Ind vs Ban 2nd Test : ಪಂದ್ಯದ ಸಮಯ, ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು ಮುನ್ನಡೆ ಪಡೆದುಕೊಂಡಿದೆ. ಇದೀಗ ಎರಡನೇ ಪಂದ್ಯದಲ್ಲಿಯೂ ಗೆದ್ದು ಸರಣಿ ವೈಟ್‌ಬಾಶ್ ಮಾಡಿಕೊಳ್ಳುವ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿಯೂ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ.
ಇನ್ನು ಈ ಸರಣಿಯ ಎರಡನೇ ಪಂದ್ಯಕ್ಕೂ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾದಿದ್ದು ಕೆಎಲ್ ರಾಹುಲ್ ನೇತೃತ್ವದಲ್ಲಿಯೇ ಭಾರತ ತಂಡ ಕಣಕ್ಕಿಳಿಯಲಿದೆ. ಮೊದಲ ಪಂದ್ಯದಲ್ಲಿ ನಾಯಕನಾಗಿ ಮಿಂಚಿದ ಕೆಎಲ್ ರಾಹುಲ್ ಬ್ಯಾಟಿಂಗ್‌ನಲ್ಲಿ ಮಿಂಚಲು ,ವಿಫಲವಾಗಿದ್ದರು. ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿಯೂ ತಂಡಕ್ಕೆ ನೆರವಾಗುವ ವಿಶ್ವಾಸದಲ್ಲಿದ್ದಾರೆ. ಇನ್ನು ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ ಶ್ರೇಯಸ್ ಐಯ್ಯರ್ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದು ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ ಮೇಲೆಯೂ ನಿರೀಕ್ಷೆಗಳು ಇದೆ.

ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ 2ನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ಗುರುವಾರ ನಡೆಯಲಿದೆ. ಢಾಕಾದಲ್ಲಿರುವ ಶೇ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಬೆಳಿಗ್ಗೆ 9 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಭಾರತದಲ್ಲಿ ಈ ಪಂದ್ಯ ಸೋನಿ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಅಲ್ಲದೆ ಸೋನಿ ಲಿವ್‌ನಲ್ಲಿ ಈ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
2ನೇ ಟೆಸ್ಟ್ ಪಂದ್ಯ ಢಾಕಾದಲ್ಲಿ ನಡೆಯಲಿದೆ. ಈ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಸಹಲಾರಿಯಾಗಿದ್ದು ಬೌಲರ್‌ಗಳಿಗೆ ಸವಾಲಾಗುವ ಸಾಧ್ಯತೆಯಿದೆ. ಈ ಪಂದ್ಯದ ಬಹುತೇಕ ಸಂದರ್ಭದಲ್ಲಿ ಪಿಚ್‌ನ ಮೇಲ್ಮೈ ಸಮತಟ್ಟಾಗಿ ವರ್ತಿಸಲಿದೆ. ಆದರೆ ಪಂದ್ಯದ 4 ಹಾಗೂ 5ನೇ ದಿನ ಸ್ಪಿನ್ನರ್‌ಗಳಿ ಇಲ್ಲಿ ಹೆಚ್ಚಿನ ನೆರವು ಪಡೆಯುವ ನಿರೀಕ್ಷೆಯಿದೆ. ಇನ್ನು ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲಿದೆ.

ಭಾರತ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್

ಬಾಂಗ್ಲಾದೇಶ ಆಡುವ ಬಳಗ
ಬಾಂಗ್ಲಾದೇಶ: ನಜ್ಮುಲ್ ಹುಸೇನ್ ಶಾಂಟೋ, ಅನಾಮುಲ್ ಹಕ್, ಜಾಕಿರ್ ಹುಸೇನ್, ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಲಿಟನ್ ದಾಸ್, ಮೆಹಿದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಖಲೇಲ್ ಮಹಮೂದ್, ತೈಜುಲ್ ಇಸ್ಲಾಂ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications