ಶ್ರೇಯಸ್ ಐಯ್ಯರ್ ಆಟಕ್ಕೆ ಡಿಕೆ ಮೆಚ್ಚುಗೆ: ಒತ್ತಡದಲ್ಲಿ ಆಡುವ ಆಟಕ್ಕೆ ಹೆಚ್ಚಿನ ಮೌಲ್ಯ ಎಂದ ಅನುಭವಿ ಕ್ರಿಕೆಟಿಗ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಹಾಗೂ ಆರ್ ಅಶ್ವಿನ್ ಆಡಿದ ಜವಾಬ್ಧಾರಿಯುತ ಪ್ರದರ್ಶನದ ಕಾರಣದಿಂದಾಗಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಈ ಪ್ರದರ್ಶನದ ಬಳಿಕ ಭಾರತದ ಹಿರಿಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶ್ರೇಯಸ್ ಐಯ್ಯರ್ ಬ್ಯಾಟಿಂಗ್ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದು ಒತ್ತಡದಲ್ಲಿ ನೀಡುವ ಪ್ರದರ್ಶನಕ್ಕೆ ವಿಶೇಷವಾದ ಮೌಲ್ಯವಿದೆ ಎಂದಿದ್ದಾರೆ.
ಟೀಮ್ ಇಂಡಿಯಾ ಸಂಕಷ್ಟದ ಸಮಯದಲ್ಲಿದ್ದಾಗ ಬ್ಯಾಟಿಂಗ್‌ಗೆ ಇಳಿದ ಶ್ರೇಯಸ್ ಐಯ್ಯರ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಢಾಕಾದಲ್ಲಿ ನಡೆದ ಟೆಸ್ಟ್ ಸರಣಿಯ ನಾಲ್ಕನೇ ದಿನದಾಟದಲ್ಲಿ ಶ್ರೇಯಸ್ ಐಯ್ಯರ್ ಅಜೇಯ 29 ರನ್‌ಗಳಿಸಿದರು. ಅಲ್ಲದೆ ಆರ್ ಅಶ್ವಿನ್ ಜೊತೆಗೆ ಮಹತ್ವದ 71 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ಮುನ್ನ ಇದೇ ಪಂದ್ಯದ ಮೊದಕ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಐಯ್ಯರ್ 87 ರನ್‌ಗಳ ಕೊಡುಗೆ ನೀಡಿದ್ದರು. 94 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ರಿಷಭ್ ಪಂತ್ ಜೊತೆಗೆ 159 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿದ್ದರು ಶ್ರೇಯಸ್ ಐಯ್ಯರ್.
"ಈ ಸರಣಿಯುದ್ದಕ್ಕೂ ಶ್ರೇಯಸ್ ಐಯ್ಯರ್ ಅಮೋಘ ಆಟ ಪ್ರದರ್ಶಿಸಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಕಠಿಣವಾದ ವಿಚಾರವೆಂದರೆ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸುವುದು. ಎಲ್ಲಾ ಸವಾಲುಗಳ ಮಧತಯೆ ನೀವು ರನ್‌ಗಳನ್ನು ಬೆನ್ನಟ್ಟುತ್ತಿರುತ್ತೀರಿ. ಶ್ರೇಯಸ್ ಐಯ್ಯರ್ ಈ ಪಂದ್ಯದಲ್ಲಿ ಮತ್ತೊಮ್ಮೆ ತಾನೆಷ್ಟು ಪ್ರತಿಭಾವಂತ ಆಟಗಹಾರ ಎಂಬುದನ್ನು ಮತ್ತೊಮ್ಮೆ ಸಾರಿದ್ದಾರೆ" ಎಂದಿದ್ದಾರೆ ಟೀಮ್ ಇಂಡಿಯಾದ ಅನುಭವಿ ಆಟಗಾರ ದಿನೇಶ್ ಕಾರ್ತಿಕ್.
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications