ಭಾರತ vs ಬಾಂಗ್ಲಾದೇಶ 1st Test: ಪಂದ್ಯದ ಸಮಯ, ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿ ಬುಧವಾರದಿಂದ ಆರಂಭವಾಗಲಿದ್ದು ಸತತವಾಗಿ ವೈಟ್‌ಬಾಲ್ ಸೆಣೆಸಾಟದ ಬಳಿಕ ರೆಡ್ ಬಾಲ್ ಸರಣಿಗೆ ಅಭಿಮಾನಿಗಳು ಸಜ್ಜಾಗಿದ್ದಾರೆ. ಈಗಾಗಲೇ ಏಕದಿನ ಸರಣಿ ಅಂತ್ಯವಾಗಿದ್ದು ಈ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಅಂತರದಿಂದ ಸೋಲು ಅನುಭವಿಸಿತ್ತು. ಇದೀಗ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಸಜ್ಜಾಗಿದೆ.
ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿದ್ದು ಕೆಎಲ್ ರಾಹುಲ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಚೇತೇಶ್ವರ್ ಪೂಜಾರ ಟೀಮ್ ಇಂಡಿಯಾ ಉಪನಾಯಕನಾಗಿ ಜವಾಬ್ಧಾರಿ ವಹಿಸಿಕೊಳ್ಳಲಿದ್ದಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ಆರ್ ಅಶ್ವಿನ್ ಮೊದಲಾದ ಆಟಗಾರರು ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ಭಾನುವಾರ ನಡೆಯಲಿದೆ. ಚಿತ್ತಗಾಂಗ್‌ನ ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಬೆಳಿಗ್ಗೆ 9 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಭಾರತದಲ್ಲಿ ಈ ಪಂದ್ಯ ಸೋನಿ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಅಲ್ಲದೆ ಸೋನಿ ಲಿವ್‌ನಲ್ಲಿ ಈ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
ಚಿತ್ತಗಾಂಗ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ಬ್ಯಾಟರ್‌ಗಳ ಪಾಲಿಗೆ ಸ್ವರ್ಗವೆನಿಸಲಿದೆ. ಏಕದಿನ ಸರಣಿಯ ಅಂತಿಮ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆದಿದ್ದು ಆ ಪಂದ್ಯದಲ್ಲಿ ಟೀಮ್ ಇಂಡಿಯಾ 400ಕ್ಕೂ ಅಧಿಕ ರನ್‌ಗಳಿಸಿತ್ತು. ಹೀಗಾಗಿ ಟೆಸ್ಟ್ ಸರಣಿಯಲ್ಲಿಯೂ ಪಿಚ್‌ನ ಲಾಭವನ್ನು ಎರಡು ತಂಡಗಳ ಬ್ಯಾಟರ್‌ಗಳು ಬಳಸಿಕೊಳ್ಳಲಿದ್ದಾರೆ. ವೇಗಿಗಳ ಪಾಲಿಗೆ ಈ ಮೈದಾನ ಕಠಿಣವಾಗಿರಲಿದ್ದು ಸ್ಪಿನ್ನರ್‌ಗಳು ಯಶಸ್ಸು ನೀಡುವ ನಿರೀಕ್ಷೆಯಿದೆ. ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಪಿಚ್‌ನ ಲಾಭವನ್ನು ಪಡೆಯಲು ಮುಂದಾಗಲಿದೆ.

ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ ಸಂಭಾವ್ಯ ಆಡುವ ಬಳಗ
ಬಾಂಗ್ಲಾದೇಶ: ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹೊಸೈನ್ ಶಾಂಟೊ, ಮೊಮಿನುಲ್ ಹಕ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಲಿಟ್ಟನ್ ದಾಸ್, ಅನಾಮುಲ್ ಹಕ್/ಯಾಸಿರ್ ಅಲಿ, ಮೆಹಿದಿ ಹಸನ್, ಎಬಾಡೋಟ್ ಹೊಸೈನ್, ಶೋರಿಫುಲ್ ಇಸ್ಲಾಂ/ತೈಜುಲ್ ಇಸ್ಲಾಂ ಮತ್ತು ತಸ್ಕಿನ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications