದುವರೆಗೆ 14 ಟೆಸ್ಟ್‌ಗಳಲ್ಲಿ 4 ರಲ್ಲಿ ಗೆದ್ದು, 8 ರಲ್ಲಿ ಸೋತಿದೆ. ಮೆಲ್ಬೋರ್ನ್ ಅಂಗಳದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿರುವ ದಾಖಲೆಯನ್ನು ಮಾಡುವ ಅವಕಾಶ ಹೊಂದಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಪರ್ತ್ ಟೆಸ್ಟ್‌ನಲ್ಲಿ ಕೊಹ್ಲಿ ಶತಕ ಬಾರಿಸಿದರು. ಆದರೆ ನಂತರ ಅವರ ಬ್ಯಾಟ್ ಸೈಲೆಂಟ್ ಆಗಿದೆ. ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ ಮೂರು ಪಂದ್ಯಗಳಲ್ಲಿ 21 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತ ತಂಡದ ಬೌಲಿಂಗ್ ವಿಭಾಗದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮೆಲ್ಬೋರ್ನ್‌ನಲ್ಲಿಯೂ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications