ಚೆನ್ನೈ: ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶಗಳ ನಡುವಣ ಬಹುನಿರೀಕ್ಷಿತ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಪ್ರವಾಸಿ ತಂಡದ ನಾಯಕನ ಪಾಲಾಗಿದೆ. ಬಾಂಗ್ಲಾದೇಶ ಕ್ಯಾಪ್ಟನ್ ಈ ಪಿಚ್‌ನ್ನು ನೋಡಿ ಬೌಲಿಂಗ್ ಮಾಡಲು ಮುಂದಾಗಿದ್ದಾರೆ.
ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ. ಪರಿಸ್ಥಿತಿಯ ಸಂಪೂರ್ಣ ಲಾಭ ಪಡೆಯಲು ಭಾರತೀಯ ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದು, ತಂಡದ ಸಂಯೋಜನೆ ಉತ್ತಮವಾಗಿದೆ. ಭಾರತ ಮೊದಲ ಟೆಸ್ಟ್‌ನಲ್ಲಿ ಮೂವರು ವೇಗಿಗಳಿಗೆ ಅವಕಾಶ ನೀಡಿದ್ದು, ಇಬ್ಬರು ಸ್ಪಿನ್ ಬೌಲರ್‌ಗಳಿಗೆ ಸ್ಥಾನ ನೀಡಿದೆ. ಆರ್‌ಸಿಬಿ ಪರ ಮಿಂಚಿರುವ ಆಕಾಶ್ ದೀಪ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಸರ್ಫರಾಜ್ ಖಾನ್ ಅವರಿಗೆ ಅವಕಾಶ ನೀಡಿಲ್ಲ. ಇವರ ಬದಲಿಗೆ ಕೆಎಲ್ ರಾಹುಲ್ ತಂಡವನ್ನು ಸೇರಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕನ್ನಡಿಗ ರಾಹುಲ್ ಮಿಂಚು ಹರಿಸಬಲ್ಲ ಪ್ಲೇಯರ್.
ನಿಜಕ್ಕೂ ಈ ಚಿಂತೆ ಟೀಮ್ ಇಂಡಿಯಾವನ್ನು ಬಹುವಾಗಿ ಕಾಡಿತ್ತು. ತಂಡ ಯಾವ ಕಾಂಬಿನೇಷನ್‌ನಲ್ಲಿ ಅಖಾಡಕ್ಕೆ ಇಳಿಯುತ್ತದೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಫೈನಲಿ ಈ ಪ್ರಶ್ನೆಗೂ ಉತ್ತರ ಲಭಿಸಿದೆ. ಟೀಮ್ ಇಂಡಿಯಾ ಮೊದಲ ಟೆಸ್ಟ್‌ನಲ್ಲಿ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿದಿದೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಟಿ20 ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಅಂಗಳ ಪ್ರವೇಶಿಸಲಿದ್ದಾರೆ. ಉಳಿದಂತೆ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಅವರಿಗೆ ಅವಕಾಶ ನೀಡಲಾಗಿದೆ.
ಸ್ಪಿನ್ ಬೌಲರ್‌ಗಳಾಗಿ ಅನುಭವಿ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರಿಗೆ ಸ್ಥಾನ ಲಭಿಸಿದೆ. ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಅವಕಾಶ ವಂಚಿತರಾಗಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್,
ಬಾಂಗ್ಲಾ ತಂಡ: ಶಾದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ನಹಿದ್ ರಾಣಾ, ತಾಸ್ಕಿನ್