ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾಗೆ ಮತ್ತೊಂದು ಹಿನ್ನಡೆ: ಬಾಂಗ್ಲಾ ಪ್ರವಾಸದಲ್ಲಿ ಗಾಯಗೊಂಡ ಮತ್ತೋರ್ವ ಆಟಗಾರ

IND vs BAN: another blow to Team India as Navdeep Saini ruled out after Rohit Sharma ruled out from 2nd Test

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಗುರುವಾರದಿಮದ ಆರಂಭವಾಗಲಿದೆ. ಢಾಕಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಗಾಯಗೊಂಡಿದ್ದು ರೋಹಿತ್ ಶರ್ಮಾ ಬಳಿಕ ಮತ್ತೋರ್ವ ಆಟಗಾರ ಸರಣಿಯಿಂದ ಹೊರಬಿದ್ದಿದ್ದಾರೆ.

ಢಾಕಾದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವೇಗದ ಬೌಲರ್ ನವ್‌ದೀಪ್ ಸೈನಿ ಕೂಡ ಗಾಯಗೊಂಡಿದ್ದಾರೆ. ಹೀಗಾಗಿ ಅಂತಿಮ ಪಂದ್ಯದಿಂದ ಸೈನಿ ಹೊರಬಿದ್ದಿದ್ದಾರೆ. ಬೆಂಗಳೂರಿನ ಎನ್‌ಸಿಎಗೆ ತೆರಳಿ ರಿಹ್ಯಾಬ್‌ನಲ್ಲಿ ಭಾಗಿಯಾಗಲಿದ್ದಾರೆ ನವ್‌ದೀಪ್ ಸೈನಿ.

ಫಿಫಾ ವಿಶ್ವ ರ‍್ಯಾಂಕಿಂಗ್: ಅರ್ಜೆಂಟಿನಾ ಅಲ್ಲ, ಕ್ವಾ.ಫೈನಲ್‌ನಲ್ಲಿ ಸೋತ ಈ ತಂಡವೇ ನಂ.1!ಫಿಫಾ ವಿಶ್ವ ರ‍್ಯಾಂಕಿಂಗ್: ಅರ್ಜೆಂಟಿನಾ ಅಲ್ಲ, ಕ್ವಾ.ಫೈನಲ್‌ನಲ್ಲಿ ಸೋತ ಈ ತಂಡವೇ ನಂ.1!

ಇನ್ನು ಆಟಗಾರರು ಗಾಯಗೊಂಡಿರುವ ವಿಚಾರವಾಗಿ ಬಿಸಿಸಿಐನ ವೈದ್ಯಕೀಯ ತಂಡ ಮಾಹಿತಿ ನೀಡಿದೆ. "ರೋಹಿತ್ ಶರ್ಮಾ ಬಿಸಿಸಿಐನ ವೈದ್ಯಕೀಯ ತಂಡದ ನಿಗಾದಲ್ಲಿದ್ದು ಚಿಕಿತ್ಸೆಯಲ್ಲಿದ್ದಾರೆ. ಬಾಂಗ್ಲಾ್ದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದ ಸಂದರ್ಭದಲ್ಲಿ ಅವರು ಬೆರಳಿಗೆ ಗಾಯಮಾಡಿಕೊಂಡಿದ್ದರು.ತಂಡದ ನಾಯಕ ಸಂಪೂರ್ಣ ಚೈತನ್ಯದೊಂದಿಗೆ ಅಂಗಳಕ್ಕಿಳಿದು ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಡೆಸಲು ಕೆಲ ದಿನಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯಕೀಯ ತಂಡ ತಿಳಿಸಿದೆ. ಅವರು ರಿಹ್ಯಾಬ್ ಮುಂದುವರಿಸಲಿದ್ದು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುವುದಿಲ್ಲ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಂದುವರಿದು ನವ್‌ದೀಪ್ ಸೂನಿ ಗಾಯದ ಬಗ್ಗೆಯೂ ಮಾಹಿತಿ ನೀಡಲಾಗಿದೆ. "ವೇಗದ ಬೌಲರ್ ಕಿಬ್ಬೊಟ್ಟೆಯ ಸ್ನಾಯುವಿನ ಒತ್ತಡಕ್ಕೆ ಒಳಗಾಗಿದ್ದು ಎರಡನೇ ಪಂದ್ಯದಿಂದ ಅವರು ಕೂಡ ಹೊರಗುಳಿಯಲಿದ್ದಾರೆ. ಈಗ ಅವರು ಎನ್‌ಸಿಎಗೆ ವರದಿ ಮಾಡಲಿದ್ದು ಗಾಯದ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ತಿಳಿಸಲಾಗಿದೆ.

ಪದಾರ್ಪಣಾ ಪಂದ್ಯದಲ್ಲಿ ದಾಖಲೆ ಬರೆದ ಇಂಗ್ಲೆಂಡ್ ಸ್ಪಿನ್ನರ್ ರೆಹಾನ್ ಅಹ್ಮದ್ಪದಾರ್ಪಣಾ ಪಂದ್ಯದಲ್ಲಿ ದಾಖಲೆ ಬರೆದ ಇಂಗ್ಲೆಂಡ್ ಸ್ಪಿನ್ನರ್ ರೆಹಾನ್ ಅಹ್ಮದ್

2ನೇ ಪಂದ್ಯಕ್ಕೂ ಕೆಎಲ್ ರಾಹುಲ್ ನಾಯಕತ್ವ
ಇನ್ನು ಎರಡನೇ ಟೆಸ್ಟ್ ಪಂದ್ಯಕ್ಕೂ ಕೂಡ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಎರಡನೇ ಪಂದ್ಯಕ್ಕೂ ಅಲಭ್ಯವಾಗಿರುವ ಕಾರಣ ಉಪನಾಯಕ ಕೆಎಲ್ ರಾಹುಲ್ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿ ಅದೇ ಪ್ರದರ್ಶನ ಮುಂದುವರಿಸವ ವಿಶ್ವಾಸದಲ್ಲಿದೆ.

ಟೀಮ್ ಇಂಡಿಯಾ ಸ್ಕ್ವಾಡ್: ಕೆಎಲ್ ರಾಹುಲ್ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಭ್ ಕುಮಾರ್, ಜಯದೇವ್ ಉನದ್ಕತ್

Story first published: Tuesday, December 20, 2022, 16:00 [IST]
Other articles published on Dec 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X