ಭಾರತ vs ಬಾಂಗ್ಲಾದೇಶ: ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಮುಖ ಸಾಧನೆ ಮಾಡಿದ ಚೇತೇಶ್ವರ್ ಪೂಜಾರ

ಟೀಮ್ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಪೂಜಾರ 24 ರನ್‌ಗಳನ್ನು ಗಳಿಸಿ ಔಟಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೆಸ್ಟ್ ಮಾದರಿಯಲ್ಲಿ 7000 ರನ್‌ಗಳ ಗಡಿ ದಾಟಿದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ಭಾರತದ 8ನೇ ಆಟಗಾರ ಎಂಬ ಗೆಹ್ಹಳಿಕೆಗೆ ಪೂಜಾರ ಪಾತ್ರವಾಗಿದ್ದಾರೆ.
ಈ ಪಂದ್ಯದ ಆರಂಭಕ್ಕೂ ಮುನ್ನ ಚೇತೇಶ್ವರ್ ಪೂಜಾರ ಈ ಮಹತ್ವದ ಮೈಲಿಗಲ್ಲು ದಾಟಲು 16 ರನ್‌ಗಳ ಅಗತ್ಯವಿತ್ತು. ಇದನ್ನು ದಾಟುವಲ್ಲಿ ಪೂಜಾರ ಯಶಸ್ವಿಯಾದರು. ಈ ಮೂಲಕ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವಿವಿಎಸ್ ಲಕ್ಷ್ಮಣ್, ವೀರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಸಾಲಿಗೆ ಸೇರಿಕೊಂಡಿದ್ದಾರೆ.

ಭರ್ಜರಿ ಕಮ್‌ಬ್ಯಾಕ್ ಮಾಡಿದ ಪೂಜಾರ
ಇನ್ನು ಈ ವರ್ಷದ ಆರಂಭದಲ್ಲಿ ಚೇತೇಶ್ವರ್ ಪೂಜಾರ ಕಳಪೆ ಫಾರ್ಮ್‌ನ ಕಾರಣದಿಂದಾಗಿ ಭಾರತ ತಂಡದಿಂದ ಹೊರಬಿದ್ದಿದ್ದರು.ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಬಳಿಕ ತಂಡದಿಂದ ಹೊರಗುಳಿದರು. ಭಾರತದಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸ್ಥಾನವನ್ನು ಪಡೆಯಲು ಪೂಜಾರ ವಿಫಲವಾಗಿದ್ದರು. ಆದರೆ ಬಳಿಕ ಕೌಂಟಿ ಕ್ರಿಕೆಟ್‌ನಲ್ಲಿ ಆಡಿದ ಪೂಜಾರ ಅದ್ಬುತ ಪ್ರದರ್ಶನ ನೀಡುವ ಮೂಲಕ ಗಮನಸೆಳೆದರು. ಹೀಗಾಗಿ ಮತ್ತೆ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ ಪೂಜಾರ.

ಸುದೀರ್ಘ ಕಾಲದ ಬಳಿಕ ಶತಕ
ಇನ್ನು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿಯೂ ಪೂಜಾರ ಅಮೋಘ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 90 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಸುದೀರ್ಘ ಕಾಲದಿಂದ ಕಾಯುತ್ತಿದ್ದ ಶತಕವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶ ತಂಡವನ್ನು 188 ರನ್‌ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿತ್ತು.

ಕ್ರೀಸ್‌ನಲ್ಲಿ ನೆಲೆಯೂರಲು ಬ್ಯಾಟರ್‌ಗಳ ಪರದಾಟ
ಇನ್ನು ಡಾಕಾ ಟೆಸ್ಟ್‌ನ ಮೊದಲ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ ತಂಡವನ್ನು 227 ರನ್‌ಗಳಿಗೆ ಆಲೌಟ್ ಮಾಡಿದೆ ಭಾರತ. ಆದರೆ ಅದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸುತ್ತಿರುವ ರಾಹುಲ್ ಪಡೆ ಕೂಡ ರನ್‌ಗಳಿಸಲು ಪರದಾಡುತ್ತಿದೆ. ಅದರಲ್ಲೂ ಅಗ್ರಕ್ರಮಾಂಕದ ಆಟಗಾರರು ನೀರಸ ಪ್ರದರ್ಶನ ನೀಡಿದ್ದು 100 ರನ್‌ಗಳ ಗಡಿದಾಟುವ ಮುನ್ನವೇ 4 ವಿಕೆಟ್ ಕಳೆದುಕೊಂಡಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications