ಬಹು ನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಆರಂಭವಾಗಿದೆ. ಪಾಕಿಸ್ತಾನ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಅಬ್ಬರಿಸಲು ಬೌಲರ್‌ಗಳು ಹಾಗೂ ಬ್ಯಾಟರ್‌ಗಳು ಸಜ್ಜಾಗಿದ್ದಾರೆ. ಮೊದಲ ಪಂದ್ಯದಲ್ಲಿ ಆತಿಥೇಯ ಪಾಕ್ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟವನ್ನು ನಡೆಸಲಿವೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆಬ್ರವರಿ 20 ರಂದು ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಪ್ಲೇಯಿಂಗ್ ಇಲೆವೆನ್ ಹಾಗೂ ಪಿಚ್ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿವೆ.
ಗುರುವಾರ ಮಧ್ಯಾಹ್ನ ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಲಿವೆ. ಈ ಗೆಲುವಿನ ಶುಭಾರಂಭ ಮಾಡುವ ಕನಸು ಟೀಮ್ ಇಂಡಿಯದ್ದಾಗಿದೆ. ಇನ್ನು ಸ್ಟಾರ್ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದು ನಿರೀಕ್ಷೆಗಳು ಹೆಚ್ಚಿವೆ. ಭಾರತ ಟ್ರೋಫಿ ಗೆಲ್ಲುವ ಹಾಟ್ ಫೆವರೀಟ್ ತಂಡಗಳಲ್ಲಿ ಒಂದಾಗಿದೆ.

ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಪಂದ್ಯದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿಗೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಆರಂಭಿಕರಾದ ರೋಹಿತ್ ಶರ್ಮಾ, ಶುಭಮನ್ ಗಿಲ್ ತಮ್ಮ ಸ್ಥಾನದಲ್ಲೇ ಆಡಲಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಸಹ ಮಿಡ್ಲ್ ಆರ್ಡರ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಗಾಯಕ್ಕೆ ತುತ್ತಾಗಿರುವ ರಿಷಭ್ ಪಂತ್ ಲಭ್ಯತೆಯ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಹೀಗಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಲಭಿಸುವ ಸಾಧ್ಯತೆ ಇದೆ.
ಆಲ್‌ರೌಂಡರ್ ರೂಪದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇನ್ನು ವರುಣ್ ಚಕ್ರವರ್ತಿ, ಕುಲದೀಪ್ ಯಾದವ್ ಒಂದೇ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ವೇಗದ ಬೌಲಿಂಗ್ ನೊಗವನ್ನು ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಹೊರುವ ಸಾಧ್ಯತೆ ಇದೆ.
ಭಾರತ-ಬಾಂಗ್ಲಾದೇಶ ಪಂದ್ಯದಲ್ಲಿ ಮಳೆ ಕಾಟ ನೀಡುವ ಸಾಧ್ಯತೆ ಇದೆ. ವರದಿಯ ಪ್ರಕಾರ, ಫೆಬ್ರವರಿ 20 ರಂದು ದುಬೈನಲ್ಲಿ ತಾಪಮಾನವು 24 ಡಿಗ್ರಿ ಇರಲಿದ್ದು, ಶೇಕಡಾ 35 ರಷ್ಟು ಮಳೆ ಆಗುವ ಸಾಧ್ಯತೆ ಇದೆ. ಗುರುವಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪಂದ್ಯ ನಡೆಯುವ ವೇಳೆ ಮಳೆ ಕಾಟ ನೀಡುವ ಸಾಧ್ಯತೆ ಇದೆ.

ದುಬೈನ ಗ ವೇೆಗದ ಬೌಲರ್‌ಗಳಿಗೆ ಕೊಂಚ ನೆರವಾಗುವ ಸಾಧ್ಯತೆ ಇದೆ. ಇನ್ನು ವರದಿಯ ಪ್ರಕಾರ ದುಬೈನಲ್ಲಿ ಎರಡು ಹೊಸ ಪಿಚ್‌ಗಳನ್ನು ನಿರ್ಮಿಸಲಾಗಿದೆ. ವರದಿಗಳನ್ನು ನಂಬುವುದಾದರೆ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯ ಹೊಸ ಪಿಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.