ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ "ಬಿ" ಗುಂಪಿನ ಪಂದ್ಯ ಆರಂಭವಾಗಿದೆ. ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಟೀಮ್ ಇಂಡಿಯಾದ ಮಹತ್ವದ ಪಂದ್ಯದಲ್ಲಿ ಇಬ್ಬರು ವೇಗದ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ. ಮೊಹಮ್ಮದ್ ಶಮಿ ಹಾಗೂ ಹರ್ಷಿತ್ ರಾಣಾ ವೇಗದ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ವೇಗದ ಬೌಲರ್ ರೂಪದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿದೆ. ಟೀಮ್ ಇಂಡಿಯಾ ವಿರುದ್ಧದ ಮಹತ್ವದ ಪಂದ್ಯಕ್ಕಾಗಿ ಬಾಂಗ್ಲಾ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ತಂಜಿಮ್ ಹಸನ್ ಅವರು ನಹೀದ್ ರಾಣಾ ಬದಲಿಗೆ ಸ್ಥಾನ ಪಡೆದಿದ್ದಾರೆ. ತಂಡದ ಆಟಗಾರರು ಬಿಗ್ ಮ್ಯಾಚ್‌ಗೆ ಉತ್ಸಾಹದಲ್ಲಿರುವುದಾಗಿ ಬಾಂಗ್ಲಾದೇಶದ ನಾಯಕ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮೂವರು ಆಲ್‌ರೌಂಡರ್‌ಗಳಿಗೆ ಅವಕಾಶ ನೀಡಲಾಗಿದೆ. ಎಂಟನೇ ಕ್ರಮಾಂಕದ ವರೆಗೂ ಬ್ಯಾಟಿಂಗ್ ಕ್ರಮಾಂಕವನ್ನು ಟೀಮ್ ಇಂಡಿಯಾ ಕಾಯ್ದುಕೊಂಡಿದೆ. ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಅವರು ಆಲ್‌ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ತಂಡದಲ್ಲಿ ಕುಲ್ದೀಪ್ ಯಾದವ್ ಅವರಿಗೆ ಸ್ಥಾನ ನೀಡಲಾಗಿದೆ. ತಂಡದಲ್ಲಿ ಸ್ಥಾನ ಪಡೆದಿರುವ ಏಕೈಕ ನುರಿತ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್.
ಉಳಿದಂತೆ ಭಾರತ ತಂಡದಲ್ಲಿ ಬೇರೆ ಏನು ಬದಲಾವಣೆ ಮಾಡಲಾಗಿಲ್ಲ. ಆರಂಭಿಕರಾಗಿ ರೋಹಿತ್ ಶರ್ಮಾ, ಶುಭಮನ್ ಗಿಲ್ ಕಾಣಿಸಿಕೊಂಡರೆ, ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ರಿಷಭ್ ಪಂತ್ ವಿರುದ್ಧ ಬಾಜಿಯನ್ನು ಕೆಎಲ್ ರಾಹುಲ್ ಗೆದ್ದುಕೊಂಡಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಹರ್ಷಿತ್ ರಾಣಾ.
ಬಾಂಗ್ಲಾ ತಂಡ: ತಂಜಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ತಂಜಿಮ್ ಹಸನ್, ಮುಸ್ತಫಿಜುರ್ ರಹಮಾನ್,