ಜಯ್‌ದೇವ್ ಉನಾದ್ಕಟ್‌ಗೆ ಬೆಂಬಿಡದ ದುರದೃಷ್ಟ: ಮೊದಲ ಟೆಸ್ಟ್‌ನಿಂದ ಹೊರಬಿದ್ದ ವೇಗಿ!

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿ ಬುಧವಾರದಿಂದ ಆರಂಭವಾಗಲಿದ್ದು ಇತ್ತಂಡಗಳು ಕೂಡ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಸರಣಿಯ ಮೂಲಕ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಹಿರಿಯ ವೇಗಿ ಜಯ್‌ದೇವ್ ಉನಾದ್ಕಟ್ ಕಮ್‌ಬ್ಯಾಕ್ ಮಾಡಿದ್ದರು. ಅನುಭವಿ ಆಟಗಾರರಾದ ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಈ ಸರಣಿಗೆ ಅಲಭ್ತವಾದ ಕಾರಣ ಜಯ್‌ದೇವ್ ಉನಾದ್ಕಟ್‌ಗೆ ಅವಕಾಶ ದೊರೆಯಿತು.
ಸುದೀರ್ಘ ಕಾಲದ ಬಳಿಕ ಟೀಮ್ ಇಂಡಿಯಾದ ಬಾಗಿಲು ತೆರೆದರೂ ವೇಗಿ ಜಯ್‌ದೇವ್ ಉನಾದ್ಕಟ್ ಅವರ ಪಾಲಿಗೆ ದುರದೃಷ್ಟ ಮತ್ತೊಮ್ಮೆ ಬೆಂಬಿಡದೆ ಕಾಡಿದೆ. ಕೊನೆಯ ಕ್ಷಣದಲ್ಲಿ ಜಯ್‌ದೇವ್ ಉನಾದ್ಕಟ್ ಅವರಿಗೆ ವೀಸಾ ಸಮಸ್ಯೆಯಾಗಿರುವ ಕಾರಣ ಜಯ್‌ದೇವ್ ಉನಾದ್ಕಟ್‌ಗೆ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಅನುಭವಿ ವೇಗಿ ಅಲಭ್ಯವಾಗಿದ್ದಾರೆ.

12 ವರ್ಷಗಳ ಹಿಂದೆ ಏಕೈಕ ಟೆಸ್ಟ್
ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಜಯ್‌ದೇವ್ ಉನಾದ್ಕಟ್ ತಮ್ಮ ಏಕೈಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು 2010ರಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಂಚೂರಿಯನ್‌ನಲ್ಲಿ ಆಡಿದ್ದರು. ಅದಾದ ಬಳಿಕ 7 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅವಕಾಶ ಪಡೆದುಕೊಂಡ ಇವರು 10 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಗಟ್ಟಿಗೊಳಿಸಲು ಸಾಧ್ಯವಾಗಿರಲಿಲ್ಲ. 2018ರಲ್ಲಿ ನಿದಾಹಸ್ ಟ್ರೋಫಿಯಲ್ಲಿ ಕೊನೆಯ ಬಾರಿಗೆ ವೈಟ್‌ಬಾಲ್ ಮಾದರಿಯಲ್ಲಿ ಕಾಣಿಸಿಕೊಂಡಿದ್ದರು.

ಅಚ್ಚರಿಯ ಕರೆಯ ಬೆನ್ನಲ್ಲೇ ನಿರಾಸೆ
ದೇಶೀಯ ಕ್ರಿಕೆಟ್‌ನಲ್ಲಿ ಹಾಗೂ ಐಪಿಎಲ್‌ನಲ್ಲಿ ಸತತವಾಗಿ ಅದ್ಬುತ ಪ್ರದರ್ಶನ ನೀಡುತ್ತಿರುವ ಜಯ್‌ದೇವ್ ಉನಾದ್ಕಟ್‌ಗೆ ಈ ಸರಣಿಯಲ್ಲಿ ಬಿಸಿಸಿಐನಿಂದ ಕರೆ ಬಂದಿರುವುದು ಅಚ್ಚರಿ ಮೂಡಿಸಿತು. ಆದರೆ ಅದರ ಬೆನ್ನಲ್ಲೇ ಬಿಸಿಸಿಐನ ಲಾಜಿಸ್ಟಿಕ್ ಡಿಪಾರ್ಟ್‌ಮೆಂಟ್ ವೀಸಾ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಮಾಡಲು ವಿಫಲವಾದ ಕಾರಣ ನಿರಾಸೆಯಾಗಿದೆ. ಮಂಗಳವಾರದವರೆಗೂ ಜಯ್‌ದೇವ್ ಉನಾದ್ಕಟ್ ರಾಜ್‌ಕೋಟ್‌ನ ತಮ್ಮ ಮನೆಯಲ್ಲಿಯೇ ಇದ್ದು ಬಾಂಗ್ಲಾದೇಶಕ್ಕೆ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಪಂದ್ಯಕ್ಕೆ ಉನಾದ್ಕಟ್ ಲಭ್ಯವಾಗುವ ಸಾಧ್ಯತೆಯಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ
ಜಯ್‌ದೇವ್ ಉನಾದ್ಕಟ್ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದು ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಮಿಂಚುತ್ತಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ತಂಡದ ನಾಯಕನಾಗಿ ಮುನ್ನಡೆಸುತ್ತಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿಯೂ ಯಶಸ್ವಿಯಾಗಿದ್ದರು. ಈ ಆವೃತ್ತಿಯ ಟೂರ್ನಿಯಲ್ಲಿ ಆಡಿದ 10 ಪಂದ್ಯಗಳಲ್ಲಿ 19 ವಿಕೆಟ್ ಪಡೆದು ಮಿಂಚಿದ್ದಾರೆ. ಮೊಹಮ್ಮದ್ ಶಮಿ ಭುಜದ ನೋವಿಗೆ ತುತ್ತಾದ ಕಾರಣ ಈ ಸರಣಿಯಿಂದ ಹೊರಗುಳಿದ ಕಾರಣ ಉನಾದ್ಕಟ್‌ಗೆ ಇದು ಸುದೀರ್ಘ ಕಾಲದ ಬಳಿಕ ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಅವಕಾಶ ದೊರೆಯಲು ಕಾರಣವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications