Ind vs Ban 1st Test: ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ, ನೆಟ್ಸ್‌ನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ, ಪೂಜಾರ

ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯನ್ನು ಸೋತ ನಂತರ, ಭಾರತ ತಂಡ ಟೆಸ್ಟ್ ಸರಣಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಡಿಸೆಂಬರ್ 14ರ ಬುಧವಾರ ಸರಣಿಯ ಮೊದಲ ಟೆಸ್ಟ್ ಪಂದ್ಯ ಛತ್ತೋಗ್ರಾಮದಲ್ಲಿ ಆರಂಭವಾಗಲಿದೆ.
ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಈಗಾಗಲೇ ಅಭ್ಯಾಸ ಆರಂಭಿಸಿದೆ. ಟೀಂ ಇಂಡಿಯಾದ ಅಭ್ಯಾಸ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ತಂಡದ ಮುಖ್ಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಕಠಿಣ ಅಭ್ಯಾಸ ನಡೆಸಿದೆ.
ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ವಿರಾಟ್ ಕೊಹ್ಲಿಗೆ ಥ್ರೋ ಡೌನ್ ನೀಡುತ್ತಿದ್ದರು. ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ನೆಟ್‌ನಲ್ಲಿ ಬೌಲಿಂಗ್ ಮಾಡುತ್ತಿದ್ದರು. ಬಿಸಿಸಿಐ ಟ್ವಿಟರ್‌ನಲ್ಲಿ ಟೀಂ ಇಂಡಿಯಾ ಛತ್ತೋಗ್ರಾಮ ಸ್ಟೇಡಿಯಂಗೆ ಆಗಮನದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿತ್ತು. ಅಭ್ಯಾಸಕ್ಕೆ ಮುನ್ನ ದ್ರಾವಿಡ್ ಆಟಗಾರರ ಜೊತೆ ಮಾತನಾಡಿದರು.
ಇದಕ್ಕೂ ಮುನ್ನ ಭಾರತದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಭ್ಯಾಸ ಮಾಡಿದ್ದರು. ರವಿಚಂದ್ರನ್ ಅಶ್ವಿನ್, ಚೇತೇಶ್ವರ ಪೂಜಾರ ಮತ್ತು ಕೆಎಸ್ ಭರತ್ ಭಾರತದ ಐಚ್ಛಿಕ ಅಭ್ಯಾಸದ ಅವಧಿಯಲ್ಲಿ ಹಾಜರಿದ್ದರು. ಸೋಮವಾರ ತಂಡದ ಎಲ್ಲಾ ಆಟಗಾರರು ಅಭ್ಯಾಸದಲ್ಲಿ ಭಾಗವಹಿಸಿದ್ದಾರೆ.

ಎರಡೂ ಪಂದ್ಯಗಳಲ್ಲಿ ಗೆಲ್ಲಬೇಕಿದೆ ಟೀಂ ಇಂಡಿಯಾ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವ ದೃಷ್ಟಿಯಿಂದ ಭಾರತಕ್ಕೆ ಈ ಟೆಸ್ಟ್ ಸರಣಿ ಮಹತ್ವದ್ದಾಗಿದೆ. ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಭಾರತಕ್ಕೆ ಫೈನಲ್‌ಗೆ ಏರುವ ಹಾದಿ ಸುಲಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ.
ಈ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಅಂಕಪಟ್ಟಿಯಲ್ಲಿ ಭಾರತ ಬಡ್ತಿ ಪಡೆಯಲಿದೆ. ರೋಹಿತ್ ಶರ್ಮಾ ಗಾಯಗೊಂಡು ಹೊರಗುಳಿದ ನಂತರ ತಂಡದ ನಾಯಕತ್ವದ ಹೊಣೆಯನ್ನು ಕೆಎಲ್ ರಾಹುಲ್ ವಹಿಸಿಕೊಂಡಿದ್ದಾರೆ. ಭಾರತ ತಂಡ ಎಲ್ಲಾ ವಿಭಾಗಗಳಲ್ಲಿ ಬಲಿಷ್ಠವಾಗಿತ್ತು ಸರಣಿಯಲ್ಲಿ ಗೆಲುವಿನ ವಿಶ್ವಾಸದಲ್ಲಿದೆ.
AUS vs SA 1st Test: ಮೊದಲ ಟೆಸ್ಟ್‌ನಿಂದ ಆಸೀಸ್ ಸ್ಟಾರ್ ಬೌಲರ್ ಔಟ್; ಪ್ಯಾಟ್ ಕಮ್ಮಿನ್ಸ್ ವಾಪಸಾತಿ?

ಶಮಿ ಬದಲಿಗೆ ಜಯದೇವ್ ಉನಾದ್ಕತ್ ತಂಡಕ್ಕೆ ಸೇರ್ಪಡೆ
ಹಿರಿಯ ಬೌಲರ್ ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದ ನಂತರ, ಜಯದೇವ್ ಉನಾದ್ಕತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ನಂತರ ಉನಾದ್ಕತ್ 12 ವರ್ಷದ ನಂತರ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಎಡಗೈ ವೇಗಿ ಉತ್ತಮ ಫಾರ್ಮ್‌ನಲ್ಲಿದ್ದು ಮೊದಲ ಟೆಸ್ಟ್‌ನಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಅವಕಾಶ ಇದೆ. ಭರತ್, ಪೂಜಾರ ಕೂಡ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ.

ಟೆಸ್ಟ್‌ನಲ್ಲಿ ಮಿಂಚುತ್ತಾರ ರಿಷಬ್ ಪಂತ್
ಗಾಯದ ಸಮಸ್ಯೆಯಿಂದ ಏಕದಿನ ಸರಣಿಯಿಂದ ಹೊರಬಿದ್ದಿದ್ದ ರಿಷಬ್ ಪಂತ್ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈಗಾಗಲೇ ತಂಡವನ್ನು ಸೇರಿಕೊಂಡಿರುವ ಪಂತ್, ಸೋಮವಾರ ಅಭ್ಯಾಸ ನಡೆಸಿದರು. ನೆಟ್ಸ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು, ಟೆಸ್ಟ್‌ನಲ್ಲಿ ತಮ್ಮ ಫಾರ್ಮ್ ಮರಳಿಪಡೆಯುವ ವಿಶ್ವಾಸದಲ್ಲಿದ್ದಾರೆ. ಟೆಸ್ಟ್ ಮಾದರಿಯಲ್ಲಿ ರಿಷಬ್ ಉತ್ತಮ ದಾಖಲೆ ಹೊಂದಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಸರಣಿಯಲ್ಲಿ ಕೂಡ ಅವರು ತಮ್ಮ ಅತ್ಯುತ್ತಮ ಆಟವನ್ನು ಪ್ರದರ್ಶಿಸಬೇಕಿದೆ.
ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತವಾಗಿ ಆಡಿದ್ದ ರಿಷಬ್ ಪಂತ್ ಪ್ರಮುಖ ಆಟಗಾರ ಎನಿಸಿಕೊಂಡಿದ್ದರು. ಈ ವರ್ಷ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಅಷ್ಟೇನು ಉತ್ತಮವಾಗಿ ಪ್ರದರ್ಶನ ನೀಡದ ಅವರು ಟೆಸ್ಟ್‌ನಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ.

ಟೆಸ್ಟ್ ಸರಣಿಗೆ ಭಾರತ, ಬಾಂಗ್ಲಾದೇಶ ತಂಡ
ಭಾರತ : ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನಾದ್ಕತ್.
ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಮಹಮ್ಮದುಲ್ ಹಸನ್ ಜಾಯ್, ನಜ್ಮುಲ್ ಹೊಸೈನ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್, ಲಿಟ್ಟನ್ ದಾಸ್, ನೂರುಲ್ ಹಸನ್, ಜಾಕಿರ್ ಹಸನ್, ಅನಾಮುಲ್ ಹಕ್, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಇ ಖಬಾದ್ ಅಹ್ಮದ್, ಹೊಸೈನ್, ಶೋರಿಫುಲ್ ಇಸ್ಲಾಂ, ರೆಜೌರ್ ರೆಹಮಾನ್ ರಾಜ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications