ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs BAN 2nd Test: ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟಿರುವ ಅಶ್ವಿನ್, ಪೂಜಾರ

IND vs BAN 2nd Test: Ravichandran Ashwin And Cheteshwar Pujara Eyeing On Big Milestones In Test Cricket

ಡಿಸೆಂಬರ್ 22ರ ಗುರುವಾರದಿಂದ ಮೀರ್‌ಪುರದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವೆ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಪಡೆದಿದೆ.

ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕೆಲವು ಮೈಲುಗಲ್ಲುಗಳನ್ನು ಸ್ಥಾಪಿಸುವ ಅಂಚಿನಲ್ಲಿದ್ದಾರೆ.

Flashback 2022: ಭಾರತ ಪರ ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್Flashback 2022: ಭಾರತ ಪರ ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್

ಟೆಸ್ಟ್ ಕ್ರಿಕೆಟ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅವರು 3000 ರನ್ ಗಳಿಸಲು ಕೇವಲ 11 ರನ್‌ಗಳ ಕೊರತೆಯಿದೆ. ಅಶ್ವಿನ್ ಈ ಮೈಲಿಗಲ್ಲು ತಲುಪಿದರೆ, ಭಾರತದ ಕಪಿಲ್ ದೇವ್, ಆಸ್ಟ್ರೇಲಿಯಾದ ಶೇನ್ ವಾರ್ನ್, ನ್ಯೂಜಿಲೆಂಡ್‌ನ ರಿಚರ್ಡ್ ಹ್ಯಾಡ್ಲಿ ಮತ್ತು ದಕ್ಷಿಣ ಆಫ್ರಿಕಾದ ಶಾನ್ ಪೊಲಾಕ್ ಅವರಂತಹ ಗಣ್ಯರ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.

450 ವಿಕೆಟ್‌ಗಳನ್ನು ಪೂರೈಸಲು ಕೇವಲ ಏಳು ವಿಕೆಟ್‌ಗಳ ಅವಶ್ಯಕತೆ

450 ವಿಕೆಟ್‌ಗಳನ್ನು ಪೂರೈಸಲು ಕೇವಲ ಏಳು ವಿಕೆಟ್‌ಗಳ ಅವಶ್ಯಕತೆ

ಕಪಿಲ್ ದೇವ್, ಶೇನ್ ವಾರ್ನ್, ಶಾನ್ ಪೊಲಾಕ್, ರಿಚರ್ಡ್ ಹ್ಯಾಡ್ಲಿ ಮತ್ತು ಬ್ರಾಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 3000 ರನ್ ಗಳಿಸಿದ್ದಾರೆ ಮತ್ತು 400ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ತಮಿಳುನಾಡು ಮೂಲದ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 450 ವಿಕೆಟ್‌ಗಳನ್ನು ಪೂರೈಸಲು ಕೇವಲ ಏಳು ವಿಕೆಟ್‌ಗಳ ಅವಶ್ಯಕತೆ ಇದೆ.

ರವಿಚಂದ್ರನ್ ಅಶ್ವಿನ್ ಒಟ್ಟಾರೆಯಾಗಿ 450 ವಿಕೆಟ್‌ಗಳನ್ನು ಗಳಿಸಿದ ಅತಿ ವೇಗದ ಭಾರತೀಯ ಮತ್ತು ವಿಶ್ವದ ಎರಡನೇ ಅತಿವೇಗದ ಆಟಗಾರನಾಗುವ ಅವಕಾಶವನ್ನು ಹೊಂದಿದ್ದಾರೆ. ಸದ್ಯಕ್ಕೆ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಮಾರ್ಚ್ 2005ರಲ್ಲಿ ತಮ್ಮ 93ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸಾಧನೆ ಮಾಡಿದಾಗ ಭಾರತೀಯ ದಾಖಲೆಯನ್ನು ಹೊಂದಿದ್ದಾರೆ.

ರವಿಚಂದ್ರನ್ ಅಶ್ವಿನ್ 87 ಪಂದ್ಯಗಳಿಂದ 443 ವಿಕೆಟ್‌

ರವಿಚಂದ್ರನ್ ಅಶ್ವಿನ್ 87 ಪಂದ್ಯಗಳಿಂದ 443 ವಿಕೆಟ್‌

ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ, ಮೇ 2003ರಲ್ಲಿ ಕ್ಯಾಂಡಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 80 ಪಂದ್ಯಗಳಲ್ಲಿ ಮೈಲಿಗಲ್ಲನ್ನು ತಲುಪಿದ್ದಾರೆ. ರವಿಚಂದ್ರನ್ ಅಶ್ವಿನ್ ತಾವು ಆಡಿದ 87 ಪಂದ್ಯಗಳಿಂದ 30 ಐದು-ವಿಕೆಟ್ ಗೊಂಚಲು ಗಳಿಕೆಯೊಂದಿಗೆ 443 ವಿಕೆಟ್‌ಗಳನ್ನು ಪಡೆದಿದ್ದಾರೆ.

ಚೇತೇಶ್ವರ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ 7000 ರನ್

ಚೇತೇಶ್ವರ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ 7000 ರನ್

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಕೂಡ ವೃತ್ತಿಜೀವನದ ಮಹತ್ವದ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 7000 ರನ್ ಗಳಿಸಿದ ಎಂಟನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲು ಚೇತೇಶ್ವರ ಪೂಜಾರಗೆ ಕೇವಲ 16 ರನ್‌ಗಳ ಅವಶ್ಯಕತೆ ಇದೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 7000ಕ್ಕೂ ಹೆಚ್ಚು ರನ್ ಗಳಿಸಿದ ಇತರ ಏಳು ಭಾರತೀಯ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ.

Story first published: Wednesday, December 21, 2022, 11:35 [IST]
Other articles published on Dec 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X