WTC Points Table: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಸುಗಮವಾಗಿಸಿಕೊಂಡ ಟೀಂ ಇಂಡಿಯಾ

ಭಾನುವಾರ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧದ 2ನೇ ಟೆಸ್ಟ್‌ನಲ್ಲಿ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿತು. ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿತು.
ಈ ಸರಣಿಯಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿಯನ್ನು ಸುಗಮವಾಗಿಸಿಕೊಂಡಿದೆ. ಮೊದಲನೇ ಟೆಸ್ಟ್ ಪಂದ್ಯವನ್ನು ಗೆದ್ದ ಬಳಿಕ ಭಾರತ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗದಿತ್ತು. ಈಗ ಸರಣಿ ಗೆಲ್ಲುವ ಮೂಲಕ ಪಿಸಿಟಿ ಅಂಕಗಳನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ.
ಭಾನುವಾರ ನಡೆದ ಬಾಂಗ್ಲಾದೇಶ ವಿರುದ್ಧ ಭಾರತ 2-0 ಅಂತರದಲ್ಲಿ ಸರಣಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ಶ್ರೇಯಸ್ ಅಯ್ಯರ್ ಮತ್ತು ಅಶ್ವಿನ್ ಪ್ರವಾಸಿ ತಂಡಕ್ಕೆ ಮೂರು ವಿಕೆಟ್‌ಗಳ ರೋಚಕ ಗೆಲುವು ತಂದುಕೊಟ್ಟರು. ಕೆಎಲ್ ರಾಹುಲ್ ನೇತೃತ್ವದ ತಂಡವು ಈಗ ಭಾರತ ಮತ್ತು ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ನಡುವಿನ ಅಂತರವನ್ನು ಹೆಚ್ಚಿಸಿದೆ. ಭಾರತ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಮೂರು ಟೆಸ್ಟ್ ಪಂದ್ಯಗಳಲ್ಲಿ ಗೆಲ್ಲಬೇಕಿದೆ
ಭಾರತ ತಂಡ 2021-23 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಚಕ್ರದ ಕೊನೆಯ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಕನಿಷ್ಠ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಫೈನಲ್‌ಗೆ ಸುಲಭವಾಗಿ ಪ್ರವೇಶ ಪಡೆಯಲಿದೆ.
ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮೊದಲನೇ ಪಂದ್ಯವನ್ನು ಸೋತಿದೆ. ಉಳಿದ ಎರಡು ಪಂದ್ಯಗಳನ್ನು ದಕ್ಷಿಣ ಆಫ್ರಿಕಾ ಸೋತರೆ ಅದು ಫೈನಲ್ ಪ್ರವೇಶಿಸುವುದು ಭಾರಿ ಕಷ್ಟವಾಗಲಿದ್ದು, ಭಾರತದ ಹಾದಿ ಸುಲಭವಾಗಲಿದೆ. ಒಂದು ವೇಳೆ ಉಳಿದ ಎರಡು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ ಭಾರತಕ್ಕೆ ಕಷ್ಟವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ನಂತರ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.
Ind vs Ban 2nd Test: ಬಾಂಗ್ಲಾದೇಶದಲ್ಲಿ ಮುಂದುವರಿದ ಕೆಎಲ್ ರಾಹುಲ್ ಕಳಪೆ ಆಟ

ಬಾಂಗ್ಲಾದೇಶದ ವಿರುದ್ಧ ಸರಣಿ ಗೆದ್ದ ಬಳಿಕ ಅಂಕಪಟ್ಟಿ
ಸದ್ಯದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೇಬಲ್‌ನಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ ಮುಂದುವರೆದಿದೆ. 13 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ, 76.92 ಪಿಸಿಟಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 2023ರ ಜೂನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವುದು ಖಚಿತವಾಗಿದೆ.
ಟೀಂ ಇಂಡಿಯಾ 58.93 ಪಿಸಿಟಿಯೊಂದಿಗೆ 2ನೇ ಸ್ಥಾನದಲ್ಲಿದೆ. 14 ಟೆಸ್ಟ್ ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಜಯ ಗಳಿಸಿದ್ದು, 4 ಪಂದ್ಯಗಳಲ್ಲಿ ಸೋಲನುಭವಿಸಿದೆ, 2 ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲ ಟೆಸ್ಟ್‌ನಲ್ಲಿ ಸೋತ ಬಳಿಕ 54.55 ಪಿಸಿಟಿಯೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಈ ತಂಡಗಳಿಗೆ ಫೈನಲ್ ಪ್ರವೇಶಿಸುವ ಅವಕಾಶವಿಲ್ಲ
ಪಾಕಿಸ್ತಾನದ ವಿರುದ್ಧ 3 ಟೆಸ್ಟ್ ಪಂದ್ಯಗಳ ಸರಣಿಯನ್ನು ವೈಟ್ ವಾಶ್ ಮಾಡಿದ ನಂತರ ಕೂಡ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಅವರು 46.97 ಪಿಸಿಟಿ ಹೊಂದಿದ್ದು, ಇನ್ನು ಯಾವುದೇ ಟೆಸ್ಟ್ ಪಂದ್ಯವನ್ನು ಹೊಂದಿಲ್ಲ. ಪಾಕಿಸ್ತಾನಕ್ಕೆ ಫೈನಲ್ ತಲುಪುವ ಅವಕಾಶ ಇತ್ತಾದರೂ ಇಂಗ್ಲೆಂಡ್ ವಿರುದ್ಧದ ಹೀನಾಯ ಸೋಲಿನ ನಂತರ ರೇಸ್‌ನಿಂದ ಹೊರಬಿದ್ದಿದೆ.
ಬಾಂಗ್ಲಾದೇಶ, ನ್ಯೂಜಿಲೆಂಡ್ ವೆಸ್ಟ್ ಇಂಡೀಸ್ ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಗುಳಿದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications