For Quick Alerts
ALLOW NOTIFICATIONS  
For Daily Alerts
 

IND vs BAN: 3 ವರ್ಷಗಳ ಬಳಿಕ ಭಾರತ ಟಿ20 ತಂಡ ಸೇರಿದ ಮಿಸ್ಟರಿ ಸ್ಪಿನ್ನರ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 6 ರಂದು ಗ್ವಾಲಿಯರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಟಿ20 ಸರಣಿ ಆರಂಭವಾಗಲಿದೆ. ಭಾರತ ತಂಡ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಈ ಸರಣಿಯನ್ನು ಆಡಲಿದೆ.

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಜೊತೆಗೆ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡಯ ಕೂಡ ಈ ಸರಣಿಯನ್ನು ಆಡುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ. ಇದಲ್ಲದೆ, ತಮ್ಮ ಬಿರುಸಿನ ವೇಗದಲ್ಲಿ ಬೌಲಿಂಗ್ ಮೂಲಕ ಐಪಿಎಲ್‌ನಲ್ಲಿ ಗಮನ ಸೆಳೆದಿದ್ದ ಯುವ ಬೌಲರ್‌ ಕೂಡ ಸ್ಥಾನ ಪಡೆಯುವಲ್ಲಿ ಯಶ್ವಯಾಗಿದ್ದಾರೆ. ಎಲ್ಲಕ್ಕಿಂತ ಪ್ರಮಖವಾಗಿ ಮೂರು ವರ್ಷಗಳ ನಂತರ ಮ್ಯಾಚ್ ವಿನ್ನರ್ ಮಿಸ್ಟರ್ ಸ್ಪಿನ್ನರ್ ಭಾರತ ತಂಡ ಸೇರಿರುವುದು ಕುತೂಹಲ ಮೂಡಿಸಿದೆ.

IND vs BAN After 3 years Varun Chakravarthy joined the Indian T20 team

3 ವರ್ಷಗಳ ನಂತರ

ಬರೋಬ್ಬರಿ ಮೂರು ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿದ್ದ ಮಿಸ್ಟರಿ ಸ್ಪಿನ್ನರ್‌ಗೆ ಅದೃಷ್ಟ ಖುಲಾಯಿಸಿದೆ. ಕಳೆದೆರಡು ಐಪಿಎಲ್ ಟೂರ್ನಿಗಳಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬಿಸಿಸಿಐ ಆಯ್ಕೆ ಸಮಿತಿ ಗಮನ ಸೆಳೆದಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಮಿಂಚಿದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಸುಮಾರು ಮೂರು ವರ್ಷಗಳ ನಂತರ ಭಾರತ ತಂಡಕ್ಕೆ ಮರಳಿದ್ದಾರೆ.

2023ರ ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್ ಪರ 23 ವಿಕೆಟ್‌ಗಳನ್ನು ಪಡೆದು ಮಿಂಚಿದರೆ, 2024ರಲ್ಲಿ ಇದೇ ತಂಡದ ಪರ 21 ಕಬಳಿಸುವ ಮೂಲಕ ಕೆಕೆಆರ್ ಚಾಂಪಿಯನ್ ಆಗುವುದಕ್ಕೆ ಪ್ರಮಖ ಪಾತ್ರವಹಿಸಿದರು. ಇದರ ಫಲವಾಗಿ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

2021ರ ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಪರ ವರುಣ್ ಚಕ್ರವರ್ತಿ ತಮ್ಮ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಆ ವರ್ಷದ ನಂತರ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಬದಲಿಗೆ 2022ರ ಟಿ20 ವಿಶ್ವಕಪ್ ಭಾರತ ತಂಡಕ್ಕೆ ಆಯ್ಕೆಯಾಗದ್ದರು. ಆದರೆ, ಈ ಮೆಗಾ ಟೂರ್ನಿಯಲ್ಲಿ ತಮ್ಮ ಪ್ರದರ್ಶನದಿಂದ ನಿರಾಸೆ ಮೂಡಿಸಿದ್ದರು. ಇದಾದ ನಂತರ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿರಲಿಲ್ಲ.

7 ರೀತಿಯಲ್ಲಿ ಬೌಲ್

ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು 7 ರೀತಿಯಲ್ಲಿ ಬಾಲ್ ಬೌಲ್ ಮಾಡಬಲ್ಲರು. ಆಫ್‌ಬ್ರೇಕ್, ಲೆಗ್‌ಬ್ರೇಕ್, ಗೂಗ್ಲಿ, ಕ್ಯಾರಮ್ ಬಾಲ್, ಫ್ಲಿಪ್ಪರ್, ಟಾಪ್‌ಸ್ಪಿನ್ ಮತ್ತು ಯಾರ್ಕರ್ ಸೇರಿವೆ. ಇದುವರೆಗೆ ಟೀಮ್ ಇಂಡಿಯಾ ಪರ ವರುಣ್ ಚಕ್ರವರ್ತಿ 6 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದಾರೆ.

ತವರಿನಲ್ಲಿ ಮಿಂಚುವ ನಿರೀಕ್ಷೆ

ಭಾರತದಲ್ಲಿನ ಪಿಚ್‌ಗಳು ಸ್ಪಿನ್ನರ್‌ಗಳಿಗೆ ಹೇಳಿ ಮಾಡಿಸಿದಂತಿವೆ. ಅಷ್ಟರ ಮಟ್ಟಿಗೆ ಭಾರತದಲ್ಲಿ ಸ್ಪಿನ್ನರ್‌ಗಳು ಯಶಸ್ಸು ಕಂಡಿದ್ದಾರೆ. ಹಾಗೆಯೇ ವರುಣ್ ಚಕ್ರವರ್ತಿ 2023 ಮತ್ತು 2024ರ ಐಪಿಎಲ್ ಟೂರ್ನಿಯಲ್ಲಿ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ಅದ್ಭುತಗಳನ್ನು ಮಾಡಿದ್ದಾರೆ. ಒಂದು ವೇಳೆ ಅವರಿಗೆ ಬಾಂಗ್ಲಾದೇಶ ವಿರುದ್ಧ ಆಡುವ ಅವಕಾಶ ಸಿಕ್ಕರೆ, ಭಾರತದ ಮ್ಯಾಚ್ ವಿನ್ನರ್ ಆಗುವ ಅವಕಾಶವಿದೆ. ಎಲ್ಲಾ ರೀತಿಯ ಸ್ಪಿನ್ ಅಸ್ತ್ರಗಳನ್ನು ಹೊಂದಿರುವ ಅವರು ಬಾಂಗ್ಲಾದೇಶ ಬ್ಯಾಟರ್‌ಗಳಿಗೆ ಕಾಟ ನೀಡಬಹುದು. ತವರಿನಲ್ಲಿ ಟಿ20 ಸರಣಿ ನಡೆಯುತ್ತಿರುವುದರಿಂದ ಅವರು ತಮ್ಮ ಬೌಲಿಂಗ್ ಬಲದಿಂದ ಪ್ರಾಬಲ್ಯ ಸಾಧಿಸುವ ಸಾಧ್ಯತೆಗಳಿವೆ.

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಆರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

Story first published: Sunday, September 29, 2024, 8:25 [IST]
Other articles published on Sep 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+