Ishan Kishan : ಇಶಾನ್ ಕಿಶನ್ ವಿಶ್ವದಾಖಲೆಯ ದ್ವಿಶತಕ: ದಿಗ್ಗಜರ ಸಾಲಿಗೆ ಸೇರಿದ ಯುವ ಆಟಗಾರ

ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೊಘ ಬ್ಯಾಟಿಂಗ್ ಪ್ರದರ್ಶಿಸಿದೆ. ಅದರಲ್ಲೂ ರೋಹಿತ್ ಶರ್ಮಾ ಅಲಭ್ಯತೆಯ ಹಿನ್ನೆಲೆಯಲ್ಲಿ ಅವಕಾಶ ಪಡೆದುಕೊಂಡ ಇಶಾನ್ ಕಿಶನ್ ತಮ್ಮ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ದಾಖಲೆಯ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರಿದ್ದಾರೆ. ವಿರಾಟ್ ಕೊಹ್ಲಿ ಜೊತೆ ಸೇರಿ ಅಮೋಘ ಬ್ಯತಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ ಎರಡನೇ ವಿಕೆಟ್‌ಗೆ ಅಮೋಘ ಜೊತೆಯಾಟವನ್ನು ಆಡಿದ್ದಾರೆ.
ಬಾಂಗ್ಲಾದೇಶ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಇಶಾನ್ ಕಿಶನ್ ಬೌಂಡರಿ ಸಿಕ್ಸರ್‌ಗಳಗೈದಿದ್ದಾರೆ. ಕೇವಲ 126 ಎಸೆತಗಳಲ್ಲಿ ದ್ವಿಶತಕದ ಮೈಲಿಗಲ್ಲುದಾಟಿದ ಇಶಾನ್ ಕಿಶನ್ ಅತ್ಯಂತ ವೇಗವಾಘಿ ದ್ವಿಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ 138 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಈ ದಾಖಲೆಯನ್ನು ಬರೆದಿದ್ದರು. ಈ ದಾಖಲೆಯೀಗ ಮುರಿದಿದೆ.

210 ರನ್‌ಗಳಿಸಿದ ಇಶಾನ್ ಕಿಶನ್
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಬರೊಬ್ಬರಿ 210 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. 131 ಎಸೆತಗಳನ್ನು ಎದುರಿಸಿದ ಕಿಶನ್ 24 ಬೌಂಡರಿ ಹಾಗೂ 10 ಸಿಕ್ಸರ್ ಸಿಡಿಸಿದ್ದಾರೆ. ಇಶಾನ್ ಕಿಶನ್ 85 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅದಾದ ಬಳಿಕ ರನ್ ವೇಗವನ್ನು ಮತ್ತಷ್ಟು ಹೆಚ್ಚಿಸಿದ ಇಶಾನ್ ಕಿಶನ್ ರನ್ ವೇಗವನ್ನು ಭಾರೀ ಪ್ರಮಾಣದಲ್ಲಿ ಏರಿಸಿದರು. ಬಳಿಕ ದ್ವಿಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದ್ವಿಶತಕವನ್ನು ಸಿಡಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ ಇಶಾನ್ ಕಿಶನ್. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ರೋಹಿತ್ ಶರ್ಮಾ ಈ ಸಾಧನೆಯನ್ನು ಮಾಡಿದ್ದರು. ಈ ಪೈಕಿ ವೀರೇಂದ್ರ ಸೆಹ್ವಾಗ್, ಹಾಗೂ ಸಚಿನ್ ತೆಂಡೂಲ್ಕರ್ ಒಂದು ದ್ವಿಶತಕ ಸಿಡಿಸಿದ್ದರೆ ರೋಹಿತ್ ಶರ್ಮಾ ಹೆಸರಿನಲ್ಲಿ ಮೂರು ದ್ವಿಶತಕಗಳಿದೆ. ಒಟ್ಟಾರೆಯಾಗಿ ಭಾರತದ ಪರ ದಾಖಲಾದ ಆರನೇ ದ್ವಿಶತಕ ಇದು ಎಂಬುದು ಮತ್ತೊಂದು ಗಮನಾರ್ಹ ಅಂಶ.

ಕೊಹ್ಲಿ ಜೊತೆಗೆ 290 ರನ್‌ಗಳ ಬೃಹತ್ ಜೊತೆಯಾಟ
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕ ಆಟಗಾರ ಉಂಟಾಯಿತು. ಶಿಖರ್ ಧವನ್ ತಂಡದ ಮೊತ್ತ 15 ರನ್‌ಗಳಿದ್ದಾಗ 3 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡಿದ್ದರು. ಬಳಿಕ ಜೊತೆಯದ ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಅಮೋಘ ಜೊತೆಯಾಟವನ್ನು ಪ್ರದರ್ಶಿಸಿದರು. ಈ ಜೋಡಿ ಬರೊಬ್ಬರಿ 290 ರನ್‌ಗಳ ಜೊತೆಯಾಟವನ್ನು ನೀಡಿ ಬೇರ್ಪಟ್ಟಿತು. ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡ ಬಳಿಕ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶತಕವನ್ನು ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ 113 ರನ್‌ಗಳನ್ನು ಗಳಿಸಿ ಶಕಿಬ್ ಅಲ್ ಹಸನ್‌ಗೆ ವಿಕೆಟ್ ಒಪ್ಪಿಸಿದರು.

ಇತ್ತಂಡಗಳ ಆಡುವ ಬಳಗ
ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟನ್ ದಾಸ್ (ನಾಯಕ), ಯಾಸಿರ್ ಅಲಿ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್
ಬೆಂಚ್: ಹಸನ್ ಮಹಮೂದ್, ನೂರುಲ್ ಹಸನ್, ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂತೋ
ಟೀಮ್ ಇಂಡಿಯಾ: ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ಬೆಂಚ್: ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications