ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs BAN: ಸ್ಟಾರ್ ಆಟಗಾರರು ತಂಡಕ್ಕೆ ವಾಪಸ್; 7 ವರ್ಷಗಳ ಹಿಂದಿನ ಜಿದ್ದು ತೀರಿಸಿಕೊಳ್ಳುವುದೇ ಭಾರತ?

IND vs BAN 1st ODI: Team India Looking For ODI Series Win Against Bangladesh

ಮುಂದಿನ ವರ್ಷ ಭಾರತದಲ್ಲಿಯೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡವು ತನ್ನ ತಯಾರಿಯನ್ನು ನ್ಯೂಜಿಲೆಂಡ್‌ನಲ್ಲಿ ನಡೆದ ಸರಣಿಯ ಮೂಲಕ ಪ್ರಾರಂಭಿಸಿತು. ಆದರೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ನಾಯಕತ್ವದ ಯುವ ತಂಡ 1-0 ಅಂತರದಿಂದ ಸೋಲಬೇಕಾಯಿತು.

ಇದಾದ ನಂತರ, ಭಾನುವಾರ, ಡಿಸೆಂಬರ್ 4ರಿಂದ ಬಾಂಗ್ಲಾದೇಶ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡುವಾಗ ಭಾರತ ತಂಡ ಮತ್ತೆ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ ಮತ್ತು ನ್ಯೂಜಿಲೆಂಡ್ ವಿರುದ್ಧ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.

IND vs BAN: ಒಂದು ಐಪಿಎಲ್‌ನಲ್ಲಿ ಮಿಂಚಿದ ಮಾತ್ರಕ್ಕೆ ಭಾರತದ ಕ್ಯಾಪ್ ನೀಡುವ ಅಗತ್ಯವಿಲ್ಲ; ಮಾಜಿ ಕ್ರಿಕೆಟಿಗIND vs BAN: ಒಂದು ಐಪಿಎಲ್‌ನಲ್ಲಿ ಮಿಂಚಿದ ಮಾತ್ರಕ್ಕೆ ಭಾರತದ ಕ್ಯಾಪ್ ನೀಡುವ ಅಗತ್ಯವಿಲ್ಲ; ಮಾಜಿ ಕ್ರಿಕೆಟಿಗ

7 ವರ್ಷಗಳ ನಂತರ ಭಾರತ ಕ್ರಿಕೆಡ್ ತಂಡವು ಬಾಂಗ್ಲಾದೇಶದಲ್ಲಿ ಏಕದಿನ ಪಂದ್ಯಗಳನ್ನು ಆಡುತ್ತಿದೆ. 2 ಬಾರಿಯ ಏಕದಿನ ವಿಶ್ವಕಪ್ ಚಾಂಪಿಯನ್ ತಂಡ ನೆರೆಯ ದೇಶದ ಪ್ರವಾಸ ಕಹಿ ನೆನಪುಗಳನ್ನು ಹೊಂದಿದೆ. ಎಂಎಸ್ ಧೋನಿ ನಾಯಕತ್ವದ ಭಾರತ ತಂಡವನ್ನು ಬಾಂಗ್ಲಾದೇಶ 2-1 ಅಂತರದಿಂದ ಸೋಲಿಸಿತ್ತು.

ಸರಣಿ ಗೆದ್ದು ಕಳೆದ ಸೋಲಿನ ಸೇಡು ತೀರಿಸಿಕೊಳ್ಳುವ ತವಕ

ಸರಣಿ ಗೆದ್ದು ಕಳೆದ ಸೋಲಿನ ಸೇಡು ತೀರಿಸಿಕೊಳ್ಳುವ ತವಕ

ಇದೀಗ ಅದೇ ಬಾಂಗ್ಲಾದೇಶದ ವಿರುದ್ಧ ಅವರದೇ ನೆಲದಲ್ಲಿ ಸರಣಿ ಗೆದ್ದು ಕಳೆದ ಬಾರಿಯ ಸರಣಿ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇದಕ್ಕಾಗಿ ಭಾರತ ತಂಡಕ್ಕೆ ಮೂವರು ಅಗ್ರ ಬ್ಯಾಟರ್‌ಗಳ ಮರಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ವಾಪಸ್ಸಾಗಿರುವುದು ಭಾರತಕ್ಕೆ ಬಲ ತಂದಿದೆ.

ಇನ್ನು ತಮೀಮ್ ಇಕ್ಬಾಲ್ ಮತ್ತು ತಸ್ಕಿನ್ ಅಹ್ಮದ್ ಇಬ್ಬರು ಪ್ರಮುಖ ಆಟಗಾರರು ಬಾಂಗ್ಲಾದೇಶ ತಂಡದಲ್ಲಿರಲಿಲ್ಲದಿದ್ದರೂ ಸಹ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರು ಬಾಂಗ್ಲಾ ಸವಾಲನ್ನು ಲಘುವಾಗಿ ತೆಗೆದುಕೊಂಡಿಲ್ಲ.

ಆಟಗಾರರಿಗೆ ನಡುವೆ ವಿರಾಮದ ಅಗತ್ಯವಿದೆ

ಆಟಗಾರರಿಗೆ ನಡುವೆ ವಿರಾಮದ ಅಗತ್ಯವಿದೆ

ಮುಂದಿನ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲಿಯೇ ನಡೆಯುವ ಏಕದಿನ ವಿಶ್ವಕಪ್ ಬಗ್ಗೆ ಈಗಲೇ ಯೋಚಿಸುವ ಅಗತ್ಯವಿಲ್ಲ ಮತ್ತು ಪರಿಸ್ಥಿತಿಗಳನ್ನು ಅಸ್ತವ್ಯಸ್ತಗೊಳಿಸಲು ಬಯಸುವುದಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ತಾವು ಹಾಗೂ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಐಸಿಸಿ ಟೂರ್ನಿಗಾಗಿ ತಂಡವನ್ನು ಹೇಗೆ ಸಜ್ಜುಗೊಳಿಸಬೇಕು ಎಂಬುದರ ಕುರಿತು ನ್ಯಾಯಯುತವಾದ ಕಲ್ಪನೆ ಹೊಂದಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಭಾರತೀಯ ಕ್ರಿಕೆಟಿಗರಿಗೆ ನೀಡುವ ವಿರಾಮದ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ರೋಹಿತ್ ಶರ್ಮಾ, ಸಾಕಷ್ಟು ಕ್ರಿಕೆಟ್ ನಡೆಯುತ್ತಿದೆ, ಅದಕ್ಕಾಗಿಯೇ ಆಟಗಾರರಿಗೆ ನಡುವೆ ವಿರಾಮದ ಅಗತ್ಯವಿದೆ. ಢಾಕಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲು ಟೀಂ ಇಂಡಿಯಾ ಸಜ್ಜಾಗಿದೆ ಎಂದು ವಿವರಿಸಿದರು.

ಪಿಚ್ ಮತ್ತು ಪಂದ್ಯದ ವಿವರ

ಪಿಚ್ ಮತ್ತು ಪಂದ್ಯದ ವಿವರ

ಶೇರ್-ಎ-ಬಾಂಗ್ಲಾ ಸ್ಟೇಡಿಯಂ ಉತ್ತಮ ಬ್ಯಾಟಿಂಗ್ ಪಿಚ್ ಎಂದು ನಿರೀಕ್ಷಿಸಲಾಗಿದೆ. 270ಕ್ಕಿಂತ ಹೆಚ್ಚಿನ ಸ್ಕೋರ್‌ಗಳು ಸ್ಪರ್ಧಾತ್ಮಕವಾಗಿರಲಿದೆ. ಮೀರ್‌ಪುರದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಹೀಗಾಗಿ ಪೂರ್ಣ ಪಂದ್ಯವನ್ನು ಪ್ರೇಕ್ಷಕರು ವೀಕ್ಷಿಸಬಹುದಾಗಿದೆ.

1ನೇ ಏಕದಿನ ಪಂದ್ಯವು ಢಾಕಾದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 11:30 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

ಬಾಂಗ್ಲಾದೇಶ ಮತ್ತು ಭಾರತ ತಂಡಗಳ ಸಂಪೂರ್ಣ ಸ್ಕ್ವಾಡ್ ಇಲ್ಲಿದೆ

ಬಾಂಗ್ಲಾದೇಶ ಮತ್ತು ಭಾರತ ತಂಡಗಳ ಸಂಪೂರ್ಣ ಸ್ಕ್ವಾಡ್ ಇಲ್ಲಿದೆ

ಬಾಂಗ್ಲಾದೇಶ: ಲಿಟನ್ ದಾಸ್ (ನಾಯಕ), ನೂರುಲ್ ಹಸನ್ (ವಿಕೆಟ್ ಕೀಪರ್), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮಹಮ್ಮದುಲ್ಲಾ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಯಾಸಿರ್ ಅಲಿ, ನಜ್ಮುಲ್ ಹೊಸೈನ್ ಶಾಂಟೊ, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

Story first published: Sunday, December 4, 2022, 2:40 [IST]
Other articles published on Dec 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X