For Quick Alerts
ALLOW NOTIFICATIONS  
For Daily Alerts
 

ಮುತ್ತಿನ ನಗರಿಯಲ್ಲಿ ಬೌಂಡರಿ ಸಿಕ್ಸರ್‌ಗಳ ಸುರಿಮಳೆ: ಬೃಹತ್ ಮೊತ್ತ ಕಲೆ ಹಾಕಿ ದಾಖಲೆಯ ಪುಟಕ್ಕೆ ಟೀಮ್ ಇಂಡಿಯಾ ಎಂಟ್ರಿ

ಹೈದರಾಬಾದ್‌: ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ ಬಾರಿಸಿದ ಶತಕ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಬಾರಿಸಿದ ಅರ್ಧಶತಕ ಬಲದಿಂದ ಟೀಮ್ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 298 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ಟಾಸ್ ಗೆದ್ದು ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ ಕಳೆದುಕೊಂಡು 297 ರನ್‌ ಸೇರಿಸಿತು. ಈ ಮೂಲಕ ಟೀಮ್ ಇಂಡಿಯಾ ಕ್ಲೀನ್‌ ಸ್ವೀಪ್‌ ಸಾಧಿಸುವ ನಿಟ್ಟಿನಲ್ಲಿ ದೃಷ್ಟಿ ನೆಟ್ಟಿದೆ. ಈ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಕಲೆ ಹಾಕಿದ ಟೆಸ್ಟ್‌ ಆಡುವ ತಂಡ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.

IND vs BAN 3rd T20 Team India Enters the Cricket Record Books

ಟಿ20ಯಲ್ಲಿ ಗರಿಷ್ಠ ರನ್‌

2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ 314 ರನ್ ಗಳಿಸಿ ದಾಖಲೆ ನಿರ್ಮಿಸಿತ್ತು. ಚುಟುಕು ಫಾರ್ಮೆಟ್‌ನಲ್ಲಿ ಇದು ಗರಿಷ್ಠ ಮೊತ್ತವಾಗಿದೆ. 2019 ರಲ್ಲಿ ಟರ್ಕಿ ವಿರುದ್ಧದ ಪಂದ್ಯದಲ್ಲಿ 278 ರನ್‌ಗಳ ಬೃಹತ್ ಸ್ಕೋರ್ ಗಳಿಸಿದ ಜೆಕ್ ಗಣರಾಜ್ಯವು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಟೀಮ್ ಇಂಡಿಯಾ ಈ ಸಾಧನೆಯನ್ನು ಅಳಿಸಿ ಹಾಕಿದೆ. ಅಲ್ಲದೆ ಟೆಸ್ಟ್‌ ಆಡುವ ತಂಡವೊಂದು ಗಳಿಸಿದ ಗರಿಷ್ಠ ಸ್ಕೋರ್ ಎಂಬ ಹೆಗ್ಗಳಿಕೆ ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಅಮೋಘ ಜೊತೆಯಾಟ

ಟೀಮ್ ಇಂಡಿಯಾದ ಪರ ಇನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್ ಶರ್ಮಾ ದೊಡ್ಡ ಜತೆಯಾಟದ ಕಾಣಿಕೆ ನೀಡುವಲ್ಲಿ ವಿಫಲರಾದರು. ಅಭಿಷೇಕ್‌ 4 ರನ್‌ಗಳಿಗೆ ಔಟ್ ಆದರು. ಎರಡನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಎರಡನೇ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಕೇವಲ 70 ಎಸೆತಗಳಲ್ಲಿ 173 ರನ್‌ ಸಿಡಿಸಿ ಅಬ್ಬರಿಸಿತು.

ಸಂಜು ಸ್ಯಾಮ್ಸನ್‌ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದರು. ಇವರು 11 ಬೌಂಡರಿ, 8 ಸಿಕ್ಸರ್‌ ನೆರವಿನಿಂದ 111 ರನ್‌ ಬಾರಿಸಿ ಔಟ್ ಆದರು. ಸಂಜು ಸ್ಯಾಮ್ಸನ್‌ ಈ ಪಂದ್ಯದಲ್ಲಿ ದಾಖಲೆಯನ್ನು ಬರೆದಿದ್ದಾರೆ. ಇವರು ಒಂದೇ ಓವರ್‌ನಲ್ಲಿ ಐದು ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಪರ ವೇಗವಾಗಿ ಶತಕ ಬಾರಿಸಿ ಆಟಗಾರರ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದಾರೆ.

ನಾಯಕ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ಸಹಾಯದಿಂದ 75 ರನ್ ಬಾರಿಸಿ ತಂಡಕ್ಕೆ ಆಧಾರವಾದರು.

ಟೀಮ್ ಇಂಡಿಯಾದ ಪರ ಮಧ್ಯಮ ಕ್ರಮಾಂದ ಆಟಗಾರ ರಿಯಾನ್‌ ಪರಾಗ್‌ 13 ಎಸೆತಗಳಲ್ಲಿ 34 ರನ್‌ ಸಿಡಿಸಿ ಆರ್ಭಟಿಸಿದರು. ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 47 ರನ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

ಬಾಂಗ್ಲಾದೇಶದ ಪರ ತಂಜಿಮ್ ಹಸನ್ ಸಾಕಿಬ್ ಮೂರು ವಿಕೆಟ್‌ ಪಡೆದು ಅಬ್ಬರಿಸಿದರು.

Story first published: Saturday, October 12, 2024, 21:02 [IST]
Other articles published on Oct 12, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+