
ಆತ್ಮವಿಶ್ವಾಸ ಹೆಚ್ಚಿಸಿಕೊಂಡ ಬಾಂಗ್ಲಾದೇಶ
ತವರಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಬಾಂಗ್ಲಾದೇಶ, ಭಾರತದ ವಿರುದ್ಧ ಏಕದಿನ ಸರಣಿ ಗೆಲ್ಲುವ ಮೂಲಕ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಭಾರತ ಎರಡೂ ಟೆಸ್ಟ್ ಪಂದ್ಯಗಳನ್ನು ಗೆಲ್ಲುವುದು ಸುಲಭದ ಮಾತಲ್ಲ, ಶಕೀಬ್ ಅಲ್ ಹಸನ್ ಟೀಂ ಸಾಕಷ್ಟು ಪೈಪೋಟಿ ನೀಡುವ ಸಾಧ್ಯತೆ ಇದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ರ ಫೈನಲ್ ಹಾದಿಯಲ್ಲಿ ಬಾಂಗ್ಲಾದೇಶ ಅಡ್ಡಿಯಾಗಿದ್ದು, ಭಾರತ ಇದನ್ನು ಹೇಗಿ ನಿವಾರಿಸಿಕೊಳ್ಳುತ್ತದೆ ಎಂದು ನೋಡಬೇಕಿದೆ. ಆದರೂ, ಭಾರತ ಟೆಸ್ಟ್ ತಂಡ ಬಲಿಷ್ಠವಾಗಿದ್ದು, ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.
IPL 2023: ಇದೇ ಕಾರಣಕ್ಕೆ ತಡವಾಗಿ ಆರಂಭವಾಗಲಿದೆ 2023ರ ಐಪಿಎಲ್!

ಆರು ಟೆಸ್ಟ್ ಪಂದ್ಯಗಳಲ್ಲಿ ಗೆಲ್ಲಬೇಕಿದೆ ಟೀಂ ಇಂಡಿಯಾ
2021-23ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿ ಭಾರತ ಇನ್ನೂ ಆರು ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತ ಫೈನಲ್ ತಲುಪಬೇಕಾದರೆ ಉಳಿದ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಿದೆ.
ಪ್ರಸ್ತುತ, ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 52.08 ಪಿಸಿಟಿಯೊಂದಿಗೆ ಶ್ರೀಲಂಕಾದ ನಂತರ ನಾಲ್ಕನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 72.72 ಪಿಸಿಟಿಯೊಂದಿಗೆ ಅಗ್ರ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ 60 ಸಿಟಿಸಿಯೊಂದಿಗೆ ಎರಡನೇ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಬಾಂಗ್ಲಾದೇಶದ ವಿರುದ್ಧ ಸರಣಿಯ ನಂತರ ಭಾರತ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ.

ಹೀಗಾದರೆ ಮಾತ್ರ ಭಾರತಕ್ಕೆ ಫೈನಲ್ ತಲುಪುವ ಅವಕಾಶ
ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯಲ್ಲಿ ಗೆದ್ದರೆ, ಆಸ್ಟ್ರೇಲಿಯಾ ಫೈನಲ್ ಆಡುವುದು ಖಚಿತವಾಗುತ್ತದೆ.
ಭಾರತ ಬಾಂಗ್ಲಾದೇಶದ ವಿರುದ್ಧ ಸರಣಿಯನ್ನು 2-0 ಅಂತರದಲ್ಲಿ ಗೆಲ್ಲಬೇಕು. ನಂತರ ನ್ಯೂಜಿಲೆಂಡ್ ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಗೆಲುವು ಸಾಧಿಸಬೇಕಿದೆ. ನಂತರ, ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆದ್ದು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಂಡರೆ ಮಾತ್ರ ಫೈನಲ್ ತಲುಪಲು ಸಾಧ್ಯವಾಗುತ್ತದೆ. ಈ ಲೆಕ್ಕಾಚಾರ ಎಲ್ಲಿ ಎಡವಿದರೂ ಭಾರತದ ಫೈನಲ್ ಹಾದಿ ಕೊನೆಯಾಗಲಿದೆ.