IND vs BAN 1st T20: ಗ್ವಾಲಿಯರ್‌ನಲ್ಲಿ ಭಾರತದ ಅಬ್ಬರ: ಸರಣಿಯಲ್ಲಿ 1-0 ಮುನ್ನಡೆ
ಗ್ವಾಲಿಯರ್: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಏಳು ವಿಕೆಟ್‌ಗಳಿಂದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ, ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ 19.5 ಓವರ್‌ಗಳಲ್ಲಿ 127 ರನ್ ಸೇರಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 11.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಕಲೆ ಹಾಕಿ ಅಬ್ಬರಿಸಿತು.

ಆರಂಭದಲ್ಲೇ ಅಬ್ಬರ
ಸಾಧಾರಣ ಗುರಿಯನ್ನು ಹಿಂಬಾಲಿಸಿದ ಭಾರತ ತಂಡದ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಅಮೋಘ ಆಟವನ್ನು ಆಡಿದರು. ಈ ಜೋಡಿ ಬಿಗ್ ಇನಿಂಗ್ಸ್ ಕಟ್ಟದೇ ಇದ್ದರೂ ತಂಡಕ್ಕೆ ಅಗತ್ಯ ರನ್ ಕಲೆ ಹಾಕುವಲ್ಲಿ ಮಿಂಚಿದರು. ಯುವ ಆಟಗಾರ ಅಭಿಷೇಕ್ ಶರ್ಮಾ ಕೇವಲ 7 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 16 ರನ್ ಬಾರಿಸಿ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು.
ತಮ್ಮ ನೈಜ ಆಟವನ್ನು ಆಡಿದ ಸೂರ್ಯುಕುಮಾರ್ ಯಾದವ್, ಸಂಜು ಸ್ಯಾಮ್ಸನ್‌ಗೆ ಉತ್ತಮ ಸಾಥ್ ನೀಡಿದರು. ಈ ಜೋಡಿ 40 ರನ್‌ಗಳ ಜೊತೆಯಾಟವನ್ನು ನೀಡಿತು. ನಾಯಕ ಸೂರ್ಯಕುಮಾರ್ ಯಾದವ್ ಧಮಾಕೆದಾರ್ ಬ್ಯಾಟಿಂಗ್ ನಡೆಸಿದರು. ಇವರು 14 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ 29 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ಆರಂಭಿಕ ಸಂಜು ಸ್ಯಾಮ್ಸನ್ 6 ಬೌಂಡರಿ ನೆರವಿನಿಂದ 29 ರನ್ ಸಿಡಿಸಿ ತಂಡಕ್ಕೆ ಆಧಾರವಾದರು.

ಅರ್ಧಶತಕದ ಜೊತೆಯಾಟ
ನಾಲ್ಕನೇ ವಿಕೆಟ್‌ಗೆ ಹಾರ್ದಿಕ್ ಪಾಂಡ್ಯ ಹಾಗೂ ನಿತೀಶ್ ಕುಮಾರ್ ರೆಡ್ಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 24 ಎಸೆತಗಳಲ್ಲಿ ಅಜೇಯ 52 ರನ್ ಕಲೆ ಹಾಕಿತು. ಹಾರ್ದಿಕ್ ಪಾಂಡ್ಯ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 39 ರನ್ ಸಿಡಿಸಿದರು. ಚೊಚ್ಚಲ ಪಂದ್ಯವನ್ನು ಆಡುತ್ತಿರುವ ನಿತೀಶ್ ಕುಮಾರ್ ರೆಡ್ಡಿ ಅಜೇಯ 16 ರನ್ ಬಾರಿಸಿದರು.
ಪವರ್ ಪ್ಲೇನಲ್ಲಿ ಪವರ್ ಫುಲ್ ಆಟ
ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡದ ಆರಂಭಿಕರಾದ ಪರ್ವೇಜ್ ಹೊಸೈನ್ ಎಮಾನ್ ಹಾಗೂ ಲಿಟ್ಟನ್ ದಾಸ್ ಅವರ ವಿಕೆಟ್ ಪಡೆಯುವಲ್ಲಿ ವೇಗಿ ಅರ್ಷದೀಪ್ ಯಶಸ್ವಿಯಾದರು. ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾ ಎರಡು ವಿಕೆಟ್ ಪಡೆದು ಬೀಗಿತು. ಮೂರನೇ ವಿಕೆಟ್‌ಗೆ ನಜ್ಮುಲ್ ಹೊಸೈನ್ ಶಾಂತ್ (27) ಹಾಗೂ ತೌಹೀದ್ ಹೃದಯ (12) 27 ಎಸೆತಗಳಲ್ಲಿ 26 ರನ್ ಸಿಡಿಸಿ ತಂಡದ ಮೊತ್ತ ಹಿಗ್ಗಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಮೆಹದಿ ಹಸನ್ ಮಿರ್ಜಾ 32 ಎಸೆತಗಳಲ್ಲಿ 3 ಬೌಂಡರಿ ಸೇರಿದಂತೆ ಅಜೇಯ 35 ರನ್ ಬಾರಿಸಿ ತಂಡ ಸಾಧಾರಣ ಮೊತ್ತ ಕಲೆ ಹಾಕುವಲ್ಲಿ ನೆರವಾದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.
ಅರ್ಷದೀಪ್, ವರುಣ್‌ಗೆ ಮೂರು ವಿಕೆಟ್
ಟೀಮ್ ಇಂಡಿಯಾ ಪರ ಅರ್ಷದೀಪ್ ಸಿಂಗ್ ಹಾಗೂ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದರು. ಈ ಇಬ್ಬರೂ ಬೌಲರ್‌ಗಳು ತಲಾ ಮೂರು ವಿಕೆಟ್ ಪಡೆದರು. ಉಳಿದಂತೆ ಹಾರ್ದಿಕ್ ಪಾಂಡ್ಯ, ಮಯಾಂಕ್ ಯಾದವ್, ವಾಶಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications